ನೂತನ ಕಟ್ಟಡದಿಂದ ಓದುಗರಿಗೆ ಹೆಚ್ಚಿನ ಅನುಕೂಲ: ಕಾಮತ್‌

KannadaprabhaNewsNetwork |  
Published : Nov 16, 2026, 02:45 AM IST
ನೂತನ ಶಾಖಾ ಗ್ರಂಥಾಲಯ ಕಟ್ಟಡವನ್ನು ಶಾಸಕ ವೇದವ್ಯಾಸ ಕಾಮತ್‌ ಉದ್ಘಾಟಿಸಿದರು | Kannada Prabha

ಸಾರಾಂಶ

ಇಲ್ಲಿನ ಗ್ರಂಥಾಲಯ ಈ ಹಿಂದೆ ಸಣ್ಣ ಕೊಠಡಿಯಲ್ಲೇ ಪ್ರತಿನಿತ್ಯ ಸಾಕಷ್ಟು ಓದುಗರು ಜ್ಞಾನಾರ್ಜನೆ ಮಾಡುತ್ತಿದ್ದರು. ಇದೀಗ ನೂತನ ಕಟ್ಟಡದಿಂದ ಓದುಗರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಶಾಸಕ ವೇದವ್ಯಾಸ ಕಾಮತ್‌ ಹೇಳಿದರು

ಕನ್ನಡಪ್ರಭ ವಾರ್ತೆ ಮಂಗಳೂರು

ಇಲ್ಲಿನ ಗ್ರಂಥಾಲಯ ಈ ಹಿಂದೆ ಸಣ್ಣ ಕೊಠಡಿಯಲ್ಲೇ ಪ್ರತಿನಿತ್ಯ ಸಾಕಷ್ಟು ಓದುಗರು ಜ್ಞಾನಾರ್ಜನೆ ಮಾಡುತ್ತಿದ್ದರು. ಇದೀಗ ನೂತನ ಕಟ್ಟಡದಿಂದ ಓದುಗರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಶಾಸಕ ವೇದವ್ಯಾಸ ಕಾಮತ್‌ ಹೇಳಿದರು.ನಗರದ ಅಶೋಕ ನಗರದಲ್ಲಿ ನೂತನವಾಗಿ ನಿರ್ಮಿಸಲಾದ ಶಾಖಾ ಗ್ರಂಥಾಲಯದ ಕಟ್ಟಡವನ್ನು ಅವರು ಶನಿವಾರ ಉದ್ಘಾಟಿಸಿ ಮಾತನಾಡಿದರು.

ಗ್ರಂಥಾಲಯದ ಆರಂಭದ ದಿನಗಳಲ್ಲಿ ಜಾಗದ ಕೊರತೆಯಿಂದಾಗಿ ಸಾಕಷ್ಟು ಸಮಸ್ಯೆಗಳನ್ನು ಎದುರಿಸಬೇಕಾಗಿತ್ತು. ಸೂಕ್ತ ಸ್ಥಳಾವಕಾಶಕ್ಕಾಗಿ ಸತತ ಪ್ರಯತ್ನ ನಡೆಸಲಾಗಿದ್ದು, 2019ರಿಂದ ಕೈಗೊಂಡ ಪ್ರಯತ್ನಕ್ಕೆ ಇದೀಗ ಫಲಶ್ರುತಿ ದೊರೆತಿದೆ. ಗ್ರಂಥಾಲಯದ ಕಟ್ಟಡ ನಿರ್ಮಾಣಕ್ಕಾಗಿ ತಮ್ಮ ಸ್ವಂತ ನಿಧಿಯಿಂದ 15 ಲಕ್ಷ ರು. ಅನುದಾನ ನೀಡಲಾಗಿದ್ದು, ನಗರ ಗ್ರಂಥಾಲಯ ಪ್ರಾಧಿಕಾರದ ನಿಧಿಯಿಂದ 16 ಲಕ್ಷ ರು. ನೆರವು ಪಡೆದು ಮತ್ತೊಂದು ಕೊಠಡಿಯನ್ನು ನಿರ್ಮಿಸಲಾಗಿದೆ ಎಂದರು.

ಮುಂದಿನ ದಿನಗಳಲ್ಲಿ ಕಟ್ಟಡದ ಮೇಲ್ಭಾಗದಲ್ಲಿ ಮತ್ತೊಂದು ಕೊಠಡಿ ನಿರ್ಮಿಸಿ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುವ ವಿದ್ಯಾರ್ಥಿಗಳಿಗೆ ಸುಸಜ್ಜಿತ ಅಧ್ಯಯನ ಕೇಂದ್ರವನ್ನು ಸ್ಥಾಪಿಸುವ ಉದ್ದೇಶವಿದೆ. ಈ ಕಾರ್ಯಕ್ಕೂ ಮುಂದಿನ ದಿನಗಳಲ್ಲಿ ಅಗತ್ಯ ಸಹಕಾರ ಮತ್ತು ಪ್ರೋತ್ಸಾಹ ನೀಡುವುದಾಗಿ ಭರವಸೆ ನೀಡಿದರು.

ನಗರ ಕೇಂದ್ರ ಗ್ರಂಥಾಲಯದ ಸದಸ್ಯ ಸುಬ್ರಹ್ಮಣ್ಯ ಶೆಣೈ ಅವರ ಅವಿರತ ಪ್ರಯತ್ನದ ಫಲವಾಗಿ ಗ್ರಂಥಾಲಯಕ್ಕೆ ನೂತನ ಕಟ್ಟಡ ನಿರ್ಮಾಣಗೊಂಡಿದೆ.

ಪ್ರಮುಖರಾದ ಶಾಲೆಟ್ ಪಿಂಟೊ, ಜಯಲಕ್ಷ್ಮೀ, ಗಣೇಶ್ ಕುಲಾಲ್ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಯುವಕರಲ್ಲಿ ದೇಶಪ್ರೇಮ, ಸಾಮಾಜಿಕ ಹೊಣೆ ಮೇಳೈಸಲಿ
ಹಿಂದೂ ಅಲ್ಪ ಸಂಖ್ಯಾತರಾದರೆ ಅಪಾಯ ಕಟ್ಟಿಟ್ಟ ಬುತ್ತಿ: ಕೃಷ್ಣಾನಂದ ಕಾಮತ್‌