ಬಸ್‌ ಡಿಪೋ ಜಾಗದಲ್ಲಿ ನೂತನ ಬಸ್‌ ನಿಲ್ದಾಣ: ಪಿ.ರವಿಕುಮಾರ್‌

KannadaprabhaNewsNetwork |  
Published : Apr 08, 2026, 01:30 AM IST
7ಕೆಎಂಎನ್‌ಡಿ-5ಮಂಡ್ಯದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಕಳವು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶಾಸಕ ಪಿ.ರವಿಕುಮಾರ್‌ ಅವರು ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. | Kannada Prabha

ಸಾರಾಂಶ

ಮಂಡ್ಯ ನಗರದ ಸಾರಿಗೆ ಡಿಪೋವನ್ನು ಸ್ಥಳಾಂತರಿಸಿ ಅದೇ ಜಾಗದಲ್ಲಿ ನೂತನ ಬಸ್‌ ನಿಲ್ದಾಣವನ್ನು ಅತ್ಯಾಧುನಿಕ ರೀತಿಯಲ್ಲಿ ನಿರ್ಮಿಸಲು ಉದ್ದೇಶಿಸಲಾಗಿದೆ. ತಾತ್ಕಾಲಿಕವಾಗಿ ಬಸ್ ನಿಲ್ದಾಣಕ್ಕೆ ಅಗತ್ಯವಿರುವ ಸೌಲಭ್ಯ ಕಲ್ಪಿಸಲಾಗುವುದು. ಶಾಶ್ವತವಾಗಿ ಅನುಕೂಲಕರ ವಾತಾವರಣ ಕಲ್ಪಿಸುವ ಉದ್ದೇಶದಿಂದ ನೂತನ ಬಸ್ ನಿಲ್ದಾಣದ ಗುರಿ ಹೊಂದಲಾಗಿದೆ.

ಕನ್ನಡಪ್ರಭ ವಾರ್ತೆ ಮಂಡ್ಯ

ನಗರದ ಸಾರಿಗೆ ಡಿಪೋವನ್ನು ಸ್ಥಳಾಂತರಿಸಿ ಅದೇ ಜಾಗದಲ್ಲಿ ನೂತನ ಬಸ್‌ ನಿಲ್ದಾಣವನ್ನು ಅತ್ಯಾಧುನಿಕ ರೀತಿಯಲ್ಲಿ ನಿರ್ಮಿಸಲು ಉದ್ದೇಶಿಸಲಾಗಿದೆ ಎಂದು ಶಾಸಕ ಪಿ.ರವಿಕುಮಾರ್ ತಿಳಿಸಿದರು.

ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಕಳವು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಂಗಳವಾರ ಬೆಳಗ್ಗೆ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದರು.

ತಾತ್ಕಾಲಿಕವಾಗಿ ಬಸ್ ನಿಲ್ದಾಣಕ್ಕೆ ಅಗತ್ಯವಿರುವ ಸೌಲಭ್ಯ ಕಲ್ಪಿಸಲಾಗುವುದು. ಶಾಶ್ವತವಾಗಿ ಅನುಕೂಲಕರ ವಾತಾವರಣ ಕಲ್ಪಿಸುವ ಉದ್ದೇಶದಿಂದ ನೂತನ ಬಸ್ ನಿಲ್ದಾಣದ ಗುರಿ ಹೊಂದಲಾಗಿದೆ. ಈಗಿರುವ ನಿಲ್ದಾಣವನ್ನು ಆಧುನೀಕರಣಗೊಳಿಸಿದರೂ ಸ್ಥಳಾವಕಾಶದ ಕೊರತೆ ಎದುರಾಗುತ್ತದೆ. ಆದ್ದರಿಂದ 4.5 ಎಕರೆ ವಿಸ್ತೀರ್ಣವನ್ನು ಹೊಂದಿರುವ ಬಸ್ ಡಿಪೋ ಜಾಗದಲ್ಲೇ ನೂತನ ನಿಲ್ದಾಣ ನಿರ್ಮಿಸುವುದು ಸೂಕ್ತ ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.

ಇತ್ತೀಚಿನ ದಿನಗಳಲ್ಲಿ ಕೆಎಸ್‌ರ್‌ಟಿಸಿ ಬಸ್ ನಿಲ್ದಾಣದಲ್ಲಿ ಕಳವು ಪ್ರಕರಣಗಳು ಹೆಚ್ಚುತ್ತಿದ್ದು, ಕಳ್ಳತನ ಪ್ರಕರಣಗಳು ನಡೆಯದಂತೆ ನಿಗಾ ವಹಿಸಲು ಪೊಲೀಸ್ ಇಲಾಖೆ ಸಿಬ್ಬಂದಿ ಮತ್ತು ಕೆಎಸ್‌ಆರ್‌ಟಿಸಿ ಸಿಬ್ಬಂದಿ ಕ್ರಮ ವಹಿಸಬೇಕು ಎಂದು ಸೂಚಿಸಿದರು.

