ವಿದ್ಯಾರ್ಥಿಗಳ ಬದುಕು ರೂಪಿಸಿದ ಎನ್‌ಇಎಸ್

KannadaprabhaNewsNetwork |  
Published : Sep 03, 2024, 01:39 AM IST
ಪೊಟೊ: 2ಎಸ್‌ಎಂಜಿಕೆಪಿ02ಶಿವಮೊಗ್ಗದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ ಹಳೆಯ ವಿದ್ಯಾರ್ಥಿಗಳ ಸಂಘದಿಂದ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ, ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ ಹಳೆಯ ವಿದ್ಯಾರ್ಥಿ ಡಿ.ಎಸ್.ಅರುಣ್ ಅವರನ್ನು ಸನ್ಮಾನಿಸಲಾಯಿತು. | Kannada Prabha

ಸಾರಾಂಶ

ಶಿವಮೊಗ್ಗದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ ಹಳೆಯ ವಿದ್ಯಾರ್ಥಿಗಳ ಸಂಘದಿಂದ ನಡೆದ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ, ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ ಹಳೆಯ ವಿದ್ಯಾರ್ಥಿ ಡಿ.ಎಸ್.ಅರುಣ್ ಅವರನ್ನು ಸನ್ಮಾನಿಸಲಾಯಿತು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಸಾವಿರಾರು ವಿದ್ಯಾರ್ಥಿಗಳ ಉತ್ತಮ ಭವಿಷ್ಯ ರೂಪಿಸಿಕೊಟ್ಟ ಸಂಸ್ಥೆ ರಾಷ್ಟ್ರೀಯ ಶಿಕ್ಷಣ ಸಮಿತಿ ಎಂದು ವಿಧಾನ ಪರಿಷತ್ ಸದಸ್ಯ, ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ ಹಳೆಯ ವಿದ್ಯಾರ್ಥಿ ಡಿ.ಎಸ್.ಅರುಣ್ ಹೇಳಿದರು.

ಇಲ್ಲಿನ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ ಹಳೆಯ ವಿದ್ಯಾರ್ಥಿಗಳ ಸಂಘದಿಂದ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿ, ಕಾಲೇಜಿನ ಕಟ್ಟಡ ಕಂಡ ತಕ್ಷಣ ಕಾಲೇಜಿನಲ್ಲಿ ಕಳೆದ ಅದ್ಭುತ ಕ್ಷಣಗಳು ನೆನಪಾಗುತ್ತವೆ ಎಂದು ತಿಳಿಸಿದರು.

ಮನೆಯಲ್ಲಿ ರಾಜಕೀಯ ವಾತಾವರಣ ಇದ್ದರೂ ನಾನು ರಾಜಕಾರಣಿ ಆಗುತ್ತೇನೆ ಎಂದುಕೊಂಡಿರಲ್ಲಿಲ್ಲ. ನನ್ನ ವಿಧಾನ ಪರಿಷತ್ ಸ್ಥಾನದಲ್ಲಿ ಶೇ.100 ಹಾಜರಾತಿ ಇದೆ. ನಾವು ಪಡೆದ ಶಿಕ್ಷಣದಿಂದ ಉತ್ತಮ ಸೇವೆ ಮಾಡಲು ಸಾಧ್ಯವಾಗುತ್ತಿದೆ ಎಂದು ಹೇಳಿದರು.ಮಾಜಿ ಶಾಸಕ, ಕಾಲೇಜಿನ ಹಳೆಯ ವಿದ್ಯಾರ್ಥಿ ಕೆ.ಬಿ.ಪ್ರಸನ್ನಕುಮಾರ್ ಮಾತನಾಡಿ, ನಮ್ಮ ಕಾಲೇಜಿನ ಪ್ರತಿಭೆಗಳನ್ನುಗುರುತಿಸಿ ಕ್ಯಾಂಪಸ್‌ಗೆ ಬರಲು ಅನುವು ಮಾಡಿಕೊಟ್ಟ ಎಲ್ಲರಿಗೂ ಧನ್ಯವಾದಗಳು. ವಿದ್ಯೆ ಇಲ್ಲದೆ ಏನನ್ನೂ ಮಾಡಲು ಸಾಧ್ಯವಿಲ್ಲ. ಉತ್ತಮವಾಗಿ ಬದುಕಲು, ರಾಜಕೀಯ ಮಾಡಲು ವಿದ್ಯೆ ಬೇಕೆ ಬೇಕು ಎಂದು ತಿಳಿಸಿದರು.

ಕಬ್ಬು ಬೆಳೆಗಾರರ ಸಂಘದ ರಾಜ್ಯ ಉಪಾಧ್ಯಕ್ಷ ದೇವಿಕುಮಾರ್ ಸನ್ಮಾನ ಸ್ವೀಕರಿಸಿ ಮಾತನಾಡಿ, ಸ್ನೇಹಿತರನ್ನು ಎಂದೂ ಮರೆಯಬೇಡಿ. ಕಾಲೇಜಿನ ಒಡನಾಟವಿದ್ದರೆ ಅಭ್ಯಾಸ ಮಾಡಿದ ಅಧಿಕಾರಿಗಳಿಂದ ಸುಲಭ ಸಹಾಯ ದೊರಕುತ್ತದೆ ಎಂದರು.

ಇದೇ ವೇಳೆ ಪ್ರೊ.ಮಮತಾ ಅವರು ಮಾತನಾಡಿದರು. ವೈಷ್ಣವಿ ಪ್ರಾರ್ಥನೆ ಶಾಂಭವಿ ಸ್ವಾಗತಿಸಿದರು. ಅಧ್ಯಕ್ಷ ಎಸ್.ಎಸ್.ವಾಗೇಶ್ ಪ್ರಾಸ್ತಾವಿಕ ಮಾತನಾಡಿದರು. ಕಾರ್ಯದರ್ಶಿ ಶಿವಾನಂದ ಸಾನು, ಜಿ.ವಿಜಯಕುಮಾರ್ ಹಾಗೂ ಹಳೆಯ ವಿದ್ಯಾರ್ಥಿಗಳು ಸಾಂಸೃತಿಕ ಕಾರ್ಯಕ್ರಮ ನಡೆಸಿದರು. ಉಷಾದೇವಿ ನಿರೂಪಿಸಿದರು. ಸತಿದೇವಿ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಪಿಎಲ್‌ ಮಾನದಂಡ ಬದಲಿಗೆ ಮುಂದಾದ ರಾಜ್ಯ
ಸರ್ಕಾರಿ ಶಾಲೆಗೆ ಶೀಘ್ರ 11000 ಶಿಕ್ಷಕರ ನೇಮಕ : ಮಧು