ಧಾರವಾಡ: ಹತ್ತಾರು ವರ್ಷಗಳಿಂದ ಯಾವುದೇ ಬದಲಾವಣೆ ಇಲ್ಲದೇ ಜಿಡ್ಡುಗಟ್ಟಿದ ವಾತಾವರಣದಲ್ಲಿದ್ದ ಜಿಲ್ಲೆಯ ಐದು ರಾಷ್ಟ್ರೀಯ ಸ್ಮಾರಕ ಟ್ರಸ್ಟ್‌ಗಳಿಗೆ ಇದೀಗ ಹೊಸ ನಾಮಕರಣ ಮಾಡಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆದೇಶಿಸಿದೆ.
ಚಿತ್ರಕಲಾ ಶಿಲ್ಪಿ ಶ್ರೀ ಡಿ.ವಿ. ಹಾಲಭಾವಿ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ನೂತನ ಅಧ್ಯಕ್ಷರಾಗಿ ಕಲಾವಿದ ಬಿ. ಮಾರುತಿ ನೇಮಕವಾಗಿದ್ದು, ಸದಸ್ಯರಾಗಿ ಸುರೇಶ ಹಾಲಭಾವಿ, ಎಫ್.ವಿ. ಚಿಕ್ಕಮಠ, ಡಿ.ಎಂ. ಬಡಿಗೇರ, ಗದಗನ ಡಾ. ಬಿ.ಎಚ್. ಚವ್ಹಾಣ, ಡಾ. ಬಿ.ಎಚ್. ಕುರಿಯವರ, ಎಸ್.ಕೆ. ಪತ್ತಾರ, ರೇಣುಕಾ ಮಾರ್ಕಂಡೇಯ ಸದಸ್ಯರಾಗಿ ನೇಮಕವಾಗಿದ್ದಾರೆ.
ಇನ್ನು, ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ್ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ಅಧ್ಯಕ್ಷರಾಗಿ ಡಾ. ರಂಜಾನ ದರ್ಗಾ, ಸದಸ್ಯರಾಗಿ ಡಾ. ದೀಪಕ ಆಲೂರ, ವಿಶ್ವನಾಥ ಕುಲಕರ್ಣಿ, ಡಾ. ಸಿ.ಯು. ಬೆಳ್ಳಕ್ಕಿ, ಡಾ. ಪ್ರಕಾಶ ಉಡಿಕೇರಿ, ದ್ರೌಪದಿ ವಿಜಾಪೂರ, ಬಸವರಾಜ ಸೂಳಿಬಾವಿ, ಸುನಂದಾ ಕಡಮೆ ನೇಮಕವಾಗಿದ್ದಾರೆ. ಹಾಗೆಯೇ ಸಾಮ್ರಾಟ್ ಪಂ. ಬಸವರಾಜ ರಾಜಗುರು ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ನೂತನ ಅಧ್ಯಕ್ಷರಾಗಿ ಪಂ. ಕೈವಲ್ಯಕುಮಾರ ಗುರವ, ಸದಸ್ಯರಾಗಿ ಪಂ. ಸಾತಲಿಂಗಪ್ಪ ದೇಸಾಯಿ, ನಿಜಗುಣಿ ರಾಜಗುರು, ಛೋಟೆ ರಹಿಮತ ಖಾನ್, ಡಾ. ಅಶೋಕ ಹುಗ್ಗಣ್ಣವರ, ಡಾ. ಅನಿಲ ಮೇತ್ರಿ, ಅಲ್ಲಮಪ್ರಭು ಕಡಕೋಳ, ಸುಪ್ರಿಯಾ ಭಟ್ ನೇಮಕವಾಗಿದ್ದಾರೆ.ಸಾಧನಕೇರಿಯ ಡಾ. ದ.ರಾ. ಬೇಂದ್ರೆ ಟ್ರಸ್ಟ್‌ಗೆ ಬೆಳಗಾವಿಯ ಹಿರಿಯ ಪತ್ರಕರ್ತ ಡಾ. ಸರಜೂ ಕಾಟಕರ ಅಧ್ಯಕ್ಷರಾಗಿದ್ದು, ಸದಸ್ಯರಾಗಿ ಬೆಳಗಾವಿಯ ಡಾ. ವೈ.ಎಂ. ಯಾಕೊಳ್ಳಿ, ಡಾ. ಅಶೋಕ ಶೆಟ್ಟರ, ಶೀಲಾಧರ ಮುಗಳಿ, ಡಾ. ಶರಣಮ್ಮ ಗೊರೆಬಾಳ, ಪ್ರಭು ಕುಂದರಗಿ ಹಾಗೂ ಪುನರ್ವಸು ಬೇಂದ್ರೆ ನೇಮಕ ಮಾಡಿ ಸರ್ಕಾರ ಆದೇಶಿಸಿದೆ.