ನೆಲಮಂಗಲ ತಾಲೂಕಿನ ಜೆಡಿಎಸ್ ಪ್ರಭಾವಿ ಮುಖಂಡರನ್ನು ಕಾಂಗ್ರೆಸ್ ಪಕ್ಷದ ಬಾವುಟ ನೀಡುವುದರ ಮೂಲಕ ಬರಮಾಡಿಕೊಂಡರು.
ಕನ್ನಡಪ್ರಭ ವಾರ್ತೆ ದಾಬಸ್‍ಪೇಟೆ
ಕಾಂಗ್ರೆಸ್ ಪಕ್ಷದ ತತ್ವ, ಸಿದ್ಧಾಂತ ನಾಯಕತ್ವವನ್ನು ಮೆಚ್ಚಿ ಬರುವವರನ್ನು ಕಾಂಗ್ರೆಸ್ ಪಕ್ಷ ಸದಾ ಸ್ವಾಗತಿಸುತ್ತದೆ. ಜನಸೇವೆ ಮಾಡಲು ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ತಿಳಿಸಿದರು.ನೆಲಮಂಗಲ ತಾಲೂಕಿನ ಜೆಡಿಎಸ್ ಪ್ರಭಾವಿ ಮುಖಂಡರನ್ನು ಕಾಂಗ್ರೆಸ್ ಪಕ್ಷದ ಬಾವುಟ ನೀಡುವುದರ ಮೂಲಕ ಬರಮಾಡಿಕೊಂಡು ಮಾತನಾಡಿದರು.ನೆಲಮಂಗಲ ವಿಧಾನಸಭಾ ಕ್ಷೇತ್ರವನ್ನು ಬಿಜೆಪಿ ಶಾಸಕರು ಐದು ವರ್ಷ, ಜೆಡಿಎಸ್ ಶಾಸಕರು ಹತ್ತು ವರ್ಷ ಅಧಿಕಾರದಲ್ಲಿದ್ದರೂ ಅಭಿವೃದ್ಧಿಯಲ್ಲಿ ಕುಂಠಿತವಾಗಿತ್ತು. ನಮ್ಮ ಪಕ್ಷದ ಶಾಸಕರಾದ ಎನ್.ಶ್ರೀನಿವಾಸ್ ಆಯ್ಕೆಯಾದ ಎರಡು ವರ್ಷದಲ್ಲೇ ಅಭಿವೃದ್ಧಿಪಥದಲ್ಲಿ ಕ್ಷೇತ್ರವನ್ನು ಕೊಂಡೊಯ್ಯುತ್ತಿದ್ದಾರೆ. ಇನ್ನೂ ಮೂರು ವರ್ಷದಲ್ಲಿ ಸಾವಿರಾರು ಕೋಟಿ ಅನುದಾನ ತಂದು ಅಭಿವೃದ್ಧಿಪಡಿಸಲಿದ್ದಾರೆ. ನಮ್ಮ ಶಾಸಕರ ನಾಯಕತ್ವ ಮೆಚ್ಚಿ ಜೆಡಿಎಸ್ ಪಕ್ಷ ತ್ಯಜಿಸಿ ಬಂದ ಮುಖಂಡರಿಗೆ ಅಭಿನಂದನೆಗಳು. ಪಕ್ಷ ಸಂಘಟನೆಯಲ್ಲಿ ತೊಡಗಿ ಪಕ್ಷ ಸಂಘಟಿಸಿ ಎಂದರು.ಎಂಎಲ್‌ಸಿ ರವಿ ಮಾತನಾಡಿ, ಕಾಂಗ್ರೆಸ್ ಪಕ್ಷ ಕಾರ್ಯಕರ್ತರ ಪಕ್ಷವಾಗಿದ್ದು, ಪಕ್ಷ ಸಂಘಟಿಸಲು ಯಾರೇ ಬಂದರೂ ಸ್ವಾಗತಿಸುತ್ತೇವೆ. ಕಳೆದ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಬಿಜೆಪಿ ಪಕ್ಷ ತೊರೆದು ಬಂದ ಮುಖಂಡರಿಗೆ ಶಾಸಕ ಎನ್.ಶ್ರೀನಿವಾಸ್ ಅವರು ನಮ್ಮ ಪಕ್ಷದಲ್ಲಿ ಸೂಕ್ತಸ್ಥಾನ ಮಾನ ಮಾಡಿ ಗೌರವಯುತವಾಗಿ ನಡೆಸಿಕೊಳ್ಳುತ್ತಿದ್ದಾರೆ ಎಂದರು.ಶಾಸಕ ಎನ್.ಶ್ರೀನಿವಾಸ್ ಮಾತನಾಡಿ, ಹಳಬರು ಹೊಸಬರು ಎನ್ನದೇ ಎಲ್ಲ ಮುಖಂಡರನ್ನು ಸಮಾನವಾಗಿ ಗೌರವಯುತವಾಗಿ ನಡೆಸಿಕೊಳ್ಳುತ್ತೇನೆ. ಅವರ ಶಕ್ತಿ ಸಾಮರ್ಥ್ಯಕ್ಕೆ ಅನುಗುಣವಾಗಿ ಜವಾಬ್ದಾರಿ ನೀಡುತ್ತೇನೆ. ಯಾರು ಜನರಿಗೆ, ಸಮಾಜಕ್ಕೆ, ಪಕ್ಷಕ್ಕಾಗಿ ದುಡಿಯುತ್ತಾರೋ ಅವರಿಗೆ ಮೊದಲ ಆದ್ಯತೆ ನೀಡುತ್ತೇನೆ. 15-20 ವರ್ಷಗಳಿಂದ ಜೆಡಿಎಸ್ ಪಕ್ಷ ಕಟ್ಟಿದ್ದರೂ ಕ್ಷೇತ್ರದ ಅಭಿವೃದ್ದಿ ಕಾರ್ಯ ಮೆಚ್ಚಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾದ ಎಲ್ಲರಿಗೂ ಅಭಿನಂದನೆಗಳನ್ನು ತಿಳಿಸುತ್ತೇನೆ ಎಂದರು.