ಅಗತ್ಯವಿರುವ ಕಡೆ ಸಿಸಿ ಟಿವಿ ಕ್ಯಾಮೆರಾವನ್ನು ಅಳವಡಿಸಬೇಕು. ವಿಶೇಷವಾಗಿ ಬೆಂಗಳೂರು ಕಡೆಗೆ ತೆರಳುವ ಬಸ್ ನಿಲುಗಡೆ ಸ್ಥಳದಲ್ಲಿ ಕಳವು ಪ್ರಕರಣಗಳು ಹೆಚ್ಚಿರುವುದರಿಂದ ಆ ಭಾಗದಲ್ಲಿ ಹೆಚ್ಚಿನ ಕ್ಯಾಮೆರಾ ಅಳವಡಿಕೆ ಆಗಬೇಕು. ಬೇಸಿಗೆ ದಿನಗಳಾಗಿರುವುದರಿಂದ ಪ್ರಯಾಣಿಕರಿಗೆ ಶುದ್ಧ ಕುಡಿಯುವ ನೀರಿನ ಸಮರ್ಪಕ ಪೂರೈಕೆ ಆಗಬೇಕಿದೆ. ಈಗಿರುವ ಶುದ್ಧ ನೀರಿನ ಘಟಕದ ಸುತ್ತಮುತ್ತ ಅಳವಡಿಸಿರುವ ಜಾಹೀರಾತು ಫಲಕಗಳನ್ನು ತೆರವುಗೊಳಿಸಿ ಸಮರ್ಪಕ ನೀರು ಪೂರೈಕೆಗೆ ಕ್ರಮ ಜರುಗಿಸಬೇಕು ಎಂದರು.

ಪಾಂಡವಪುರ ಬಸ್‌ಗಳು ನಿಲುಗಡೆಗೊಳ್ಳುವ ಸ್ಥಳದಲ್ಲಿ ಪ್ರಯಾಣಿರಿಗೆ ಅನುಕೂಲ ಕಲ್ಪಿಸುವುದಕ್ಕಾಗಿ ಶೆಲ್ಟರ್ ವ್ಯವಸ್ಥೆ ಹಾಗೂ ಆಸನಗಳ ವ್ಯವಸ್ಥೆಯನ್ನು ಕಲ್ಪಿಸಲಾಗುವುದು. ಜೊತೆಗೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಅಗತ್ಯತೆಗಳ ಪ್ರಸ್ತಾವನ್ನು ಸಲ್ಲಿಸಿದರೆ ಸರ್ಕಾರದೊಂದಿಗೆ ಸಮಾಲೋಚಿಸಿ ಅನುದಾನ ಬಿಡುಗಡೆ ಮಾಡಿಸುವುದಾಗಿ ಭರವಸೆ ನೀಡಿದರು.

ಇದೇ ವೇಳೆ ಗ್ರಾಮಾಂತರ ಪ್ರದೇಶಕ್ಕೆ ಹೆಚ್ಚುವರಿ ಬಸ್‌ಗಳನ್ನು ಕಲ್ಪಿಸುವಂತೆ ಪ್ರಯಾಣಿಕರು ಮನವಿ ಮಾಡಿದರು. ಅಲ್ಲದೇ, ಹೆಚ್ಚುವರಿ ಆಸನಗಳ ವ್ಯವಸ್ಥೆಯನ್ನೂ ಕಲ್ಪಿಸುವಂತೆಯೂ ಕೋರಿದರು. ಎಲ್ಲಾ ಸಮಸ್ಯೆಗಳನ್ನು ಇತ್ಯರ್ಥಗೊಳಿಸಿ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸಿಕೊಡುವುದಾಗಿ ಶಾಸಕರು ಭರವಸೆ ನೀಡಿದರು.

ವಿಭಾಗೀಯ ನಿಯಂತ್ರಣಾಧಿಕಾರಿ ಕೆ.ಎಂ.ಶರಣ ಬಸವರಾಜು, ನಿಯಂತ್ರಣಾಧಿಕಾರಿ ಚನ್ನಬಸಪ್ಪ, ಭದ್ರತಾಧಿಕಾರಿ ರವೀಂದ್ರ, ಲೆಕ್ಕಾಧಿಕಾರಿ ರವಿಕುಮಾರ್, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ವೇದಿಕೆ ಅಧ್ಯಕ್ಷ ಎಲ್. ಸಂದೇಶ್ ಇತರರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಿವಮೊಗ್ಗದ ವಿವಿಧೆಡೆ ಲೋಕಾಯುಕ್ತ ದಾಳಿ
ಸಾಮಾಜಿಕ ಭದ್ರತಾ ಯೋಜನೆಯಡಿ ಬಡ ಫಲಾನುಭವಿಗಳ ಆದಾಯ ಮಿತಿ ಹೆಚ್ಚಿಸಿ: ಕಲ್ಲೂರು ಮೇಘರಾಜ್