ಕನ್ನಡಪ್ರಭ ವಾರ್ತೆ ಬೀಳಗಿ
ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ನೂತನ ಕಚೇರಿ ಪೂಜಾ ಕಾರ್ಯಕ್ರಮ ನ.೨೨ ರಂದು ಬೆಳಗ್ಗೆ ೧೨.೦೦ ಗಂಟೆಗೆ ಜರುಗಲಿದೆ ಎಂದು ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಣವೀರಯ್ಯ ಪ್ಯಾಟಿಮಠ ಹೇಳಿದರು.ಪಟ್ಟಣದ ಸಿದ್ಧೇಶ್ವರ ಸೌಹಾರ್ದ ಸಹಕಾರಿ ಬ್ಯಾಂಕಿನ ಸಭಾ ಭವನದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೀಳಗಿ ಮಿನಿವಿಧಾನ ಸೌಧದ 1ನೇ ಮಹಡಿಯ ಕೊಠಡಿ ಸಂಖ್ಯೆ ೯ರಲ್ಲಿ ತಾಲೂಕು ಆಡಳಿತ ಹಾಗೂ ತಾಲೂಕು ಪಂಚಾಯತಿ ಬೀಳಗಿ, ಆಶ್ರಯದಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ನೂತನ ಕಚೇರಿ ಪೂಜಾ ಕಾರ್ಯಕ್ರಮದ ಉದ್ಘಾಟನೆಯನ್ನು ಅಬಕಾರಿ ಸಚಿವರ ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಮಾಡಲಿದ್ದಾರೆ. ಹಟ್ಟಿ ಚಿನ್ನದ ಗಣಿ ನಿಗಮ ಅಧ್ಯಕ್ಷರು ಹಾಗೂ ಬೀಳಗಿ ಮತಕ್ಷೇತ್ರದ ಶಾಸಕ ಜೆ.ಟಿ.ಪಾಟೀಲ ಅಧ್ಯಕ್ಷತೆ ವಹಿಸಲಿದ್ದಾರೆ. ಬಾಗಲಕೋಟೆ ಮತಕ್ಷೇತ್ರದ ಶಾಸಕ ಹಾಗೂ ಬಾಗಲಕೋಟೆ ಪಟ್ಟಣದ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಚ್.ವೈ.ಮೇಟಿ, ವಿಪ ಸದಸ್ಯ ಪ್ರಕಾಶ ಹುಕ್ಕೇರಿ, ಹುನಗುಂದ ಮತಕ್ಷೇತ್ರದ ಶಾಸಕ ಹಾಗೂ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ, ಲೋಕಸಭಾ ಸದಸ್ಯ ಪಿ.ಸಿ.ಗದ್ದಿಗೌಡರ, ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ, ವಿಧಾನ ಪರಿಷತ್ ಸದಸ್ಯ ಹಣಮಂತ ಆರ್.ನಿರಾಣಿ, ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಬಿ.ಪಾಟೀಲ, ವಿಧಾನ ಪರಿಷತ್ತ ಸದಸ್ಯ ಪಿ.ಎಚ್.ಪೂಜಾರ, ತೇರದಾಳ ಶಾಸಕ ಸಿದ್ದು ಸವದಿ, ಜಮಖಂಡಿ ಶಾಸಕ ಜಗದೀಶ ಗುಡಗುಂಡಿ, ಬಾದಾಮಿ ಶಾಸಕ ಭೀಮಸೇನ ಚಿಮ್ಮನಕಟ್ಟಿ, ವಿಧಾನ ಪರಿಷತ್ ಸದಸ್ಯೆ ಉಮಾಶ್ರೀ, ಬಾಗಲಕೋಟೆ ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಡಾ.ಸಾಗರ.ಎಚ್.ತೆಕ್ಕೆನ್ನವರ ಮತ್ತು ತಾಲೂಕಿನ ಕಾಂಗ್ರೆಸ್ ಪಕ್ಷದ ಎಲ್ಲ ಘಟಕಗಳ ಅಧ್ಯಕ್ಷರುಗಳು ಸದಸ್ಯರುಗಳು ಆಗಮಿಸಲಿದ್ದಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಸದಸ್ಯರಾದ ಶ್ರೀಶೈಲ ಅಂಟಿನ, ಅನಿಲ ಗಚ್ಚಿನಮನಿ, ಶಿವಾನಂದ ಮಾದರ, ಎಂ.ಎಸ್.ಕಾಳಗಿ, ಉದಯ ರಜಪೂತ, ಹನಮಂತ ಕಟ್ಟೆಪ್ಪನವರ, ಚಂದ್ರಶೇಖರ ಪಂಢರಿ ಮತ್ತಿತರರು ಇದ್ದರು.ಉದ್ಘಾಟನೆ ಕಾರ್ಯಕ್ರಮ ಮುಗಿದ ಮೇಲೆ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯರಿಗೆ ಕಾರ್ಯಾಗಾರ ಮಾಡಲಾಗುವುದು.
-ಅಣವೀರಯ್ಯ ಪ್ಯಾಟಿಮಠ, ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರು.