ಕಂಪ್ಲಿ: ತಾಲೂಕಿನ ಉಪ್ಪಾರಹಳ್ಳಿ ಗ್ರಾಮದಲ್ಲಿ ಭಾನುವಾರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವೇಳೆ ನೆಟ್‌ವರ್ಕ್ ಸಮಸ್ಯೆಯಿಂದಾಗಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆಯಿತು.
ಗ್ರಾಮದಲ್ಲಿ ಉದ್ವಿಗ್ನತೆ ಹೆಚ್ಚುತ್ತಿದ್ದಂತೆಯೇ ತಹಸೀಲ್ದಾರ್ ಜೂಗಲ ಮಂಜುನಾಯಕ ತಕ್ಷಣ ಸ್ಥಳಕ್ಕೆ ಧಾವಿಸಿ ಗ್ರಾಮಸ್ಥರೊಂದಿಗೆ ಮಾತುಕತೆ ನಡೆಸಿದರು. ಅವರು ಗ್ರಾಮಸ್ಥರನ್ನು ಸಮಾಧಾನ ಪಡಿಸಿ, ಸಮೀಕ್ಷೆಯಿಂದ ಯಾರೂ ಹೊರಗುಳಿಯಬಾರದು. ಎಲ್ಲರೂ ತಾಳ್ಮೆಯಿಂದ ವರ್ತಿಸಬೇಕು. ಸಮೀಕ್ಷಾ ಕಾರ್ಯಕ್ಕೆ ತೊಂದರೆ ಆಗದಂತೆ ತಕ್ಷಣ ಕ್ರಮ ಕೈಗೊಳ್ಳಲಾಗುವುದು. ಗ್ರಾಮಕ್ಕೆ ಶೀಘ್ರದಲ್ಲೇ ಉತ್ತಮ ನೆಟ್‌ವರ್ಕ್ ಸೌಲಭ್ಯ ಕಲ್ಪಿಸುವಂತೆ ಬಿಎಸ್‌ಎನ್‌ಎಲ್ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಭರವಸೆ ನೀಡಿದರು. ತಹಸೀಲ್ದಾರರ ಭರವಸೆಯನ್ನು ಗ್ರಾಮಸ್ಥರು ಒಪ್ಪಿಕೊಂಡು, ಸಮೀಕ್ಷೆಗೆ ಸಹಕರಿಸುವುದಾಗಿ ಹೇಳಿದರು.
ಆರ್‌ಐ ವೈ.ಎಂ. ಜಗದೀಶ, ಗಣತಿದಾರ ಮಲ್ಲಿಕಾರ್ಜುನ, ವಿಎ ಅಬ್ದುಲ್, ಗ್ರಾಮಸ್ಥರಾದ ಹನುಮಯ್ಯಗೌಡ, ಮಾಯಪ್ಪ, ಗುರು, ತಿಮ್ಮಪ್ಪ, ಗುರಪ್ಪ ಬಾದನಟ್ಟಿ, ಹನುಮಯ್ಯ, ಗುರಿಕಾರ ಹನುಮಂತಪ್ಪ ಸೇರಿದಂತೆ ಅನೇಕರಿದ್ದರು.