ಹಗರಿಬೊಮ್ಮನಹಳ್ಳಿ ಪುರಸಭೆ ಉಪಾಧ್ಯಕ್ಷರಾಗಿ ನೇತ್ರಾವತಿ ಸೆರೆಗಾರ್ ಅವಿರೋಧ ಆಯ್ಕೆ

KannadaprabhaNewsNetwork |  
Published : Mar 13, 2026, 02:00 AM IST
ಹಗರಿಬೊಮ್ಮನಹಳ್ಳಿಯಲ್ಲಿ ಗುರುವಾರ ನಡೆದ ಚುನಾವಣೆಯಲ್ಲಿ ಪುರಸಭೆ ಉಪಾಧ್ಯಕ್ಷರಾಗಿ ನೇತ್ರಾವತಿ ಸೆರೆಗಾರ್ ಅವಿರೋಧವಾಗಿ ಆಯ್ಕೆಯಾದರು. | Kannada Prabha

ಸಾರಾಂಶ

23 ಸದಸ್ಯರನ್ನು ಹೊಂದಿರುವ ಪುರಸಭೆಯಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತದೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿದಿತ್ತು.

ಹಗರಿಬೊಮ್ಮನಹಳ್ಳಿ; ಪಟ್ಟಣದ ಪುರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಗುರುವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ನೇತ್ರಾವತಿ ಸೆರೆಗಾರ್ ಅವಿರೋಧವಾಗಿ ಆಯ್ಕೆಯಾದರು.

23 ಸದಸ್ಯರನ್ನು ಹೊಂದಿರುವ ಪುರಸಭೆಯಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತದೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿದಿತ್ತು. ಮಾಜಿ ಶಾಸಕ ಭೀಮಾನಾಯ್ಕ ಆದೇಶದ ಮೇರೆಗೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಅಧಿಕಾರ ಹಂಚಿಕೆಯಾಗಿತ್ತು. ಮೊದಲ ಬಾರಿಗೆ ಉಪಾಧ್ಯಕ್ಷೆಯಾಗಿ ಅಂಬಿಕಾ ದೇವೇಂದ್ರಪ್ಪ, ನಂತರ ನೇತ್ರಾವತಿ ಸೆರೆಗಾರ್ ಉಪಾಧ್ಯಕ್ಷರಾಗಿ ಕಾರ್ಯ ನಿರ್ವಹಿಸಲು ತೀರ್ಮಾನಿಸಲಾಗಿತ್ತು.

ಉಪಾಧ್ಯಕ್ಷ ಅವಧಿ ಮುಗಿದು, ಅಂಬಿಕಾ ದೇವೇಂದ್ರಪ್ಪ ರಾಜೀನಾಮೆ ಬಳಿಕ ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಯಿತು. ಉಪಾಧ್ಯಕ್ಷ ಸ್ಥಾನ ಎಸ್.ಟಿ. ಮಹಿಳೆಗೆ ಮೀಸಲಾಗಿತ್ತು. ಉಪಾಧ್ಯಕ್ಷ ಸ್ಥಾನಕ್ಕೆ ನೇತ್ರಾವತಿ ಸೆರೆಗಾರ್ ಒಬ್ಬರೇ ನಾಮಪತ್ರ ಸಲ್ಲಿಸಿದ್ದು, ಅವರ ಆಯ್ಕೆ ಸುಗಮವಾಯಿತು. ಚುನಾವಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದ ಹೊಸಪೇಟೆಯ ಸಹಾಯಕ ಆಯುಕ್ತ ವಿವೇಕಾನಂದ್ ಆಯ್ಕೆಯನ್ನು ಘೋಷಿಸಿದರು. ಪುರಸಭೆ ಮುಖ್ಯಾಧಿಕಾರಿ ಎಂ.ಕೆ. ಮುಗುಳಿ ಸಹಾಯಕ ಚುನಾವಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದರು.

ಪುರಸಭೆ ಅಧ್ಯಕ್ಷ ಎಂ.ಮರಿರಾಮಣ್ಣ, ಜಿಪಂ ಮಾಜಿ ಸದಸ್ಯ ಅಕ್ಕಿ ತೋಟೇಶ್, ಮುಖಂಡ ಡಿಶ್ ಮಂಜುನಾಥ್, ಸದಸ್ಯರಾದ ಪವಾಡಿ ಹನಮಂತಪ್ಪ, ಎಲ್.ಗಣೇಶ್, ಡಿ.ಎಂ. ಅಜೀಜುಲ್ಲ, ಟಿ.ಇಸ್ಮಾಯಿಲ್, ನಾಗರಾಜ ಜನ್ನು, ಬುಕೆಟ್‌ಗಾರ್ ಗಂಗಣ್ಣ, ದೀಪಕ್ ಕಠಾರೆ ಮತ್ತಿತರ ಸದಸ್ಯರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಾಂಸ್ಕೃತಿಕ ಜೀವನದ ಮೇಲೆ ಪ್ರಭಾವ ಬೀರಿದ ದಾಸ ಸಾಹಿತ್ಯ
ನಾಳೆ ಜಿಲ್ಲಾದ್ಯಂತ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ್ ಅದಾಲತ್