ಜೇಸಿಐ ಸೋಮವಾರಪೇಟೆ ಪುಷ್ಪಗಿರಿ ಸಂಸ್ಥೆಯ ೨೦೨೬ರ ಪದಗ್ರಹಣ ಕಾರ್ಯಕ್ರಮ ಮಹಿಳಾ ಸಮಾಜದ ಸಭಾಂಗಣದಲ್ಲಿ ನಡೆಯಿತು.
ಕನ್ನಡಪ್ರಭವಾರ್ತೆ ಸೋಮವಾರಪೇಟೆ
ಇಲ್ಲಿನ ಜೇಸಿಐ ಸೋಮವಾರಪೇಟೆ ಪುಷ್ಪಗಿರಿ ಸಂಸ್ಥೆಯ ೨೦೨೬ರ ಪದಗ್ರಹಣ ಕಾರ್ಯಕ್ರಮ ಶುಕ್ರವಾರ ಮಹಿಳಾ ಸಮಾಜದ ಸಭಾಂಗಣದಲ್ಲಿ ನಡೆಯಿತು. ಝೋನ್ ೧೪ರ ಅಧ್ಯಕ್ಷ ಪ್ರಜ್ವಲ್ ಎಸ್ ಜೈನ್ ಪದಗ್ರಹಣ ನೆರವೇರಿಸಿದರು. ಈ ಸಂದರ್ಭ ಝೋನ್ ಉಪಾಧ್ಯಕ್ಷ ಬಿ.ಎಂ. ಜಗತ್, ನಿಕಟಪೂರ್ವ ಅಧ್ಯಕ್ಷೆ ಜಗದಾಂಬ ಗುರುಪ್ರಸಾದ್, ನೂತನ ಸಾಲಿನ ಅಧ್ಯಕ್ಷೆ ಮಂಜುಳಾ ಸುಬ್ರಮಣಿ, ಪ್ರಧಾನ ಕಾರ್ಯದರ್ಶಿ ಜ್ಯೋತಿ ರಾಜೇಶ್, ಮಹಿಳಾ ಘಟಕದ ಅಧ್ಯಕ್ಷೆ ಶ್ರೀಜ, ಜೂನಿಯರ್ ಜೇಸಿ ಅಧ್ಯಕ್ಷೆ ಭಾವನ್ಯ ಸೇರಿದಂತೆ ಪದಾಧಿಕಾರಿಗಳು ಪಾಲ್ಗೊಂಡಿದ್ದರು.
---------------------------------------
ಯದುವೀರ್ ಸಂಸದರಾದ ಬಳಿಕ ಅನೇಕ ಯೋಜನೆಗಳು ಸ್ಥಗಿತ: ಎಂ.ಲಕ್ಷ್ಮಣ್ ಆರೋಪ
ಕನ್ನಡಪ್ರಭ ವಾರ್ತೆ ಮಡಿಕೇರಿಯದುವೀರ್ ಒಡೆಯರ್ ಸಂಸದರಾದ ನಂತರ ಅನೇಕ ಯೋಜನೆಗಳು ಸ್ಥಗಿತಗೊಂಡಿದ್ದು, ರಾಜ್ಯ ಸರ್ಕಾರದ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಹೇಳಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರಕುಶಲ ಕರ್ಮಿಗಳಿಗೆ ಉತ್ತೇಜನ ನೀಡಲು ಒಂದು ಜಿಲ್ಲೆ, ಒಂದು ಉತ್ಪಾದನೆ ಯೋಜನೆಯಡಿ 193 ಕೋಟಿ ರು..ಗಳ ಯೂನಿಟ್ ಮಾಲ್ ತರಬೇತಿ ಕೇಂದ್ರ ಸ್ಥಾಪನೆ, ಚಾಮುಂಡಿ ಬೆಟ್ಟದಲ್ಲಿ ಮೂಲಭೂತ ಸೌಲಭ್ಯಗಳನ್ನು ಒದಗಿಸಲು 46 ಕೋಟಿ ರು.ಗಳ ಯೋಜನೆ, ಸುಮಾರು 175 ಕೋಟಿ ರೂ.ಗಳ ಕ್ಯಾನ್ಸರ್ ಸೆಂಟರ್ ಸ್ಥಾಪನೆ, ಮೈಸೂರು ಏರ್ಪೋರ್ಟ್ ವಿಸ್ತರಣೆ, ರಿಂಗ್ ರೋಡ್ ಸೇರಿದಂತೆ ಹಲವು ಯೋಜನೆಗಳು ಯದುವೀರ್ ಸಂಸದರಾದ ಬಳಿಕ ನೆನೆಗುದಿಗೆ ಬಿದ್ದಿದೆ ಎಂದು ಹೇಳಿದರು.ಮೈಸೂರು-ಕುಶಾಲನಗರ ರೈಲು ಮಾರ್ಗದ ಯೋಜನೆ ಆರ್ಥಿಕವಾಗಿ ಲಾಭದಾಯಕವಲ್ಲ ಎನ್ನುವ ಕಾರಣಕ್ಕೆ ರೈಲ್ವೆ ಇಲಾಖೆ ಈ ಯೋಜನೆಯನ್ನು ಕೈಬಿಟ್ಟಿದೆ. ಸುಮಾರು 87 ಕಿ.ಮೀ ಉದ್ದದ ರೈಲು ಮಾರ್ಗದ ಯೋಜನೆಗೆ ಅಗತ್ಯವಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ಪೂರ್ಣಗೊಳಿಸಿದೆ. ಆದರೂ ಸಂಸದರು ರಾಜ್ಯ ಸರ್ಕಾರ ಭೂಸ್ವಾಧೀನ ಪಡಿಸಿಕೊಳ್ಳುವಲ್ಲಿ ವಿಳಂಬ ಮಾಡಿರುವುದು ಕಾರಣವೆಂದು ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಟೀಕಿಸಿದರು.
ಕುಶಾಲನಗರ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ವಿ.ಪಿ.ಶಶಿಧರ್ ಮಾತನಾಡಿ, ವಿಬಿ.ಜಿ.ರಾಮ್ ಜಿ ಯೋಜನೆಯಿಂದಾಗುವ ದುಷ್ಪರಿಣಾಮದ ಕುರಿತು ಕಾಂಗ್ರೆಸ್ ಪಕ್ಷದಿಂದ ಜನಜಾಗೃತಿ ಮೂಡಿಸಲಾಗುವುದು ಎಂದರು.ಗೋಷ್ಠಿಯಲ್ಲಿ ಪ್ರಮುಖರಾದ ಹೆಚ್.ಎಂ.ನಂದಕುಮಾರ್, ಸುರಯ್ಯ ಅಬ್ರಾರ್, ಸಾಮಾಜಿಕ ಜಾಲತಾಣದ ಜಿಲ್ಲಾಧ್ಯಕ್ಷ ಸೂರಜ್ ಹೊಸೂರು ಹಾಗೂ ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎ.ಹಂಸ ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.