ನೂತನ ಡಿಸಿ ಸಂಗಪ್ಪ.ಎಂ ಅಧಿಕಾರ ಸ್ವೀಕಾರ

KannadaprabhaNewsNetwork |  
Published : Jun 18, 2025, 11:48 PM IST
ನಿಕಟಪೂರ್ವ ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಅವರು ನೂತನ ಜಿಲ್ಲಾಧಿಕಾರಿಗಳಿಗೆ ಪುಷ್ಪ ನೀಡಿ ಸ್ವಾಗತಿಸುವ ಮೂಲಕ ಅಧಿಕಾರವನ್ನು ಹಸ್ತಾಂತರಿಸಿದರು | Kannada Prabha

ಸಾರಾಂಶ

ಬಾಗಲಕೋಟೆ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಸಂಗಪ್ಪ ಎಂ. ಅವರು ಬುಧವಾರ ಅಧಿಕಾರ ಸ್ವೀಕರಿಸಿದರು. ನಿಕಟಪೂರ್ವ ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಅವರು ನೂತನ ಜಿಲ್ಲಾಧಿಕಾರಿಗೆ ಪುಷ್ಪ ನೀಡಿ ಸ್ವಾಗತಿಸುವ ಮೂಲಕ ಅಧಿಕಾರ ಹಸ್ತಾಂತರಿಸಿದರು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಬಾಗಲಕೋಟೆ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಸಂಗಪ್ಪ ಎಂ. ಅವರು ಬುಧವಾರ ಅಧಿಕಾರ ಸ್ವೀಕರಿಸಿದರು. ನಿಕಟಪೂರ್ವ ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಅವರು ನೂತನ ಜಿಲ್ಲಾಧಿಕಾರಿಗೆ ಪುಷ್ಪ ನೀಡಿ ಸ್ವಾಗತಿಸುವ ಮೂಲಕ ಅಧಿಕಾರ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಅಶೋಕ ತೇಲಿ, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ, ಉಪವಿಭಾಗ ಅಧಿಕಾರಿಗಳಾದ ಸಂತೋಷ ಜಗಲಾಸರ, ಶ್ವೇತಾ ಬೀಡಿಕರ ಸೇರಿದಂತೆ ಆಯಾ ತಾಲೂಕಿನ ತಹಸೀಲ್ದಾರರು ಹಾಗೂ ಜಿಲ್ಲಾಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಪುಷ್ಪ ಅರ್ಪಿಸಿ ನೂತನ ಜಿಲ್ಲಾಧಿಕಾರಿ ಸ್ವಾಗತಿಸಿದರು.

ನೂತನ ಜಿಲ್ಲಾಧಿಕಾರಿಗಳು ಬಾಗಲಕೋಟೆ ಜಿಲ್ಲೆ ಬೀಳಗಿ ತಾಲೂಕಿನವರಾಗಿದ್ದು, ಪ್ರಾಥಮಿಕ ಶಿಕ್ಷಣವನ್ನು ಬೀಳಗಿ, ಮುಧೋಳ, ಬಾಗಲಕೋಟೆಯಲ್ಲಿ ಮುಗಿಸಿದ್ದಾರೆ. ಮಾಧ್ಯಮಿಕ ಹಾಗೂ ಕಾಲೇಜು ಶಿಕ್ಷಣವನ್ನು ಬಾಗಲಕೋಟೆ ಬಸವೇಶ್ವರ ಮಹಾವಿದ್ಯಾಲಯದಲ್ಲಿ ಪಡೆದು ಎಂಎಸ್ಸಿ ಮೈಕ್ರೋ ಬಯಾಲಜಿ ಬೆಂಗಳೂರಿನ ಜಿಕೆವಿಕೆ ಮಹಾವಿದ್ಯಾಲಯದಲ್ಲಿ ಮುಗಿಸಿದ್ದಾರೆ.

2007ರಲ್ಲಿ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ (ಎಸ್ಎಲ್ಓ) ಮುನಿರಾಬಾದ್, ಮೈಬೂನ ನಗರ ರೈಲ್ವೆ ಯೋಜನೆಯಲ್ಲಿ ಕಾರ್ಯನಿರ್ವಹಿಸಿದ್ದಾರೆ. 2009ರಲ್ಲಿ ಗುಲಬರ್ಗಾದ ಉಪವಿಭಾಗಾಧಿಕಾರಿ, ಬೆಂಗಳೂರಿನ ಕೆಐಡಿಬಿ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕಾರ್ಯನಿರ್ವಹಿಸಿ, ನಂತರ ಬಿಬಿಎಂಪಿ ಚುನಾವಣಾ ವಿಭಾಗದ ಉಪವಿಭಾಗ ಅಧಿಕಾರಿಯಾಗಿ, ಬೆಂಗಳೂರಿನ ಆರ್‌ಟಿಐ ಕಾರ್ಯದರ್ಶಿಗಳಾಗಿ ಕಾರ್ಯನಿರ್ವಹಿಸಿದ್ದಾರೆ. ಕೋಲ್ಹಾರ ಜಿಲ್ಲೆಯ ಅಪರ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿ, ನಂತರ 2014ರಲ್ಲಿ ವೈದ್ಯಕೀಯ ಶಿಕ್ಷಣ ಸಚಿವರ ಆಪ್ತ ಕಾರ್ಯದರ್ಶಿಗಳಾಗಿ ಸಹ ಕೆಲಸ ನಿರ್ವಹಿಸಿದ್ದಾರೆ.

ಬೆಂಗಳೂರಿನ ಬುಡಕಟ್ಟು ಕಲ್ಯಾಣ ಇಲಾಖೆಯ ನಿರ್ದೇಶಕರಾಗಿ, 2016ರಲ್ಲಿ ಬೆಂಗಳೂರು ನಗರ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಹಾಗೂ ಬೆಂಗಳೂರು ನಗರ ಹೆಚ್ಚುವರಿ (ಪ್ರಭಾರ) ಜಿಲ್ಲಾಧಿಕಾರಿಗಳಾಗಿ ಕಾರ್ಯನಿರ್ವಹಿಸಿದ್ದಾರೆ. ನಂತರ ಕಿಯೋನಿಕ್ಸ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾಗಿ, ಸುವರ್ಣ ಆರೋಗ್ಯ ಟ್ರಸ್ಟ್ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಕಾರ್ಯನಿರ್ವಹಿಸಿ, ಸದ್ಯ ಬಾಗಲಕೋಟೆ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

PREV

Recommended Stories

ದೇಶದ ನಾಯಕರಾಗಲು ಶಾಲೆಯಲ್ಲಿ ನಾಯಕತ್ವ ವಹಿಸಿಕೊಳ್ಳಿ
ಪರಿಷ್ಕೃತ ಜಿಎಸ್‌ಟಿ ಬಡ ಜನತೆಗೆ ಅನುಕೂಲ