ಬಜೆಟ್‌ನಲ್ಲಿ ಕೃಷಿ ನಿರ್ಲಕ್ಷ್ಯ: ರೈತ ಸಂಘ ಆರೋಪ

KannadaprabhaNewsNetwork |  
Published : Mar 14, 2025, 12:32 AM IST
ಗುಬ್ಬಿ ತಾಲ್ಲೂಕಿನ ಕಡಬ ಹೋಬಳಿಯ ಆಡಗೊಂಡನಹಳ್ಳಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಗ್ರಾಮ ಘಟಕ ಉದ್ಘಾಟಿಸಿದ ರೈತ ಸಂಘದ ಜಿಲ್ಲಾಧ್ಯಕ್ಷ ಎ.ಗೋವಿಂದರಾಜು ಹಾಗೂ ರೈತ ಸಂಘದ ತಾಲೂಕು ಪ್ರಧಾನ ಕಾರ್ಯದರ್ಶಿ ಸಿ ಜಿ ಲೋಕೇಶ್. | Kannada Prabha

ಸಾರಾಂಶ

ರಾಜ್ಯ ಸರ್ಕಾರ ಇಂದಿನ ಬಜೆಟ್ ನಲ್ಲಿ ಕೃಷಿ ಕ್ಷೇತ್ರಕ್ಕೆ ಶೇ 14 ರಷ್ಟು ಅನುದಾನ ಘೋಷಿಸಿ ಕೃಷಿ ಕ್ಷೇತ್ರವನ್ನು ನಿರ್ಲಕ್ಷಿಸಿದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಎ ಗೋವಿಂದರಾಜು ಅಸಮಧಾನ ವ್ಯಕ್ತಪಡಿಸಿದರು.

ಕನ್ನಡಪ್ರಭ ವಾರ್ತೆ ಗುಬ್ಬಿ

ರಾಜ್ಯ ಸರ್ಕಾರ ಇಂದಿನ ಬಜೆಟ್ ನಲ್ಲಿ ಕೃಷಿ ಕ್ಷೇತ್ರಕ್ಕೆ ಶೇ 14 ರಷ್ಟು ಅನುದಾನ ಘೋಷಿಸಿ ಕೃಷಿ ಕ್ಷೇತ್ರವನ್ನು ನಿರ್ಲಕ್ಷಿಸಿದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಎ ಗೋವಿಂದರಾಜು ಅಸಮಧಾನ ವ್ಯಕ್ತಪಡಿಸಿದರು.ತಾಲೂಕಿನ ಕಡಬ ಹೋಬಳಿಯ ಆಡಗೊಂಡನಹಳ್ಳಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಗ್ರಾಮ ಘಟಕ ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರಗಳು ಕೃಷಿ ಕ್ಷೇತ್ರವನ್ನು ಆದ್ಯತಾ ವಲಯವಾಗಿ ಪರಿಗಣಿಸದೆ ರೈತರನ್ನು ನಿರ್ಲಕ್ಷಿಸುತ್ತಿವೆ. ಈ ದೇಶದಲ್ಲಿ ಶೇ70 ರಷ್ಟು ಜನರು ಕೃಷಿ ಕ್ಷೇತ್ರವನ್ನೇ ನಂಬಿ ಕೆಲಸ ಮಾಡುತ್ತಿದ್ದಾರೆ. ಯುವಕರು ರೈತ ಸಂಘದ ವಿಚಾರಧಾರೆಗಳನ್ನು ಅರಿತುಕೊಂಡು ಕರ್ನಾಟಕ ರಾಜ್ಯ ರೈತ ಸಂಘವನ್ನು ಬಲಪಡಿಸಬೇಕು. ಹೋರಾಟ ಮಾಡುವ ಮೂಲಕ ನಮ್ಮ ಹಕ್ಕುಗಳನ್ನು ನಾವು ಕೇಳಿ ಪಡೆದುಕೊಳ್ಳಬೇಕು. ಇನ್ನೂ ಕೇಂದ್ರ ಸರ್ಕಾರ ರೈತರು ಮಾಡಿದ ಹೋರಾಟದ ಫಲವಾಗಿ ಕೃಷಿ ಕಾಯ್ದೆಗಳನ್ನು ಹಿಂಪಡೆದುಕೊಂಡಿತ್ತು. ಆದರೆ ರಾಜ್ಯ ಸರ್ಕಾರ ಕೃಷಿ ಕಾಯ್ದೆಗಳನ್ನು ಹಿಂಪಡೆಯದೆ ಉದ್ಧಟತನ ತೋರುತ್ತಿದೆ ಎಂದರು. ಈ ಸಂದರ್ಭದಲ್ಲಿ ರೈತ ಸಂಘದ ತಾಲೂಕು ಪ್ರಧಾನ ಕಾರ್ಯದರ್ಶಿ ಸಿ ಜಿ ಲೋಕೇಶ್, ಹೋಬಳಿ ಘಟಕದ ಅಧ್ಯಕ್ಷ ಯತೀಶ್, ಗರುಚನ್ನಬಸಪ್ಪ, ಬಾಂಬೆ ಬಸವರಾಜು, ಪುಟ್ಟಸ್ವಾಮಿ, ಉಮೇಶ್, ಶ್ರೀನಿವಾಸ್, ರಂಗರಾಜು, ಸುರೇಶ್ ಗ್ರಾಮ ಘಟಕದ ಪದಾಧಿಕಾರಿಗಳು ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''