ಕನ್ನಡಪ್ರಭ ವಾರ್ತೆ ಮದ್ದೂರು
ತಾಲೂಕಿನ ಚನ್ನಸಂದ್ರ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಸಿ.ಟಿ.ಲೋಕೇಶ್, ಉಪಾಧ್ಯಕ್ಷರಾಗಿ ಸಿ.ಎಸ್.ನಟರಾಜು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಸಂಘದ ಹಿಂದಿನ ಅಧ್ಯಕ್ಷ ಸಿ.ಎಚ್.ರವಿ, ಉಪಾಧ್ಯಕ್ಷ ಈ.ರಾಜು ಅವರುಗಳ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಚುನಾವಣೆ ನಡೆದು ಸಿ.ಟಿ.ಲೋಕೇಶ್ ಹಾಗೂ ಸಿ.ಎಸ್.ನಟರಾಜು ಹೊರತುಪಡಿಸಿ ಬೇರೆಯವರು ನಾಮಪತ್ರ ಸಲ್ಲಿಸದ ಕಾರಣ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಚುನಾವಣಾ ಅಧಿಕಾರಿಯಾಗಿದ್ದ ಕಾರ್ಯದರ್ಶಿ ಸೋಮಲಿಂಗಯ್ಯ ಪ್ರಕಟಿಸಿದರು.
ಅಧಿಕಾರ ಸ್ವೀಕರಿಸಿದ ನೂತನ ಅಧ್ಯಕ್ಷ ಲೋಕೇಶ್, ಹಳ್ಳಿಗಾಡಿನ ರೈತರ ಜೀವನಾಡಿ ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ರೈತರು ಗುಣಮಟ್ಟದ ಹಾಲನ್ನು ಸರಬರಾಜು ಮಾಡಲು ಆದ್ಯತೆ ನೀಡಬೇಕು. ಇದರಿಂದ ರೈತರ ಜೊತೆಗೆ ಸಂಘಗಳು ಆರ್ಥಿಕವಾಗಿ ಅಭಿವೃದ್ಧಿ ಹೊಂದುವ ಜೊತೆಗೆ ಹಾಲು ಒಕ್ಕೂಟ ಗ್ರಾಹಕರಿಗೆ ಗುಣಮಟ್ಟದ ಹಾಲು ಮಾರಾಟ ಮಾಡಲು ಸಾಧ್ಯವಾಗುತ್ತದೆ ಎಂದರು.ಈ ವೇಳೆ ನಿಕಟ ಪೂರ್ವ ಅಧ್ಯಕ್ಷ ಸಿ.ಎಚ್.ರವಿ ಚನ್ನಸಂದ್ರ, ನಿರ್ದೇಶಕರಾದ ಸಿ.ಆರ್.ಪ್ರಮೋದ್, ಈ.ರಾಜು, ಸಿ.ಎಲ್.ಶ್ರೀಧರ ಬಾಬು, ಅಂಬಿಕಾ, ಅರವಿಂದ, ಸುನಂದ, ಪುಷ್ಪ, ಆಂಜನಪ್ಪ ಹಾಗೂ ಗ್ರಾಮದ ಮುಖಂಡರು ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ಮಾಲಾರ್ಪಣೆ ಮಾಡಿ ಅಭಿನಂದಿಸಿದರು.
ಅನಿಕೇತನ ಕುಟುಂಬದ ೧೨ನೇ ವರ್ಷದ ಸಂಭ್ರಮಾಚರಣೆಕನ್ನಡಪ್ರಭ ವಾರ್ತೆ ಮಂಡ್ಯ
ತಾಲೂಕಿನ ಯಲಿಯೂರು ಸರ್ಕಲ್ ಬಳಿ ಇರುವ ಅನಿಕೇತನ ಸ್ಕೂಲ್ ಆಫ್ ಎಜುಕೇಷನ್ ಹನ್ನೆರಡನೇ ವರ್ಷದ ಸಂಭ್ರಮಾಚರಣೆಯನ್ನು ಆಚರಿಸಲಾಯಿತು. ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯದ ವಿಶ್ರಾಂತ ಉಪ ಕುಲಪತಿ ಡಾ.ಕರಿಸಿದ್ದಪ್ಪ, ಮೈಸೂರಿನ ಮಹಾರಾಜ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನ ಕಾರ್ಯದರ್ಶಿ ಡಾ.ಟಿ.ವಾಸುದೇವ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಹತ್ತು ವರ್ಷ ಪೂರೈಸಿದ ಅಧ್ಯಾಪಕರು, ಅಧ್ಯಾಪಕೇತರರಿಗೆ ನೆನಪಿನ ಕಾಣಿಕೆ ನೀಡಿ ಪುರಸ್ಕರಿಸಲಾಯಿತು. ಸಂಸ್ಥೆಯ ಅಧ್ಯಕ್ಷ ಡಾ.ಕೆ.ಎಂ.ಜಗದೀಶ್, ಕಾರ್ಯದರ್ಶಿ ಚುಂಚೇಗೌಡ, ಸಂಸ್ಥಾಪನಾ ಕಾರ್ಯದರ್ಶಿ ಡಾ.ರಾಮಲಿಂಗಯ್ಯ ಹಾಗೂ ಆಡಳಿತ ಮಂಡಳಿಯ ಸದಸ್ಯರು ಭಾಗವಹಿಸಿದ್ದರು.