ನೇಹಾ ಹಿರೇಮಠ ಕೊಲೆಗಾರನಿಗೆ ಗಲ್ಲು ಶಿಕ್ಷೆ ವಿಧಿಸಲು ಆಗ್ರಹ

KannadaprabhaNewsNetwork |  
Published : Apr 21, 2024, 02:20 AM ISTUpdated : Apr 21, 2024, 02:21 AM IST
ಎಬಿವಿಪಿ ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಅವರಿಗೆ ಮನವಿ ಸಲ್ಲಿಸಲಾಯಿತು | Kannada Prabha

ಸಾರಾಂಶ

ವಿಜಯಪುರ: ಹುಬ್ಬಳ್ಳಿಯ ಕಾಲೇಜಿನ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಮನವಿ ನಗರದ ಗಾಂಧಿವೃತ್ತದ ಮೂಲಕ ಬೃಹತ್ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಕನ್ನಡಪ್ರಭ ವಾರ್ತೆ ವಿಜಯಪುರ

ಹುಬ್ಬಳ್ಳಿಯ ಕಾಲೇಜಿನ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಮನವಿ ನಗರದ ಗಾಂಧಿವೃತ್ತದ ಮೂಲಕ ಬೃಹತ್ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.ರಾಷ್ಟ್ರೀಯ ಕಲಾ ಮಂಚ ಪ್ರಾಂತ ಸಹ ಮುಖ್ಯಸ್ಥೆ ಸುರೇಖಾ ಕುಲಕರ್ಣಿ ಮಾತನಾಡಿ, ಶಾಲಾ ಕಾಲೇಜುಗಳು ಜ್ಞಾನದ ದೇಗುಲಗಳು. ಇಂತಹ ದೇಗುಲದಲ್ಲಿ ಹಾಡಹಗಲೇ ವಿದ್ಯಾರ್ಥಿನಿ ನೇಹಾ ಹಿರೇಮಠ ಅವಳನ್ನು ಭೀಕರ ಹತ್ಯೆ ಮಾಡಿರುವ ಘಟನೆ ನಿಜಕ್ಕೂ ವಿದ್ಯಾರ್ಥಿ ಸಮುದಾಯದಲ್ಲಿ ಭಯದ ವಾತಾವರಣ ಮೂಡಿಸಿದಂತಾಗಿದೆ. ಕೆ.ಎಲ್.ಇ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಎಂಸಿಎ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿ ನೇಹಾ ಹಿರೇಮಠ ಅವಳನ್ನು ಜಿಹಾದಿ ಕ್ರೂರ ಮನಸ್ಥಿತಿಯ ಫಯಾಜ್ ಎಂಬಾತ ಲವ್ ಜಿಹಾದಿಗಾಗಿ ಅವಳನ್ನು ಪ್ರೀತಿಸುವಂತೆ ಒತ್ತಾಯಿಸುತ್ತಿದ್ದ. ಈ ಪ್ರೀತಿಯನ್ನು ವಿದ್ಯಾರ್ಥಿನಿ ನಿರಾಕರಿಸಿದಕ್ಕಾಗಿ ಆಕೆಯ ಕಾಲೇಜಿಗೆ ಅಕ್ರಮವಾಗಿ ಪ್ರವೇಶಿಸಿ ಚಾಕುವಿನಿಂದ 9 ಬಾರಿ ಇರಿದು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಕಾಲೇಜಿನ ಒಳಗೆ ಬಂದು ವಿದ್ಯಾರ್ಥಿನಿಯನ್ನು ಹತ್ಯೆ ಮಾಡಲು ಸಾಧ್ಯವಾಗಿರಬೇಕಾದರೆ ಕೊಲೆಗಾರನಿಗೆ ಕಾನೂನಿನ ಯಾವುದೇ ಭಯವೂ ಇಲ್ಲದೇ ರಾಜಾರೋಷವಾಗಿ ಕೃತ್ಯ ಮಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದರೆ ನಮ್ಮ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಷ್ಟು ಕುಸಿದು ಹೋಗಿದೆ ಎನ್ನುವುದು ಸ್ಪಷ್ಟವಾಗಿ ತಿಳಿಯುವಂತಾಗಿದೆ. ಈ ಘಟನೆಯಿಂದ ರಾಜ್ಯದ ವಿದ್ಯಾರ್ಥಿ ಸಮುದಾಯ ಭಯಭೀತಗೊಂಡಿದೆ. ಪೊಲೀಸರು ಕೂಡಲೇ ಸೂಕ್ತ ತನಿಖೆಯನ್ನು ಕೈಗೊಂಡು, ಆರೋಪಿಗೆ ಉಗ್ರ ಶಿಕ್ಷೆ ಆಗುವ ಹಾಗೆ ಮಾಡಿ ವಿದ್ಯಾರ್ಥಿನಿಯ ಕುಂಟುಂಬಕ್ಕೆ ನ್ಯಾಯ ಒದಗಿಸಬೇಕಾಗಿದೆ. ಜತೆಗೆ ರಾಜ್ಯಾದ್ಯಂತ ಪೊಲೀಸರು ಶಾಲಾ ಕಾಲೇಜುಗಳ ಬಳಿ ಮಫ್ತಿಯಲ್ಲಿ ಕಾರ್ಯನಿರ್ವಹಿಸಿ ಸಂಭಾವ್ಯ ಘಟನೆಗಳನ್ನು ತಡೆಯಲು ಪ್ರಯತ್ನಿಸಬೇಕು ಎಂದರು.

