ಕನ್ನಡಪ್ರಭ ವಾರ್ತೆ ಹನೂರುಮಲೆಮಹದೇಶ್ವರ ಬೆಟ್ಟದಲ್ಲಿ ಅಕ್ಷಯ ತದಿಗೆ ಅಮಾವಾಸ್ಯೆ ಪ್ರಯುಕ್ತ ವಿವಿಧ ಉತ್ಸವಗಳು ಸಂಭ್ರಮ ಸಡಗರದೊಂದಿಗೆ ಜರುಗಿತು.
ತಾಲೂಕಿನ ಮಲೆಮಹದೇಶ್ವರ ಬೆಟ್ಟ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಡೆಯುತ್ತಿರುವ ಪೂಜಾ ಕಾರ್ಯಕ್ರಮಗಳು ಅಕ್ಷಯ ತದಿಗೆ ಅಮಾವಾಸ್ಯೆ ಪ್ರಯುಕ್ತ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಸಾಲೂರು ಬೃಹನ್ ಮಠದ ಶಾಂತಮಲ್ಲಿಕಾರ್ಜುನ ಸ್ವಾಮಿ ದಿವ್ಯ ಸಾನ್ನಿಧ್ಯದಲ್ಲಿ ಸರದಿ ಬೇಡಗಂಪಣರ ಅರ್ಚಕರ ತಂಡದಿಂದ ಮಾದೇಶ್ವರನಿಗೆ ಧಾರ್ಮಿಕವಾಗಿ ವಿಧಿ ವಿಧಾನಗಳೊಂದಿಗೆ ಅಕ್ಷಯ ತದಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜಾ ಕಾರ್ಯಕ್ರಮಗಳು ಜರುಗಿತು.ಅಕ್ಷಯ ತದಿಗೆ ಅಮಾವಾಸ್ಯೆ ಪ್ರಯುಕ್ತ ಬೆಳಗ್ಗೆಯಿಂದಲೇ ಬೆಳ್ಳಿ ರಥೋತ್ಸವ ಜೊತೆಗೆ ಉತ್ಸವಗಳಾದ ಹುಲಿವಾಹನ ಉತ್ಸವ, ಬಸವ ವಾಹನ ಉತ್ಸವ, ರುದ್ರಾಕ್ಷಿ ಮಂಟಪೋತ್ಸವ ಮತ್ತು ಹರಕೆ ಹೊತ್ತ ಮಾದಪ್ಪನ ಭಕ್ತರಿಂದ ಉರುಳು ಸೇವೆ ಪಂಜಿನ ಸೇವೆ ದೂಪದ ಸೇವೆ ಮುಡಿಸೇವೆ ಪೂಜಾ ಕಾರ್ಯಕ್ರಮಗಳು ನಡೆಯಿತು
ಮಲೆಮಾದೇಶ್ವರ ಬೆಟ್ಟಕ್ಕೆ ಅಕ್ಷಯ ತದಿಗೆ ಅಮಾವಾಸ್ಯೆ ಪ್ರಯುಕ್ತ ರಾಜ್ಯದ ನಾನಾ ಭಾಗಗಳಿಂದ ಮಾದೇಶ್ವರನ ದರುಶನ ಮಾಡಲು ಸರತಿ ಸಾಲಿನಲ್ಲಿ ಸುಡು ಬಿಸಿಲನ್ನು ಸಹ ಲೆಕ್ಕಿಸದೆ ಭಕ್ತಾದಿಗಳು ಮಾದೇಶ್ವರನ ದರ್ಶನ ಪಡೆದ ಭಕ್ತಾದಿಗಳಿಗೆ ದೇವಾಲಯದ ಸುತ್ತಲೂ ಸಹ ಟ್ಯಾಂಕರ್ ನಲ್ಲಿ ಬಿಸಿಲು ಹೆಚ್ಚಾದ ಕಾರಣ ಕ್ಷೇತ್ರ ಅಭಿವೃದ್ಧಿ ಪ್ರಾಧಾಕರ ವತಿಯಿಂದ ನೀರನ್ನು ಹಾಕುವ ಮೂಲಕ ಭಕ್ತಾದಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಸಹ ಕಲ್ಪಿಸಲಾಗಿತ್ತು.ಕಾರ್ಯಕ್ರಮದ ವತಿಯಿಂದ ಮಲೆ ಮಾದೇಶ್ವರ ಬೆಟ್ಟಕ್ಕೆ ಬಂದಂತಹ ಭಕ್ತಾದಿಗಳಿಗೆ ವಿಶೇಷ ದಾಸೋಹ ವ್ಯವಸ್ಥೆ ಕಲ್ಪಿಸಿ ಮಾತು ಮೊಸರನ್ನ ಉಪಹಾರವನ್ನು ಭಕ್ತಾದಿಗಳಿಗೆ ನೀಡಿದ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಅಧಿಕಾರಿ ಸಿಬ್ಬಂದಿ ವರ್ಗದವರು ಅಚ್ಚುಕಟ್ಟಾಗಿ ಸರತಿ ಸಾಲಿನಲ್ಲಿ ಬರುವ ಭಕ್ತಾದಿಗಳಿಗೆ ಉಪಹಾರ ವ್ಯವಸ್ಥೆ ಕಲ್ಪಿಸಿದ್ದರು.
ಆಲಂಬಾಡಿ ಬಸವನಿಗೆ ಪೂಜೆ:ಭಕ್ತಾದಿಗಳಿಂದ ದೇವಾಲಯದ ದ್ವೀಪದಲ್ಲಿರುವ ಅಲಂಬಡಿ ಬಸವನಿಗೆ ಎಣ್ಣೆ ಹಾಗೂ ಆಲಾಭಿಷೇಕ ಮಾಡಿ ರೈತರು ಬೆಳೆದಂತಹ ದವಸ ಧಾನ್ಯಗಳನ್ನು ಆಲಂಬಾಡಿ ಬಸವನಿಗೆ ಎರಚುವ ಮೂಲಕ ಇಷ್ಟಾರ್ಥ ಸಿದ್ಧಿಸುವಂತೆ ಪೂಜೆ ಸಲ್ಲಿಸಿದರು.
ಅಕ್ಷಯ ತದಿಗೆ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆಗೆ ರಾಜ್ಯದ ನಾನಾ ಭಾಗಗಳಿಂದ ಅಪಾರ ಭಕ್ತಾದಿಗಳು ಆಗಮಿಸಿದ್ದು, ಹಿರಿಯ ನಾಗರಿಕರಿಗೆ ವಿಶೇಷ ಕೌಂಟರ್‌ನಲ್ಲಿ ಮಾದಪ್ಪನ ದರ್ಶನ ಕಲ್ಪಿಸಲಾಗಿದೆ. ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಬಿಸಿಲು ಹೆಚ್ಚಾಗಿರುವ ಕಾರಣ ದೇವಾಲಯದ ಸುತ್ತಲೂ ಟ್ಯಾಂಕರ್ ಮೂಲಕ ಕುಡಿವ ನೀರನ್ನು ಹಾಕಲಾಗಿದೆ. ಮೂಲ ಸೌಲಭ್ಯಗಳನ್ನು ಕಲ್ಪಿಸಲು ಅಧಿಕಾರಿ ಸಿಬ್ಬಂದಿಗೆ ಯಾವುದೇ ಲೋಪದೋಷಗಳು ಬರದಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ.ಎ. ಇ ರಘು, ಕಾರ್ಯದರ್ಶಿಗಳು, ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಮಲೆ ಮಾದೇಶ್ವರ ಬೆಟ್ಟ