ಮಂಡ್ಯ ಮಂಜುನಾಥ
ತಾಲೂಕಿನ ಹಂಪಾಪುರ ಗ್ರಾಮದಲ್ಲಿ ನಿರ್ಮಾಣವಾಗಲಿರುವ ೪೦೦/೨೨೦/೩೩ ಕೆವಿ ಸಾಮರ್ಥ್ಯದ ಗ್ಯಾಸ್ ಇನ್ಸುಲೇಟೆಡ್ ಸಬ್ ಸ್ಟೇಷನ್ ಯೋಜನೆಯಿಂದ ಜಿಲ್ಲೆಯ ವಿದ್ಯುತ್ ಮೂಲಸೌಕರ್ಯಕ್ಕೆ ಮಹತ್ವದ ಬಲ ದೊರೆಯುವ ನಿರೀಕ್ಷೆಯಿದೆ. ಈ ಯೋಜನೆಯಿಂದ ವಿದ್ಯುತ್ ಪೂರೈಕೆಯಲ್ಲಿ ಸ್ಥಿರತೆ ಹೆಚ್ಚುವುದರ ಜೊತೆಗೆ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗಲಿದೆ. ಅಲ್ಲದೆ, ಕೈಗಾರಿಕಾ ಬೆಳವಣಿಗೆಗೂ ಹೊಸ ಅವಕಾಶಗಳು ಸೃಷ್ಟಿಯಾಗಲಿವೆ. ವಿದ್ಯುತ್ ಪ್ರಸರಣ ಜಾಲವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಈ ಯೋಜನೆಯನ್ನು ರೂಪಿಸಲಾಗಿದೆ.
ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ೨೦೨೬ರ ಸೆಪ್ಟೆಂಬರ್ನಲ್ಲಿ ಹಂಪಾಪುರ ಪವರ್ ಟ್ರಾನ್ಸ್ಮಿಷನ್ ಲಿಮಿಟೆಡ್ ಸಂಸ್ಥೆಗೆ ಹಂಪಾಪುರದಲ್ಲಿ ೪೦೦ ಕೆವಿ ವಿದ್ಯುತ್ ಉಪಕೇಂದ್ರ ಸ್ಥಾಪಿಸಲು ಹಾಗೂ ಅದಕ್ಕೆ ಸಂಬಂಧಿಸಿದ ವಿದ್ಯುತ್ ಪ್ರಸರಣ ಮಾರ್ಗಗಳನ್ನು ನಿರ್ಮಿಸಲು ಪರವಾನಗಿ ನೀಡಿದೆ.೨೦೨೮ರಲ್ಲಿ ಕಾರ್ಯಾರಂಭ ಮಾಡುವ ನಿರೀಕ್ಷೆ:
ಯೋಜನೆ ಪೂರ್ಣಗೊಂಡು ಕಾರ್ಯಾರಂಭ ಮಾಡಿದ ಬಳಿಕ ೧೦೦೦ ಮೆಗಾವ್ಯಾಟ್ವರೆಗೆ ವಿದ್ಯುತ್ ಪ್ರಸರಣಕ್ಕೆ ಅನುಕೂಲವಾಗಲಿದೆ. ಇದರಿಂದ ದಕ್ಷಿಣ ಕರ್ನಾಟಕದ ವಿದ್ಯುತ್ ಪ್ರಸರಣ ವ್ಯವಸ್ಥೆ ಮತ್ತಷ್ಟು ಬಲಗೊಳ್ಳಲಿದೆ. ಯೋಜನೆಯನ್ನು ೨೪ ತಿಂಗಳ ಅವಧಿಯಲ್ಲಿ ಪೂರ್ಣಗೊಳಿಸುವ ಗುರಿ ಹೊಂದಲಾಗಿದ್ದು, ೨೦೨೮ರಲ್ಲಿ ಕಾರ್ಯಾರಂಭ ಮಾಡುವ ನಿರೀಕ್ಷೆಯಿದೆ.
ಜಿಲ್ಲೆಯಲ್ಲಿ ವಿದ್ಯುತ್ ಬೇಡಿಕೆ ನಿರಂತರವಾಗಿ ಹೆಚ್ಚಾಗುತ್ತಿದ್ದರೂ, ಹಲವು ಪ್ರದೇಶಗಳಲ್ಲಿ ಕಡಿಮೆ ವೋಲ್ಟೇಜ್ ಹಾಗೂ ವಿದ್ಯುತ್ ಪೂರೈಕೆಯ ಏರಿಳಿತದ ಸಮಸ್ಯೆಗಳು ಮುಂದುವರೆದಿವೆ. ವಿಶೇಷವಾಗಿ ಕೃಷಿ ಚಟುವಟಿಕೆಗಳಿಗೆ ಅಗತ್ಯವಿರುವ ನೀರಾವರಿ ಪಂಪ್ಸೆಟ್ಗಳು ಹಾಗೂ ಇತರೆ ಉಪಕರಣಗಳನ್ನು ಬಳಸಲು ರೈತರು ತೊಂದರೆ ಅನುಭವಿಸುತ್ತಿದ್ದಾರೆ. ಸಮರ್ಪಕ ವಿದ್ಯುತ್ ಪೂರೈಕೆ ಇಲ್ಲದ ಕಾರಣ ಬೆಳೆಗಳು ನಿರ್ಣಾಯಕ ಹಂತಗಳಲ್ಲಿ ಒಣಗಿ ಕೃಷಿ ಚಟುವಟಿಕೆಗಳ ಮೇಲೂ ಪರಿಣಾಮ ಬೀರುತ್ತಿದೆ.
