ಕನ್ನಡಪ್ರಭ ವಾರ್ತೆ ಉಡುಪಿ
ಆತನನ್ನು ವಿಚಾರಣೆಗೆ ಬುಧವಾರ ಜಿಲ್ಲಾ 2ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ಹಾಜರು ಪಡಿಸಿದಾಗ ಆತನ ವಕೀಲರು ತನ್ನ ವಕಾಲತ್ತನ್ನು ಹಿಂಪಡೆಯುತ್ತಿರುವುದಾಗಿ ಹೇಳಿದ್ದರು. ಅದರಂತೆ ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಲಾಗಿತ್ತು.
ಗುರುವಾರ ಹಿರಿಯಡ್ಕ ಜೈಲಿನಿಂದ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಈ ವೇಳೆ ಆರೋಪಿಯು ತನ್ನ ಪರ ವಕಾಲತ್ತು ನಡೆಸಲು ಬೆಂಗಳೂರಿನ ಶ್ರೀಧರ್ ಎಂಬವರನ್ನು ನೇಮಕ ಮಾಡಿದ್ದು, ಮುಂದಿನ ದಿನಾಂಕದಂದು ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು ಎಂದು ತಿಳಿಸಿದನು. ಅದರಂತೆ ನ್ಯಾಯಾಧೀಶ ಸಮಿವುಲ್ಲಾ ಅವರು ಮುಂದಿನ ವಿಚಾರಣೆಯನ್ನು ಡಿ.11ಕ್ಕೆ ಮುಂದೂಡಿ ಆದೇಶ ನೀಡಿದರು.ಅಲ್ಲದೇ ಆರೋಪಿಯನ್ನು ಮತ್ತೆ ಬೆಂಗಳೂರಿನ ಪರಪ್ಪನ ಆಗ್ರಹಾರ ಜೈಲಿನಿಂದ ಉಡುಪಿಗೆ ಕರೆ ತರುವ ಬದಲು ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರುಪಡಿಸುವಂತೆ ನ್ಯಾಯಾಧೀಶರು ತಿಳಿಸಿದರು. ಅದರಂತೆ ಆರೋಪಿಯನ್ನು ಗುರುವಾರ ಮತ್ತೆ ವಾಪಾಸ್ಸು ಬೆಂಗಳೂರು ಪರಪ್ಪರನ ಅಗ್ರಹಾರ ಜೈಲಿಗೆ ಕರೆದೊಯ್ಯಲಾಯಿತು.