ಕನ್ನಡಪ್ರಭ ವಾರ್ತೆ ಮಳವಳ್ಳಿ
ಸಂಘದ ಸಭಾಂಗಣದಲ್ಲಿ ಗುರುವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಎನ್.ಸಿ.ಕೃಷ್ಣ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಚಂದ್ರು ಮಾತ್ರ ನಾಮಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ಅವಿರೋಧ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಜಿ.ರಾಮಕೃಷ್ಣ ಘೋಷಿಸಿದರು.
ನೂತನ ಅಧ್ಯಕ್ಷ ಎನ್.ಸಿ.ಕೃಷ್ಣ ಮಾತನಾಡಿ, ಎಲ್ಲ ನಿರ್ದೇಶಕರು ಹಾಗೂ ಮುಖಂಡರ ಸಹಕಾರದಿಂದ ಸದಸ್ಯರಿಗೆ ಒಕ್ಕೂಟದಿಂದ ಸಿಗುವ ಸವಲತ್ತುಗಳನ್ನು ಸಮರ್ಪಕವಾಗಿ ಒದಗಿಸಲಾಗುವುದು ಎಂದರು.ಯುವ ಕಾಂಗ್ರೆಸ್‌ನ ಜಿಲ್ಲಾ ಉಪಾಧ್ಯಕ್ಷ ಎನ್.ಜೆ.ಶಿವಕುಮಾರ್ ಮಾತನಾಡಿ, ಎಲ್ಲರ ವಿಶ್ವಾಸದಿಂದ ಅಧ್ಯಕ್ಷ, ಉಪಾಧ್ಯಕ್ಷರನ್ನು ಆಯ್ಕೆ ಮಾಡಲಾಗಿದೆ. ನಿರ್ದೇಶಕರ ಹಾಗೂ ಸದಸ್ಯರ ಸಹಕಾರದಿಂದ ಸಂಘದ ಅಭಿವೃದ್ಧಿಗೆ ಮುಂದಾಗಬೇಕು ಎಂದರು.
ಇಂದು ಅಂತಾರಾಷ್ಟ್ರೀಯ ಜೈವಿಕ ಇಂಧನ ದಿನ
ಮಂಡ್ಯ: ತಾಲೂಕಿನ ವಿ.ಸಿ.ಫಾರ್ಮ್ ಕೃಷಿ ಮಹಾವಿದ್ಯಾಲಯದ ಆವರಣದಲ್ಲಿ ಜುಲೈ 9ರಂದು ಅಂತಾರಾಷ್ಟ್ರೀಯ ಜೈವಿಕ ಇಂಧನ ದಿನವನ್ನು ಆಯೋಜಿಸಲಾಗಿದೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವಲಯ ಅರಣ್ಯಾಧಿಕಾರಿಗಳ ಕಚೇರಿ, ಪರಿಸರ ರೂರಲ್ ಡೆವಲಪ್ ಮೆಂಟ್ ಸೊಸೈಟಿ, ಎನ್‌ಎಸ್‌ಎಸ್ ಘಟಕ, ವಿ ಸಿ ಫಾರ್ಮ್ ಕೃಷಿ ಮಹಾವಿದ್ಯಾಲಯದ ವತಿಯಿಂದ ನಡೆಯುವ ಕಾರ್ಯಕ್ರಮವನ್ನು ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು ಉದ್ಘಾಟಿಸುವರು. ಕೃಷಿ ಮಹಾವಿದ್ಯಾಲಯದ ಡೀನ್ ಡಾ.ಪಿ.ಎಸ್.ಫಾತಿಮಾ ಅಧ್ಯಕ್ಷತೆ ವಹಿಸಲಿದ್ದಾರೆ. ವಿ.ಸಿ.ಫಾರ್ಮ್ ವಲಯ ಕೃಷಿ ಸಂಶೋಧನಾ ಕೇಂದ್ರದ ಕೃಷಿ ಸಂಶೋಧನಾಧಿಕಾರಿ ಡಾ.ಎನ್.ಶಿವಕುಮಾರ್ ಉಪನ್ಯಾಸ ನೀಡಲಿದ್ದಾರೆ. ಗೌರವ ಅತಿಥಿಗಳಾಗಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಜಿಲ್ಲಾ ಪ್ರಾದೇಶಿಕ ಕಚೇರಿ ಪರಿಸರ ಅಧಿಕಾರಿ ಬಿ.ಪಿ. ಗೀತಾ, ಮಂಡ್ಯ ಪ್ರಾದೇಶಿಕ ಅರಣ್ಯ ವಿಭಾಗದ ವಲಯ ಅರಣ್ಯಧಿಕಾರಿ ಚೈತ್ರ ಆಗಮಿಸಲಿದ್ದಾರೆ.