ಕನ್ನಡಪ್ರಭ ವಾರ್ತೆ ಹನೂರುತಾಲೂಕಿನ ಮಲೆ ಮಾದೇಶ್ವರ ಬೆಟ್ಟದಲ್ಲಿ ಅಮಾವಾಸ್ಯೆ ಪ್ರಯುಕ್ತ ಮಳೆಯನ್ನು ಲೆಕ್ಕಿಸದೇ ಭಕ್ತರು ಪೂಜೆ ಸಲ್ಲಿಸಿದರು.ಮಲೆ ಮಾದೇಶ್ವರ ಬೆಟ್ಟ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಡೆಯುತ್ತಿರುವ ಅಮಾವಾಸ್ಯೆ ಪೂಜೆಯನ್ನು ಸಾಲೂರು ಬೃಹನ್ ಮಠದ ಪೀಠಾಧಿಪತಿ ಶಾಂತ ಮಲ್ಲಿಕಾರ್ಜುನ ಸ್ವಾಮಿ ದಿವ್ಯ ಸಾನಿಧ್ಯದಲ್ಲಿ ಬೇಡಗಂಪಣ ಅರ್ಚಕರ ಸರದಿಯಂತೆ ಸಾಂಪ್ರದಾಯಿಕವಾಗಿ ಪೂಜಾ ಕಾರ್ಯಕ್ರಮವು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಸಂಭ್ರಮ ಸಡಗರದಿಂದ ಜರುಗಿತು.
ವಿಶೇಷ ದಾಸೋಹ:
ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಅಮಾವಾಸ್ಯೆ ವಿಶೇಷ ಪೂಜೆಗೆ ರಾಜ್ಯದ ನಾನಾ ಭಾಗಗಳಿಂದ ಬಂದಿದ್ದ ಭಕ್ತಾದಿಗಳಿಗೆ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ದಾಸೋಹ ಭವನದಲ್ಲಿ ಬೆಳಗಿನ ಉಪಹಾರ ಹಾಗೂ ಮಧ್ಯಾಹ್ನದ ಭೋಜನ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು.ಸಾಲೂರು ಮಠಕ್ಕೆ ಭೇಟಿ:ಮಲೆ ಮಾದೇಶ್ವರ ಬೆಟ್ಟಕ್ಕೆ ಬಂದಂತ ಭಕ್ತಾದಿಗಳು ಅಮಾವಾಸ್ಯೆ ಪ್ರಯುಕ್ತ ಮಾದೇಶ್ವರನ ದರುಶನ ಪಡೆದು ಶ್ರೀ ಕ್ಷೇತ್ರದ ಶಾಲೂರು ಮಠಕ್ಕೆ ಮಾದಪ್ಪನ ಭಕ್ತಾದಿಗಳು ಭೇಟಿ ನೀಡಿ ಶ್ರೀಗಳಿಂದ ಆಶೀರ್ವಾದ ಪಡೆದು ಅಲ್ಲಿನ ದಾಸೋಹದಲ್ಲಿ ದಾಸೋಹ ಮೂಲಕ ಭಕ್ತಾದಿಗಳು ತಮ್ಮ ಇಷ್ಟಾರ್ಥ ಸಿದ್ಧಿಸುವಂತೆ ಮಾದೇಶ್ವರನಲ್ಲಿ ನಿವೇದನೆ ಮಾಡಿಕೊಂಡರು.ಸೂಕ್ತ ಬಂದೋಬಸ್ತ್:
ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಅಮಾವಾಸ್ಯೆ ಪೂಜೆಗೆ ರಾಜ್ಯದ ನಾನಾ ಭಾಗಗಳಿಂದ ಅಪಾರ ಸಂಖ್ಯೆಯ ಭಕ್ತಾದಿಗಳು ಆಗಮಿಸಿರುವ ಹಿನ್ನೆಲೆಯಲ್ಲಿ ಯಾವುದೇ ಹಿತಕರ ಘಟನೆಗಳು ಜರುಗದಂತೆ ಮುಂಜಾಗ್ರತ ಕ್ರಮವಾಗಿ ಪೋಲಿಸ್ ಇಲಾಖೆ ಆಯಾ ಕಟ್ಟಿನ ಸ್ಥಳಗಳಲ್ಲಿ ಪೊಲೀಸರನ್ನು ನಿಯೋಜನೆ ಮಾಡುವ ಮೂಲಕ ಬಿಗಿ ಬಂದೋಬಸ್ತ್ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು.------
27ಸಿಎಚ್‌ಎನ್51, 52ಹನೂರು ತಾಲೂಕಿನ ಮಲೆ ಮಾದೇಶ್ವರ ಬೆಟ್ಟದಲ್ಲಿ ಅಮಾವಾಸ್ಯೆ ಪ್ರಯುಕ್ತ ಮಳೆಯನ್ನು ಲೆಕ್ಕಿಸದೇ ಪೂಜೆ ಸಲ್ಲಿಸಲು ಭಕ್ತರು ಆಗಮಿಸಿರುವುದು.
----------