ಪ್ರಸರಣ ವ್ಯವಸ್ಥೆಯಲ್ಲಿನ ಅಡಚಣೆ ದೂರ:
ಕೃಷಿ-ಕೈಗಾರಿಕೆಗಳ ಬೆಳವಣಿಗೆಗೆ ಅನುಕೂಲ:
೨೦೨೮ರಲ್ಲಿ ಕಾರ್ಯಾರಂಭ ಮಾಡುವ ಗುರಿ ಹೊಂದಿರುವ ಹಂಪಾಪುರ ವಿದ್ಯುತ್ ಪ್ರಸರಣ ಯೋಜನೆಯು ಮಂಡ್ಯ ಜಿಲ್ಲೆಯ ವಿದ್ಯುತ್ ಮೂಲಸೌಕರ್ಯದಲ್ಲಿ ದೀರ್ಘಕಾಲೀನ ಹೂಡಿಕೆಯಾಗಿದೆ. ವಿದ್ಯುತ್ ಪ್ರಸರಣ ವ್ಯವಸ್ಥೆಯನ್ನು ಬಲಪಡಿಸುವುದಷ್ಟೇ ಅಲ್ಲದೆ, ಕೃಷಿ ಉತ್ಪಾದಕತೆ ಹೆಚ್ಚಿಸುವುದು, ಗ್ರಾಮೀಣ ಉದ್ಯಮಗಳಿಗೆ ಉತ್ತೇಜನ ನೀಡುವುದು ಹಾಗೂ ಭವಿಷ್ಯದ ಇಂಧನ ಅಗತ್ಯಗಳನ್ನು ಪೂರೈಸಲು ಜಿಲ್ಲೆಯನ್ನು ಸಜ್ಜುಗೊಳಿಸುವ ಸಾಮರ್ಥ್ಯವನ್ನು ಈ ಯೋಜನೆ ಹೊಂದಿದೆ.
ಹೆಚ್ಚುತ್ತಿರುವ ವಿದ್ಯುತ್ ಬೇಡಿಕೆಯ ಅಗತ್ಯಗಳನ್ನು ಪೂರೈಸಲು ಜಿಲ್ಲೆಯ ವಿದ್ಯುತ್ ಜಾಲವನ್ನು ಬಲಪಡಿಸಲು ಈ ಯೋಜನೆ ನೆರವಾಗಲಿದೆ. ಹಂಪಾಪುರ ಬಳಿ ೨೫ ಎಕರೆ ಸರ್ಕಾರಿ ಜಾಗದಲ್ಲಿ ವಿದ್ಯುತ್ ಉಪಕೇಂದ್ರ ನಿರ್ಮಾಣಗೊಳ್ಳಲಿದ್ದು, ರೈತರಿಂದ ಯಾವುದೇ ಭೂಮಿಯನ್ನು ವಶಪಡಿಸಿಕೊಳ್ಳುವುದಿಲ್ಲ. ಈ ಯೋಜನೆಯಿಂದ ಜಿಲ್ಲೆಯ ವಿದ್ಯುತ್ ಸಮಸ್ಯೆಗೆ ಸಂಪೂರ್ಣ ಪರಿಹಾರ ದೊರಕಲಿದೆ. ಬೇಡಿಕೆ ಇರುವಷ್ಟು ವಿದ್ಯುತ್ನ್ನು ಪೂರೈಸುವುದಕ್ಕೆ ಸಾಧ್ಯವಾಗಲಿದೆ.
- ಡಾ.ಕುಮಾರ, ಜಿಲ್ಲಾಧಿಕಾರಿ, ಮಂಡ್ಯ-------------------
ಜಿಲ್ಲೆಯ ವಿದ್ಯುತ್ ಬೇಡಿಕೆಯನ್ನು ಮನಗಂಡು ಹಂಪಾಪುರದಲ್ಲಿ ೪೦೦ ಕೆವಿ ಸಾಮರ್ಥ್ಯದ ಉಪಕೇಂದ್ರವನ್ನು ತಂದಿದ್ದೇನೆ. ಮುಖ್ಯಮಂತ್ರಿಗಳು ಶಂಕುಸ್ಥಾಪನೆ ನೆರವೇರಿಸಿದ್ದಾರೆ. ವಿದ್ಯುತ್ ಸಮಸ್ಯೆಗೆ ಇದರಿಂದ ಪರಿಹಾರ ದೊರೆಯಲಿದೆ. ನಿರಂತರ ವಿದ್ಯುತ್ ಸರಬರಾಜಾಗುವುದರಿಂದ ರೈತರು ರಾತ್ರಿ ವೇಳೆ ಜಮೀನುಗಳಿಗೆ ತೆರಳುವ ಅವಶ್ಯಕತೆ ಇರುವುದಿಲ್ಲ. ಗ್ರಾಮೀಣ ಜನರ ವಿದ್ಯುತ್ ಸಮಸ್ಯೆಗೂ ಮುಕ್ತಿ ಸಿಗಲಿದೆ.- ಪಿ.ರವಿಕುಮಾರ್, ಶಾಸಕ, ಮಂಡ್ಯ ವಿಧಾನಸಭಾ ಕ್ಷೇತ್ರ