ನೆಲಮಂಗಲ: ಧರ್ಮಸ್ಥಳ ಕ್ಷೇತ್ರದ ಮೇಲಿನ ಅಪಪ್ರಚಾರ ಖಂಡಿಸಿ ಬಿಜೆಪಿ ಪಕ್ಷದಿಂದ ಧರ್ಮಸ್ಥಳ ಚಲೋ ರ್ಯಾಲಿಯಲ್ಲಿ 300ಕ್ಕೂ ಹೆಚ್ಚು ಕಾರುಗಳಲ್ಲಿ ಮುಖಂಡರು ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಮದು ಬಿಜೆಪಿ ತಾಲೂಕು ಅಧ್ಯಕ್ಷ ಜಗದೀಶ್ ಚೌಧರಿ ತಿಳಿಸಿದರು.
ಅನಾಮಿಕನಿಗೆ ಗಲ್ಲು ಶಿಕ್ಷೆ: ಯಾರೋ ಅನಾಮಿಕ ನೀಡಿದ ದೂರು ಆಧರಿಸಿ, ತನಿಖೆ ಕೈಗೊಂಡು ಧರ್ಮಸ್ಥಳಕ್ಕೆ ಕಳಂಕ ಹಚ್ಚುವ ಕೆಲಸ ಮಾಡಲಾಗಿದೆ. ಈಗಾಗಲೇ ಅನಾಮಿಕ ಯಾರೆಂದು ಬಹಿರಂಗ ಪಡಿಸಲಾಗಿದೆ. ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟು ಮಾಡಿದ್ದ ಅನಾಮಿಕ ಚಿನ್ನಯ್ಯನಿಗೆ ನ್ಯಾಯಾಲಯ ಗಲ್ಲುಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿದರು.
ಮಾಜಿ ಶಾಸಕ ಎಂ.ವಿ.ನಾಗರಾಜು ಮಾತನಾಡಿ, ಧರ್ಮಸ್ಥಳ ಕೇವಲ ಒಂದು ಸ್ಥಳವಲ್ಲ ಕೋಟ್ಯಂತರ ಭಕ್ತರ ಪುಣ್ಯಕ್ಷೇತ್ರ. ಮಂಜುನಾಥಸ್ವಾಮಿ ಹಾಗೂ ಧರ್ಮಾಧಿಕಾರಿಗಳ ಬಗ್ಗೆ ಅವಹೇಳನಕಾರಿ ಹಾಗೂ ಅಪಪ್ರಚಾರ ನಡೆಸುತ್ತಿದ್ದು ಬೇಸರದ ಸಂಗತಿ. ಧರ್ಮಾಧಿಕಾರಿಗಳಿಗೆ ಶಕ್ತಿ ತುಂಬಲು ಬಿಜೆಪಿ ಪಕ್ಷದಿಂದ ಧರ್ಮಸ್ಥಳ ಚಲೋ ಹಮ್ಮಿಕೊಳ್ಳಲಾಗಿದೆ ಎಂದರು.ಸಭೆಯಲ್ಲಿ ಮುಖಂಡ ಸಪ್ತಗಿರಿ ಶಂಕರನಾಯಕ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಎಸ್.ಮಲ್ಲಯ್ಯ, ರಾಹುಲ್‌ಗೌಡ, ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಬೃಂಗೇಶ್, ತಾಲೂಕು ಪ್ರಧಾನ ಕಾರ್ಯದರ್ಶಿ ಸತೀಶ್, ಮಹಿಳಾ ಮೋರ್ಚಾ ಅಧ್ಯಕ್ಷೆ ಮಂಜುಳಾ, ಎಸ್ಸಿ ಮೋರ್ಚಾ ತಾಲೂಕು ಅಧ್ಯಕ್ಷ ಉಮೇಶ್, ಎಸ್ಟಿಮೋರ್ಚಾ ಅಧ್ಯಕ್ಷ ಕೆಂಪರಾಮಯ್ಯ, ಒಬಿಸಿ ಮೋರ್ಚಾ ಅಧ್ಯಕ್ಷ ಲೋಕೇಶ್, ಯುವ ಮೋರ್ಚಾ ಅಧ್ಯಕ್ಷ ಮಹೇಶ್, ನಗರಸಭೆ ಹೆಚ್ಚುವರಿ ಸದಸ್ಯ ಮುನಿರಾಜು, ಕೃಪಾನಂದ್, ಅಂಜನಮೂರ್ತಿ, ರಾಮಮೂರ್ತಿ, ಪುರಸಭೆ ಮಾಜಿ ಅಧ್ಯಕ್ಷ ರವಿ, ಮುಖಂಡ ಅಶ್ವತ್ಥ್, ಉಮೇಶ್, ರಮೇಶ್, ಅರುಣ್‌ಗೌಡ, ಡಿ.ಸಿದ್ದರಾಜು, ಗಿರೀಶ್, ಚಂದ್ರಶೆಟ್ಟಿ, ರಾಜಮ್ಮಪ್ರಕಾಶ್, ಸುಬ್ರಹ್ಮಣಿ, ಶೀಲಾ, ಸುಮ, ಶಾಂತಕುಮಾರಿ ಮತ್ತಿತರರು ಉಪಸ್ಥಿತರಿದ್ದರು.
ಪೊಟೊ-29ಕೆಎನ್ಎಲ್ ಎಮ್ 1-ನೆಲಮಂಗಲದಲ್ಲಿ ತಾಲೂಕು ಬಿಜೆಪಿ ಅಧ್ಯಕ್ಷ ಜಗದೀಶ್ ಚೌಧರಿ ಧರ್ಮಸ್ಥಳ ಚಲೋ ಕಾರ್ಯಕ್ರಮ ಕುರಿತು ಮುಖಂಡರ ಸಭೆಯಲ್ಲಿ ಮಾತನಾಡಿದರು.