ಘಾಟಿ ದೇಗುಲಕ್ಕೆ ನೂತನ ಇಒ ನೇಮಕ

KannadaprabhaNewsNetwork | Published : Nov 4, 2023 12:30 AM

ಸಾರಾಂಶ

ದೊಡ್ಡಬಳ್ಳಾಪುರ:ತಾಲೂಕಿನ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದ ನೂತನ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಡಿ.ನಾಗರಾಜು ಅವರನ್ನು ನೇಮಿಸಿ ಸರ್ಕಾರ ಆದೇಶ ಮಾಡಿದೆ.
ದೊಡ್ಡಬಳ್ಳಾಪುರ:ತಾಲೂಕಿನ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದ ನೂತನ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಡಿ.ನಾಗರಾಜು ಅವರನ್ನು ನೇಮಿಸಿ ಸರ್ಕಾರ ಆದೇಶ ಮಾಡಿದೆ. ಕರ್ನಾಟಕ ಆಡಳಿತ ನ್ಯಾಯಮಂಡಳಿಯ ಅರ್ಜಿ ಸಂಖ್ಯೆ 437/2023 ದಿನಾಂಕ: 01-04-2023ರ ತೀರ್ಪಿನ ಅನ್ಚಯ ತಕ್ಷಣದಿಂದ ಜಾರಿಗೆ ಬರುವಂತೆ ಶ್ರೀ ಸುಬ್ರಮಣ್ಯ ಸ್ವಾಮಿ ದೇವಾಲಯ, ದೊಡ್ಡಬಳ್ಳಾಪುರ ತಾಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ. ಇಲ್ಲಿನ ಕಾರ್ಯ ನಿರ್ವಾಹಕ ಅಧಿಕಾರಿ ಹುದ್ದೆಗೆ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳಲು ಆದೇಶಿಸಿದೆ. ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಎನ್ ಕೃಷ್ಣಪ್ಪ, ಇವರನ್ನು ಎಡೆಯೂರು, ಶ್ರೀ ಸಿದ್ಧಲಿಂಗೇಶ್ವರಸ್ವಾಮಿ ದೇವಾಲಯಕ್ಕೆ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳಲು ಸೂಚಿಸಿದೆ.

Share this article