ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ಸುತ್ತೂರು ಶ್ರೀಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಸಾನಿಧ್ಯ ವಹಿಸಿ, ನೂತನ ಸಮುದಾಯ ಭವನವನ್ನು ಉದ್ಘಾಟಿಸಿ, ಸಾರ್ವಜನಿಕರ ಸೇವೆಗೆ ಲೋಕಾರ್ಪಣೆ ಮಾಡಿದರು.
ಶ್ರೀಗಳು ಭಕ್ತಾದಿಗಳು ಹಾಗೂ ಗ್ರಾಮಸ್ಥರಿಗೆ ಆಶೀರ್ವಚನ ನೀಡಿ, ಗ್ರಾಮದ ಯುವಕರಾದ ರಾಜಮೂರ್ತಿ ಅವರು ಹುಟ್ಟಿದ ಊರಿಗೆ ಏನನ್ನಾದರೂ ಕೊಡುಗೆ ನೀಡುವ ದೃಷ್ಟಿಯಿಂದ ಉತ್ತಮ ಗುಣಮಟ್ಟದ ಅವರ ತಂದೆ ತಾಯಿಯರ ಹೆಸರಿನಲ್ಲಿ ಸಮುದಾಯ ನಿರ್ಮಾಣ ಕೈಗೊಂಡಿರುವವುದು ಒಳ್ಳೆಯ ಬೆಳವಣಿಗೆ. ಪ್ರತಿಯೊಬ್ಬ ವ್ಯಕ್ತಿಯೂ ತಾನು ಎಲ್ಲೇ ಇರಲಿ ಎಲ್ಲೇ ವಾಸ ಮಾಡಲಿ ಹುಟ್ಟೂರನ್ನು ಮರೆಯಬಾರದು ಎಂಬುದಕ್ಕೆ ಇದೊಂದು ಉತ್ತಮ ಉದಾಹರಣೆಯಾಗಿದೆ ಎಂದು ಧಾರ್ಮಿಕ ಕಾರ್ಯಗಳು ಮತ್ತು ಸಮಾಜಮುಖಿ ಸೇವೆಗಳ ಮಹತ್ವವನ್ನು ತಿಳಿಸಿದರು.ಅಧ್ಯಕ್ಷತೆ ವಹಿಸಿದ್ದ ಕ್ಷೇತ್ರದ ಶಾಸಕ ಎಚ್.ಟಿ. ಮಂಜು ಮಾತನಾಡಿ, ಶ್ರೀ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿಗಳ ಆಶೀರ್ವಾದ ಪಡೆದು ಮಾತನಾಡಿ, ಸಮಾಜದ ಒಳಿತಿಗಾಗಿ ಹಾಗೂ ಗ್ರಾಮೀಣ ಜನರ ಅನುಕೂಲಕ್ಕಾಗಿ ಸಮುದಾಯ ಭವನಗಳನ್ನು ನಿರ್ಮಿಸುವುದು ಅತ್ಯಂತ ಶ್ಲಾಘನೀಯ ಕಾರ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.
ತೆಂಡೇಕೆರೆ ಬಾಳೆಹೊನ್ನೂರು ಶಾಖಾ ಮಠದ ಶ್ರೀ ಗಂಗಾಧರ ಶಿವಾಚಾರ್ಯ ಸ್ವಾಮೀಜಿ, ಶ್ರೀ ಕ್ಷೇತ್ರ ಗವಿಮಠ ಪೀಠಾಧಿಪತಿ ಶ್ರೀ ಚೆನ್ನವೀರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.