ನೀಟ್ : ದೌರ್ಜನ್ಯ ಖಂಡಿಸಿ ತರೀಕೆರೆ ಯುವ ಕಾಂಗ್ರೆಸ್‌ ಪ್ರತಿಭಟನೆ

KannadaprabhaNewsNetwork |  
Published : Jul 24, 2026, 02:15 AM IST
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿಸಿ ಪ್ರತಿಭಟನೆ ನಡೆಸಿದವರ ಮೇಲಿನ ದೌರ್ಜನ್ಯ ಖಂಡಿಸಿ ತರೀಕೆರೆ ಯುವ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ | Kannada Prabha

ಸಾರಾಂಶ

ತರೀಕೆರೆನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಖಂಡಿಸಿ ಹಾಗೂ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲಿನ ಲಾಠಿಚಾರ್ಜ್ ಮತ್ತು ದೌರ್ಜನ್ಯ ವಿರೋಧಿಸಿ ತರೀಕೆರೆ ಯುವ ಕಾಂಗ್ರೆಸ್ ನಿಂದ ಪಟ್ಟಣದ ಮಹಾತ್ಮ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ । ಮಹಾತ್ಮ ಗಾಂಧಿ ವೃತ್ತದಲ್ಲಿ ಪ್ರತಿಭಟನೆ

ಕನ್ನಡಪ್ರಭ ವಾರ್ತೆ ತರೀಕೆರೆ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಖಂಡಿಸಿ ಹಾಗೂ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲಿನ ಲಾಠಿಚಾರ್ಜ್ ಮತ್ತು ದೌರ್ಜನ್ಯ ವಿರೋಧಿಸಿ ತರೀಕೆರೆ ಯುವ ಕಾಂಗ್ರೆಸ್ ನಿಂದ ಪಟ್ಟಣದ ಮಹಾತ್ಮ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಚಿಕ್ಕಮಗಳೂರು ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಮನೋಜ್ ಕೃಷ್ಣಮೂರ್ತಿ, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ದೇಶದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಗಂಭೀರ ಪರಿಣಾಮ ಬೀರಿದೆ. ಈ ಪ್ರಕರಣದ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ಸಮಗ್ರ ಹಾಗೂ ಪಾರದರ್ಶಕ ತನಿಖೆ ನಡೆಸಬೇಕು. ಇದರ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ವಿದ್ಯಾರ್ಥಿಗಳ ಮೇಲೆ ನಡೆದ ಲಾಠಿಚಾರ್ಜ್ ಕುರಿತು ಸಮಗ್ರ ತನಿಖೆ ನಡೆಸಬೇಕು. ಶಾಂತಿಯುತವಾಗಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲೆ ಬಲಪ್ರಯೋಗ ನಡೆಸಿರುವುದು ಖಂಡನೀಯ. ಘಟನೆಯಲ್ಲಿ ಜವಾಬ್ದಾರರಾಗಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ತರೀಕೆರೆ ಯುವ ಕಾಂಗ್ರೆಸ್ ಅಧ್ಯಕ್ಷ ಧವನ್ ರಾಜ್ ಮಾತನಾಡಿ ತಮ್ಮ ನ್ಯಾಯಯುತ ಹಕ್ಕುಗಳಿಗಾಗಿ ಶಾಂತಿಯುತ ವಾಗಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲೆ ಬಲಪ್ರಯೋಗ ನಡೆಸಿರುವುದು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧ. ವಿದ್ಯಾರ್ಥಿಗಳ ಧ್ವನಿ ಹತ್ತಿಕ್ಕುವ ಪ್ರಯತ್ನ ಯುವ ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತದೆ ಎಂದರು.

ಪ್ರತಿಭಟನಾಕಾರರು ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಸಂಪೂರ್ಣ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯಕ್ಕೆ ಕಾರಣರಾದ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ತರೀಕೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಫಾರೂಕ್, ನಗರ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ವರ್ಮಾ, ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಬಾಲಾಜಿ ಹಾಗೂ ಚಂದ್ರನಾಯ್ಕ, ಸೇವಾದಳದ ಜಗದೀಶ್, ಇರ್ಷಾದ್, ಯುವ ಕಾಂಗ್ರೆಸ್ ಪದಾಧಿಕಾರಿಗಳು, ಕಾರ್ಯಕರ್ತರು ವಿದ್ಯಾರ್ಥಿಗಳು ಭಾಗವಹಿಸಿದ್ದರು

-

23ಕೆಟಿಆರ್.ಕೆ.4ಃ ತರೀಕೆರೆಯಲ್ಲಿ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿಸಿ ಪ್ರತಿಭಟನೆ ನಡೆಸಿದವರ ಮೇಲಿನ ದೌರ್ಜನ್ಯ ಖಂಡಿಸಿ ತರೀಕೆರೆ ಯುವ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ಏರ್ಪಡಿಸಲಾಗಿತ್ತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನೀಟ್‌ ಹೆಸರಿನಲ್ಲಿ ನಡೆಯುತ್ತಿರುವುದು ಟೂಲ್‌ಕಿಟ್‌ ರಾಜಕಾರಣ: ಸಿ.ಟಿ.ರವಿ
ಕಾಫಿನಾಡಿನಲ್ಲಿ ಶೇ.6ರಷ್ಟು ಮಾತ್ರ ಬಿತ್ತನೆ: ಒಣಗುತ್ತಿದೆ ಬಿತ್ತಿದ ಬೆಳೆ