ಕಾನಿಪ ಸಂಘದ ನೂತನ ಪದಾಧಿಕಾರಿಗಳಿಗೆ ಸನ್ಮಾನ

KannadaprabhaNewsNetwork |  
Published : Nov 22, 2025, 03:15 AM IST
ಸನ್ಮಾನ | Kannada Prabha

ಸಾರಾಂಶ

ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷ ಅಶೋಕ ಯಡಳ್ಳಿ ಮತ್ತು ಪ್ರಧಾನ ಕಾರ್ಯದರ್ಶಿ ಇಂದುಶೇಖರ ಮಣೂರ ಅವರು ಎಲ್ಲ ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಂಘವನ್ನು ಅಭಿವೃದ್ಧಿಪಡಿಸಲು ಪಣ ತೊಡಬೇಕು ಎಂದು ಹಿರಿಯ ಪತ್ರಕರ್ತ ಮಾಧವರಾವ ಕುಲಕರ್ಣಿ ಸಲಹೆ ನೀಡಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ನಗರದ ಕನಕದಾಸ ಬಡಾವಣೆಯ ತಮ್ಮ ಕಾರ್ಯಾಲಯದಲ್ಲಿ ಕಾನಿಪ ಸಂಘದ ನೂತನ ಪದಾಧಿಕಾರಿಗಳನ್ನು ಸನ್ಮಾನಿಸಿ ಮಾತನಾಡಿದರು. ಜಿಲ್ಲಾಧ್ಯಕ್ಷ ಅಶೋಕ ಯಡಳ್ಳಿ ಹಾಗೂ ಪ್ರಧಾನ ಕಾರ್ಯದರ್ಶಿ ಇಂದುಶೇಖರ ಮಣೂರ ಮಾತನಾಡಿದರು.ಇದೇ ವೇಳೆ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳಾದ ಜಿಲ್ಲಾಧ್ಯಕ್ಷ ಅಶೋಕ ಯಡಳ್ಳಿ, ಪ್ರಧಾನ ಕಾರ್ಯದರ್ಶಿ ಇಂದುಶೇಖರ ಮಣೂರ, ಉಪಾಧ್ಯಕ್ಷರಾದ ಶಶಿಕಾಂತ ಮೆಂಡೆಗಾರ, ಸಮೀರ್‌ ಇನಾಮದಾರ, ಖಜಾಂಚಿ ರಾಹುಲ ಆಪ್ಟೆ, ಕಾರ್ಯದರ್ಶಿಗಳಾದ ಅವಿನಾಶ ಬಿದರಿ, ವಿನೋದ ಸಾರವಾಡ ಹಾಗೂ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರಾದ ಗುರುರಾಜ ಗದ್ದನಕೇರಿ, ಸುರೇಶ ತೆರದಾಳ, ಚಿದಂಬರ ಕುಲಕರ್ಣಿ, ಸುಧೀಂದ್ರ ಕುಲಕರ್ಣಿ, ಶ್ರೀನಿವಾಸ ಸೂರಗೊಂಡ, ಗೋಪಾಲ ಕನಿಮಣಿ, ಕಲ್ಲಪ್ಪ ಶಿವಶರಣ, ಪ್ರಭು ಕುಮಟಗಿ ಅವರನ್ನು ಮಾಧವರಾವ ಕುಲಕರ್ಣಿ ಮತ್ತು ಅವರ ಪುತ್ರ ಪವನ ಕುಲಕರ್ಣಿ ಸನ್ಮಾನಿಸಿ, ಗೌರವಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹೈಕೋರ್ಟ್‌ ಹೊಸ ಕಟ್ಟಡಕ್ಕೆ 30 ಎಕ್ರೆಕೋರಿಕೆ:ರಾಜ್ಯ ಸರ್ಕಾರಕ್ಕೆ ನೋಟಿಸ್‌
ಬಿಎಂಐಸಿ ಮರುಪರಿಶೀಲಿಸಿ: ರಾಜ್ಯಕ್ಕೆ ಕೋರ್ಟ್‌ ಸೂಚನೆ