ಸೇರ್ಪಡೆಯಾದ ಮುಖಂಡರು:
ಟಿ.ಬೇಗೂರು ತಾ.ಪಂ.ಮಾಜಿ ಸದಸ್ಯ ಮುನಿಯಪ್ಪ, ವಜ್ರಗಟ್ಟೆಪಾಳ್ಯ ಡೇರಿ ಅಧ್ಯಕ್ಷ ಮುನಿರಾಜು, ಕುಲುವನಹಳ್ಳಿ ಗ್ರಾ.ಪಂ.ಮಾಜಿ ಅಧ್ಯಕ್ಷ ಸುರೇಶ್, ಉಪಾಧ್ಯಕ್ಷ ರಂಗನಾಥ್, ಸದಸ್ಯೆ ಕನ್ನಿಕಾ, ಬಾಳು ಮಮತ ಮಂಜುನಾಥ್, ವಾದಕುಂಟೆ ರಮೇಶ್, ಗ್ರಾ.ಪಂ.ಮಾಜಿ ಅಧ್ಯಕ್ಷೆ ಇಂದ್ರಕೃಷ್ಣಪ್ಪ, ಅನ್ನಪೂರ್ಣೇಶ್ವರಿ ಬಳಗದ ಅಧ್ಯಕ್ಷ ರಂಗಸ್ವಾಮಿ, ಗೋಪಿನಾಥ್, ಸುಬ್ರಹ್ಮಣಿ, ಮಣ್ಣೆ ವಿಎಸ್ ಎಸ್ ಎನ್ ಮಾಜಿ ಅಧ್ಯಕ್ಷ ಸೀತಾರಾಮಯ್ಯ, ಗಂಗರಾಜು, ಸೇರಿದಂತೆ 100ಕ್ಕೂ ಹೆಚ್ಚು ಜನರು ಮಾಜಿ ಸಂಸದ ಡಿ.ಕೆ.ಸುರೇಶ್ ನೇತೃತ್ವದಲ್ಲಿ ಸೇರ್ಪಡೆಯಾದರು.ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಸಿ.ಆರ್.ಗೌಡ, ಎನ್ ಡಿಎ ಅಧ್ಯಕ್ಷ ನಾರಾಯಣಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ನಾಗರಾಜು, ಜಗದೀಶ್, ಗ್ರಾ.ಪಂ. ಮಾಜಿ ಅಧ್ಯಕ್ಷ ಎಂ.ಕೆ.ನಾಗರಾಜು, ಬಗರ್‌ಹುಕಂ ಸದಸ್ಯ ಹನುಮಂತೇಗೌಡ್ರು, ನಗರಸಭೆ ಅಧ್ಯಕ್ಷ ಗಣೇಶ್, ಉಪಾಧ್ಯಕ್ಷ ಆನಂದ್, ಸದಸ್ಯ ಪ್ರದೀಪ್, ನರಸಿಂಹಮೂರ್ತಿ ಮತ್ತೀತ್ತರಿದ್ದರು.ಪೋಟೋ 2 : ನೆಲಮಂಗಲ ತಾಲ್ಲೂಕಿನ ಜೆಡಿಎಸ್ ಪ್ರಭಾವಿ ಮುಖಂಡರನ್ನು ಕಾಂಗ್ರೇಸ್ ಪಕ್ಷದ ಬಾವುಟ ನೀಡುವುದರ ಮೂಲಕ ಮಾಜಿ ಸಂಸದ ಡಿ.ಕೆ.ಸುರೇಶ್, ಎಂಎಲ್ ಸಿ ರವಿ, ಶಾಸಕ ಎನ್.ಶ್ರೀನಿವಾಸ್ ಕಾಂಗ್ರೇಸ್ ಪಕ್ಷಕ್ಕೆ ಬರಮಾಡಿಕೊಂಡರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.