ಕರ್ತವ್ಯದಲ್ಲಿ ನಿರ್ಲಕ್ಷ್ಯ: ಅಧಿಕಾರಿಗಳಿಗೆ ನೋಟಿಸ್

KannadaprabhaNewsNetwork |  
Published : Aug 14, 2026, 02:30 AM IST
(ಪೋಟೋ-13ಬಿಕೆಟಿ9, ಕೋಳಿ ಸಾಕಾಣಿಕೆ, ಜಾನುವಾರು ಕೊಟ್ಟಿಗೆ ಸೇರಿದಂತೆ ವಿವಿಧ ಕೃಷಿ ಮತ್ತು ಜೀವನೋಪಾಯ ಚಟುವಟಿಕೆಗಳನ್ನು ಒಂದೇ ಜಮೀನಿನಲ್ಲಿ ಕೈಗೊಂಡಿರುವುದನ್ನು ವೀಕ್ಷಿಸಿದರು. ) | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಬಾಗಲಕೋಟೆಜಿಲ್ಲೆಯ ಗುಳೇದಗುಡ್ಡ ತಾಲೂಕಿನ ವಿವಿಧ ಗ್ರಾಮಗಳಿಗೆ ಜಿಪಂ ಸಿಇಒ ಗಜಾನನ ಬಾಲೆ ಬುಧವಾರ ಭೇಟಿ ನೀಡಿದ ಸಂದರ್ಭದಲ್ಲಿ ಕುಡಿಯುವ ನೀರಿನ ದುರ್ಬಳಕೆ, ಸ್ವಚ್ಛತೆ ಕೊರತೆ ಹಾಗೂ ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಿದ ಹಲವು ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ಕಾರಣ ಕೇಳಿ ನೋಟಿಸ್ ನೀಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಜಿಲ್ಲೆಯ ಗುಳೇದಗುಡ್ಡ ತಾಲೂಕಿನ ವಿವಿಧ ಗ್ರಾಮಗಳಿಗೆ ಜಿಪಂ ಸಿಇಒ ಗಜಾನನ ಬಾಲೆ ಬುಧವಾರ ಭೇಟಿ ನೀಡಿದ ಸಂದರ್ಭದಲ್ಲಿ ಕುಡಿಯುವ ನೀರಿನ ದುರ್ಬಳಕೆ, ಸ್ವಚ್ಛತೆ ಕೊರತೆ ಹಾಗೂ ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಿದ ಹಲವು ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ಕಾರಣ ಕೇಳಿ ನೋಟಿಸ್ ನೀಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೆಲವಡಿ ಗ್ರಾಪಂ ಲಿಂಗಾಪುರ ಗ್ರಾಮದ ಅರಣ್ಯ ಪ್ರದೇಶದಲ್ಲಿರುವ ಕೆರೆ ಪರಿಶೀಲಿಸಿದ ಸಂದರ್ಭದಲ್ಲಿ ಕೆರೆಯ ಗಡಿ ಗುರುತಿಸುವಿಕೆ ಹಾಗೂ ಅಭಿವೃದ್ಧಿ ಕಾರ್ಯಗಳು ಸಮರ್ಪಕವಾಗಿ ಕೈಗೊಳ್ಳದಿರುವುದನ್ನು ಗಮನಿಸಿದ ಅವರು, ಸಂಬಂಧಿಸಿದ ಪಿಡಿಒ, ತಾಂತ್ರಿಕ ಸಂಯೋಜಕ ಹಾಗೂ ಸಹಾಯಕ ತಾಂತ್ರಿಕ ಅಭಿಯಂತರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಕಾರಣ ಕೇಳಿ ನೋಟಿಸ್ ನೀಡುವಂತೆ ಸೂಚಿಸಿದರು. ಕೆರೆಗೆ ಸಮಗ್ರ ಯೋಜನೆ ರೂಪಿಸಿ, ಸೂಕ್ತ ಗಡಿ ವ್ಯವಸ್ಥೆ ಕಲ್ಪಿಸುವುದರ ಜತೆಗೆ ಇನ್ಲೆಟ್ ಮತ್ತು ಔಟಲೆಟ್ ಕಾಲುವೆಗಳನ್ನು ವೈಜ್ಞಾನಿಕವಾಗಿ ನಿರ್ಮಿಸುವಂತೆ ನಿದೇರ್ಶನ ನೀಡಿದರು.

