ಕನ್ನಡಪ್ರಭ ವಾರ್ತೆ ಕೊರಟಗೆರೆ
ಬಿಜೆಪಿ ಮಂಡಲ ಅಧ್ಯಕ್ಷ ರುದ್ರೇಶ್ ಮಾತನಾಡಿ, ಪ್ರತಿ ಚುನಾವಣೆಯಲ್ಲೂ ಹೊಸ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಸಂದರ್ಭದಲ್ಲಿ ಪಕ್ಷದ ಸಂಘಟನೆಗೆ ಹಲವು ಸವಾಲುಗಳು ಎದುರಾಗುತ್ತಿವೆ. ಪಕ್ಷವನ್ನು ತಳಮಟ್ಟದಿಂದ ಮತ್ತಷ್ಟು ಬಲಪಡಿಸುವ ಉದ್ದೇಶದಿಂದಲೇ ನೂತನ ಕಚೇರಿಯನ್ನು ಆರಂಭಿಸಲಾಗಿದೆ. ಕಾರ್ಯಕರ್ತರನ್ನು ಒಗ್ಗೂಡಿಸಿ, ಪಕ್ಷದ ಸಂಘಟನೆಯನ್ನು ಸದೃಢಗೊಳಿಸುವ ಮೂಲಕ ಮುಂಬರುವ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಯನ್ನು ಗೆಲ್ಲಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ಸಜ್ಜಾಗಿ ಎಂದು ಕರೆ ನೀಡಿದರು.ಆಗ್ನೇಯ ಪದವೀಧರ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಕೆ.ಎಂ. ಸುರೇಶ್ ಮಾತನಾಡಿ, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪದವೀಧರರಿಗೆ ಆಗುತ್ತಿರುವ ಅನ್ಯಾಯ ಹಾಗೂ ಸಮಸ್ಯೆಗಳನ್ನು ಗಮನಿಸುತ್ತಿದ್ದೇವೆ. ಪದವೀಧರರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ದೊರೆಯಬೇಕಾದರೆ, ಈ ಬಾರಿ ಪದವೀಧರರು ತಮ್ಮ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಒಳ್ಳೆಯ ನಿರ್ಧಾರ ಕೈಗೊಳ್ಳಬೇಕು. ಪದವೀಧರರ ಪರವಾಗಿ ಕೆಲಸ ಮಾಡುವ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಮೂಲಕ ತಮ್ಮ ಮತದಾನದ ಹಕ್ಕನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಅವರು ಮನವಿ ಮಾಡಿದರು.
ಬಿಜೆಪಿ ಮುಖಂಡ ವಿಜಯಕುಮಾರ್ ಮಾತನಾಡಿ, ಕೊರಟಗೆರೆಯಲ್ಲಿ ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ನೂತನ ಕಚೇರಿ ಪ್ರಮುಖ ಪಾತ್ರ ವಹಿಸಲಿದೆ. ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಒಂದೇ ವೇದಿಕೆಯಲ್ಲಿ ಸೇರಿ ಸಂಘಟನಾತ್ಮಕ ಚಟುವಟಿಕೆಗಳನ್ನು ರೂಪಿಸಲು ಈ ಕಚೇರಿ ಸಹಕಾರಿಯಾಗಲಿದೆ. ಮುಂಬರುವ ದಿನಗಳಲ್ಲಿ ಪಕ್ಷದ ಕಾರ್ಯಕರ್ತರನ್ನು ಮತ್ತಷ್ಟು ಸಕ್ರಿಯಗೊಳಿಸಿ, ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಲಾಗುವುದು ಎಂದು ತಿಳಿಸಿದರು.ಇದೆ ಸಂದರ್ಭದಲ್ಲಿ ಪರ್ವ ಗ್ರೂಪ್ ಸಂಸ್ಥಾಪಕ ನೀಲೇಶ್, ಮುಖಂಡರಾದ ಕಾಂತರಾಜು, ಓಂಕಾರ್, ಯಶಸ್, ಪವನ್‌ಕುಮಾರ್, ನಟರಾಜು, ಸುಶೀಲಮ್ಮ, ಚಂದ್ರಣ್ಣ, ಶ್ರೀಧರ್, ಅರುಣ್, ರತ್ನಮ್ಮ, ರವಿ, ಲತಾಪ್ರದೀಪ್, ರಾಜೇಂದ್ರ, ಮಂಜಣ್ಣ, ಮಹೇಂದ್ರ, ಗುರುದತ್, ಹನುಮಂತರಾಜು, ಶಿವಕುಮಾರ್, ಸಿದ್ದನಂಜಪ್ಪ, ಮಮತಾ, ಜಯಪ್ಪ, ನಾಗರಾಜು, ಆನಂದ್, ಶ್ರೀನಿವಾಸ್, ಸಿದ್ದರಾಜು, ವಿಜಿಕುಮಾರ್, ಯತೀಶ್, ರಾಜಕುಮಾರ್, ಸುರೇಶ್, ಮೂರ್ತಿ, ಬಾಲರಾಜು, ಮಂಜಣ್ಣ, ಆಟೋಗೋಪಿ, ಹೇಮಂತ್, ರವಿಶಂಕರ್, ಸಂತೋಷ್, ಜಗದೀಶ್, ಶಶಿ, ರಂಜಿತ್, ಮಧು, ನಯನಗೌಡ, ಸಿದ್ದೇಶ್, ವಿನೋದ್, ಸೇರಿದಂತೆ ಇತರರು ಇದ್ದರು.