ಜಿಲ್ಲಾ ಸಂಚಾಲಕ ಮಂಜುನಾಥ ಹಳ್ಳಿ ಮಾತನಾಡಿ, ರಾಜ್ಯ ಸರ್ಕಾರ ದಿನದಿಂದ ದಿನಕ್ಕೆ ಹದಗೆಡುತ್ತಿರುವ ಕಾನೂನು ಸುವ್ಯವಸ್ಥೆಯ ಬಗ್ಗೆ ಗಂಭೀರವಾಗಿ ಚಿಂತನೆ ನಡೆಸಿ ಕಾರ್ಯ ಪ್ರವೃತ್ತರಾಗಬೇಕು. ಸರ್ಕಾರಗಳು ಇಂತಹ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕು. ಕಾನೂನಿನ ಭಯ ಇಲ್ಲದಾಗ ಮಾತ್ರ ಇಂತಹ ಘಟನೆಗಳು ನಡೆಯಲು ಸಾಧ್ಯ. ಕಾಲೇಜು ಕ್ಯಾಂಪಸ್‌ಗಳು ಸುರಕ್ಷತೆಯ ಕೇಂದ್ರಗಳಾಗಬೇಕು. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಗಮನಹರಿಸಬೇಕು ಹಾಗೂ ಉನ್ನತ ಮಟ್ಟದ ತನಿಖೆ ಮಾಡಬೇಕು. ಅಗತ್ಯ ಎಂದು ಕಂಡರೆ ಪ್ರಕರಣದ ತನಿಖೆಯನ್ನು ಸಿಬಿಐ ತನಿಖೆಗೆ ಹಸ್ತಾಂತರ ಮಾಡಬೇಕು. ಆರೋಪಿಗೆ ಶಿಕ್ಷೆಯನ್ನು ಒದಗಿಸಲು ಸರ್ಕಾರಕ್ಕೆ ಶಕ್ತಿ ಸಾಮರ್ಥ್ಯ ಇಲ್ಲವೆಂದರೆ ವಿದ್ಯಾರ್ಥಿ ಪರಿಷತ್ ಕೈಯಲ್ಲಿ ತಮ್ಮ ಆಡಳಿತವನ್ನು ಕೊಡಿ ತಕ್ಷಣವೇ ಇಂತಹ ವ್ಯಕ್ತಿಗೆ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.

ಈ ಸಂಧರ್ಭದಲ್ಲಿ ಸಿದ್ದು ಪತ್ತಾರ, ಪ್ರವೀಣ ಬಿರಾದಾರ, ಮಹಾಂತೇಶ ಕಂಬಾರ, ಸಂದೀಪ ಅರಳಗುಂಡಿ, ಶ್ರವಣ ಕಾತ್ರಾಳ, ರೇಖಾ ಮಾಳಿ, ಸುಜ್ಞಾತಾ ಕುಲಕರ್ಣಿ, ಪೂಜಾ ವೀರಶೆಟ್ಟಿ, ಜ್ಯೋತಿ ಸಜ್ಜನ, ಐಶ್ವರ್ಯ ಆಸಂಗಿ, ಪವಿತ್ರಾ, ಬಾಲಾಜಿ ಬಿರಾದಾರ, ಶಿವಾಜಿ, ದುಂಡಪ್ಪ, ರಮೇಶ, ಶ್ರೀಕಾಂತ, ಬಾಬುರಾವ, ಸಿದ್ದಾರ್ಥ, ಪ್ರವೀಣ, ಸುಮಾರು 200ಕ್ಕೂ ಹೆಚ್ಚು ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಹಾಜರಿದ್ದರು.

PREV

Recommended Stories

ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
ವಿಠಲಗೌಡ ತಲೆಬುರುಡೆ ತಂದ ಬಂಗ್ಲೆಗುಡ್ಡೆಯಲ್ಲಿ ಇಂದು ಮಹಜರು?