ವಿಬಿ ಜಿ-ರಾಮ ಜಿಯಡಿ ಕೈಗೊಂಡ ಕಾಮಗಾರಿ ಸ್ಥಳದಲ್ಲಿ ಕಾರ್ಮಿಕರೊಂದಿಗೆ ಮಾತನಾಡಿ, ಸಮಸ್ಯೆಗಳನ್ನು ಆಲಿಸದ ಸಿಇಒ ಅವರು ಕಾಮಗಾರಿ ಸ್ಥಳದಲ್ಲಿ ಕಾರ್ಮಿಕರ ಮೂಲಭೂತ ಸೌಲಭ್ಯಗಳಲ್ಲಿ ಯಾವುದೇ ರಾಜಿ ಇರಬಾರದು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ತೋಗಣಸಿ ಗ್ರಾಮದಲ್ಲಿ ಜೆಜೆಎಂ ಕಾಮಗಾರಿ ಪರಿಶೀಲನೆ ಸಂದರ್ಭದಲ್ಲಿ ಕುಡಿಯುವ ನೀರು ಅನಗತ್ಯವಾಗಿ ಪೋಲಾಗುತ್ತಿರುವುದು ಗಮನಕ್ಕೆ ಬಂದಿತು. ನೀರು ಪೋಲು ಮಾಡುತ್ತಿರುವ ಮನೆಗಳು ಹಾಗೂ ವ್ಯಕ್ತಿಗಳನ್ನು ಗುರುತಿಸಿ ನಿಯಮಾನುಸಾರ ನೋಟಿಸ್ ನೀಡಲು ಸೂಚಿಸಿದರು. ಗ್ರಾಮಸ್ಥರಿಗೆ ನೀರಿನ ಮಿತ ಬಳಕೆ ಮತ್ತು ಸಂರಕ್ಷಣೆ ಕುರಿತು ವ್ಯಾಪಕ ಜಾಗೃತಿ ಮೂಡಿಸುವ ಕೆಲಸವಾಗಬೇಕೆಂದು ತಿಳಿಸಿದರು. ಗ್ರಾಮದಲ್ಲಿ ಗ್ರಾಮ ಸಂಚಾರ ಕೈಗೊಂಡಾಗ ಚರಂಡಿಗಳು ತ್ಯಾಜ್ಯದಿಂದ ತುಂಬಿರುವುದು ಹಾಗೂ ಹಲವು ಪ್ರದೇಶಗಳಲ್ಲಿ ಸ್ವಚ್ಛತಾ ಕಾರ್ಯ ಸಮರ್ಪಕವಾಗಿ ನಡೆಯದಿರುವುದು ಕಂಡುಬಂದಿತು. ಪರಿಶಿಷ್ಟ ಜಾತಿ, ಪಂಗಡದ ಕಾಲೋನಿಗಳಲ್ಲಿ ಹಲವು ದಿನಗಳಿಂದ ಸ್ವಚ್ಛತೆ ಕೈಗೊಳ್ಳದಿರುವ ಅಧಿಕಾರಿಗಳ ಕಾರ್ಯವೈಖರಿ ಕಂಡು ಅಸಮಾಧಾನ ವ್ಯಕ್ತಪಡಿಸಿದರು. ಪಿಡಿಒಗಳು ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸದೇ ಇರುವ ಬಗ್ಗೆ ಸಾರ್ವಜನಿಕರ ದೂರುಗಳು ಹಿನ್ನಲೆಯಲ್ಲಿ ನೋಟಿಸ್ ನೀಡುವಂತೆ ಸೂಚಿಸಿದರು.ಆರೋಗ್ಯ ಕೇಂದ್ರದಲ್ಲಿ ವೈದ್ಯರು ಇಲ್ಲದಿರುವುದನ್ನು ಕಂಡು ದೂರವಾಣಿ ಮೂಲಕ ಸಂಪರ್ಕಿಸಿ ಮಾಹಿತಿ ಪಡೆದರು. ವೈದ್ಯರು ನಾಲ್ಕು ಆರೋಗ್ಯ ಕೇಂದ್ರಗಳ ಹೆಚ್ಚುವರಿ ಜವಾಬ್ದಾರಿ ಹೊಂದಿರುವುದಾಗಿ ತಿಳಿಸಿದ ಹಿನ್ನೆಲೆಯಲ್ಲಿ, ವೈದ್ಯರು ಯಾವ ದಿನ ಮತ್ತು ಯಾವ ಸಮಯದಲ್ಲಿ ಯಾವ ಕೇಂದ್ರದಲ್ಲಿ ಲಭ್ಯವಿರುತ್ತಾರೆ ಎಂಬುದನ್ನು ಸಾರ್ವಜನಿಕರಿಗೆ ಸ್ಪಷ್ಟವಾಗಿ ತಿಳಿಸುವಂತೆ ಕರ್ತವ್ಯ ವೇಳಾಪಟ್ಟಿಯನ್ನು ಪ್ರದಶರ್ಿಸಲು ಸೂಚಿಸಿದರು. ಆಸ್ಪತ್ರೆಯಲ್ಲಿ ಸ್ವಚ್ಛತೆ ಮತ್ತು ನೈರ್ಮಲ್ಯ ಕಾಪಾಡಲು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

ಕೆಲವಡಿ ಪಶುಪಾಲನಾ ಕೇಂದ್ರ ಹಾಗೂ ಆಯುಷ್ ಕೇಂದ್ರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸ್ವಚ್ಛತೆಯ ಕೊರತೆ ಹಾಗೂ ಮೂಲಭೂತ ಸೌಲಭ್ಯಗಳ ಅಭಾವ, ಕನಿಷ್ಟ ಬೆಳಕಿನ ವ್ಯವಸ್ಥೆಯೂ ಇಲ್ಲದಿರುವುದನ್ನು ಗಮನಿಸಿ ಸಂಬಂಧಿಸಿದ ಅಧಿಕಾರಿಗಳಿಗೆ ಶೋಕಾಸ್ ನೋಟಿಸ್ ಜಾರಿಗೊಳಿಸಲು ಸೂಚಿಸಿ, ತಕ್ಷಣ ಸ್ವಚ್ಛತೆ ಹಾಗೂ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸುವಂತೆ ನಿರ್ದೇಸಿದರು.

ಬಿಸಿಎಂ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಬಾಲಕರ ವಸತಿ ನಿಲಯಗಳಿಗೆ ಭೇಟಿ ವಾರ್ಡನ್ಗಳಿಗೆ ಪ್ರತಿದಿನ ವಿದ್ಯಾರ್ಥಿಗಳ ಅಧ್ಯಯನ ಚಟುವಟಿಕೆಗಳ ಮೇಲೆ ಗಮನಹರಿಸಿ ತರಗತಿಗಳನ್ನು ನಡೆಸುವಂತೆ ಸೂಚಿಸಿದರು.

ಭೇಟಿ ಸಮಯದಲ್ಲಿ ಕಾರ್ಯನಿರ್ವಾಹಕ ಅಧಿಕಾರಿ ಸತೀಶ ಮಾಕಂಡ, ವಿಬಿ ಜಿ-ರಾಮ ಜಿ ಯೋಜನೆಯ ಸಹಾಯಕ ನಿರ್ದೇಶಕ ರಾಮಚಂದ್ರ ಮೇತ್ರಿ ಸೇರಿ ಡಿಐಇಸಿ, ತಾಂತ್ರಿಕ ಸಂಯೋಜಕರು, ಸಹಾಯಕ ತಾಂತ್ರಿಕ ಅಭಿಯಂತರು ಹಾಗೂ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು. 2 ಎಕರೆ ಜಮೀನಿನಲ್ಲಿ ಉತ್ತಮ ಆದಾಯ ಗಳಿಸಿದ ರೈತ: ಸಿಇಒ ಮೆಚ್ಚುಗೆಸರ್ಕಾರದ ವಿವಿಧ ಯೋಜನೆಗಳನು ಸಮರ್ಪಕವಾಗಿ ಬಳಸಿಕೊಂಡು ಕೇವಲ 2 ಎಕರೆ ಜಮೀನಿನಲ್ಲಿ ವರ್ಷಕ್ಕೆ 9 ರಿಂದ 10 ಲಕ್ಷ ಆದಾಯ ಗಳಿಸುತ್ತಿರುವ ಇಂಜಿನವಾರಿ ಗ್ರಾಮದ ರೈತ ತಿಪ್ಪಣ್ಣ ಗೌಡರ ಅವರ ಸಾಧನೆಯನ್ನು ಜಿ.ಪಂ ಸಿಇಒ ಗಜಾನನ ಬಾಲೆ ಮೆಚ್ಚುಗೆ ವ್ಯಕ್ತಪಡಿಸಿದರು. ರೈತನ ಜಮೀನಿಗೆ ಭೇಟಿ ನೀಡಿದ ಸಂದರ್ಭದಲ್ಲಿ ವಿಬಿಜಿ-ರಾಮ ಜಿ ಹಾಗೂ ಎನ್ಆರ್.ಎಲ್.ಎಂ ಯೋಜನೆಗಳ ಸೌಲಭ್ಯಗಳನ್ನು ಬಳಸಿಕೊಂಡು ಕೈಗೊಂಡಿರುವ ವಿವಿಧ ಚಟುವಟಿಕೆಗಳನ್ನು ಪರಿಶೀಲಿಸಿದರು. ಡ್ರ್ಯಾಗನ್ ಫ್ರೂಟ್ಸ್, ಕೋಳಿ ಸಾಕಣೆ, ಜೇನು ಸಾಕಣೆ, ಮೇಕೆ ಸಾಕಣೆ, ಜಾನುವಾರು ಕೊಟ್ಟಿಗೆ ಹಾಗೂ ವರ್ಮ ಕಾಂಪೋಸ್ಟ್ ಸೇರಿದಂತೆ ವಿವಿಧ ಕೃಷಿ ಮತ್ತು ಜೀವನೋಪಾಯ ಚಟುವಟಿಕೆಗಳನ್ನು ಒಂದೇ ಜಮೀನಿನಲ್ಲಿ ಕೈಗೊಂಡಿರುವುದನ್ನು ವೀಕ್ಷಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಾವಿನಲ್ಲೂ ಒಂದಾದ ತಾಯಿ-ಮಗ
ಇಂಧನ ಉಳಿತಾಯಕ್ಕೆ ಶಾಸಕರ ದೃಢ ಸಂಕಲ್ಪ!