ಡಿಸಿಸಿ ಬ್ಯಾಂಕಿಗೆ 140 ಹುದ್ದೆಗಳ ನೇಮಕಾತಿಗೆ ಹೊಸ ಪ್ರಸ್ತಾವ

KannadaprabhaNewsNetwork |  
Published : Sep 19, 2026, 02:45 AM IST
ಕೆ ಕೆ ಪಿ ಸುದ್ದಿ, , 02:ಕಾವೇರಿ  ನೀರಾವರಿ ನಿಗಮ ಅಧಿಕಾರಿಗಳನ್ನು ಅಮಾನತು ಮಾಡುವಂತಒತ್ತಾಯ.  | Kannada Prabha

ಸಾರಾಂಶ

ಬೆಳಗಾವಿ ಜಿಲ್ಲಾ ಮಧ್ಯವರ್ತಿ ಸಹಕಾರಿ ಬ್ಯಾಂಕ್‌ (ಬಿಡಿಸಿಸಿ)ನಲ್ಲಿ 140 ಖಾಲಿ ಹುದ್ದೆಗಳ ನೇಮಕಾತಿಗಾಗಿ ಪರಿಷ್ಕೃತ ಪ್ರಸ್ತಾವ ಸಿದ್ಧಪಡಿಸಿ ಸರ್ಕಾರದ ಅನುಮೋದನೆಗೆ ಕಳುಹಿಸಲಾಗಿದೆ. ಸರ್ಕಾರದ ಅನುಮೋದನೆ ದೊರೆತ ಕೂಡಲೇ ನೇಮಕಾತಿ ಅಧಿಸೂಚನೆ ಹೊರಡಿಸಿ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಜಿಲ್ಲಾ ಬ್ಯಾಂಕ್ ಅಧ್ಯಕ್ಷ ಅಣ್ಣಾಸಾಹೇಬ ಜೊಲ್ಲೆ ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಚಿಕ್ಕೋಡಿ

ಬೆಳಗಾವಿ ಜಿಲ್ಲಾ ಮಧ್ಯವರ್ತಿ ಸಹಕಾರಿ ಬ್ಯಾಂಕ್‌ (ಬಿಡಿಸಿಸಿ)ನಲ್ಲಿ 140 ಖಾಲಿ ಹುದ್ದೆಗಳ ನೇಮಕಾತಿಗಾಗಿ ಪರಿಷ್ಕೃತ ಪ್ರಸ್ತಾವ ಸಿದ್ಧಪಡಿಸಿ ಸರ್ಕಾರದ ಅನುಮೋದನೆಗೆ ಕಳುಹಿಸಲಾಗಿದೆ. ಸರ್ಕಾರದ ಅನುಮೋದನೆ ದೊರೆತ ಕೂಡಲೇ ನೇಮಕಾತಿ ಅಧಿಸೂಚನೆ ಹೊರಡಿಸಿ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಜಿಲ್ಲಾ ಬ್ಯಾಂಕ್ ಅಧ್ಯಕ್ಷ ಅಣ್ಣಾಸಾಹೇಬ ಜೊಲ್ಲೆ ತಿಳಿಸಿದ್ದಾರೆ.

ಈ ಹಿಂದೆ ಬ್ಯಾಂಕ್‌ನಲ್ಲಿ 104 ಹುದ್ದೆಗಳ ನೇಮಕಾತಿಗೆ ಅನುಮೋದನೆ ಪಡೆದು ಪ್ರಕ್ರಿಯೆ ಆರಂಭಿಸಲಾಗಿತ್ತು. ಇದಕ್ಕೆ ಸುಮಾರು 21 ಸಾವಿರ ಅರ್ಜಿಗಳು ಸಲ್ಲಿಕೆಯಾಗಿದ್ದವು. ಆದರೆ ಮೀಸಲಾತಿ, ವಿವಿಧ ಹುದ್ದೆಗಳಿಗೆ ಅಗತ್ಯವಿರುವ ಶೈಕ್ಷಣಿಕ ಅರ್ಹತೆ ಸೇರಿದಂತೆ ಕೆಲ ತಾಂತ್ರಿಕ ಅಂಶಗಳಲ್ಲಿ ತಿದ್ದುಪಡಿ ಅಗತ್ಯವಿದ್ದ ಹಿನ್ನೆಲೆಯಲ್ಲಿ ನೇಮಕಾತಿ ಪ್ರಕ್ರಿಯೆಯನ್ನು ಪರಿಷ್ಕರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಸರ್ಕಾರದ ನಿಯಮಗಳನ್ವಯ ಪರಿಷ್ಕೃತ ಪ್ರಸ್ತಾವ ಸಿದ್ಧಪಡಿಸಲಾಗಿದ್ದು, ಮಹಿಳೆಯರು ಹಾಗೂ ವಿವಿಧ ವರ್ಗಗಳಿಗೆ ಮೀಸಲಾತಿ ಕಲ್ಪಿಸಲಾಗಿದೆ. ಪ್ರತಿಯೊಂದು ಹುದ್ದೆಗೆ ಅಗತ್ಯವಿರುವ ಶೈಕ್ಷಣಿಕ ಅರ್ಹತೆಯನ್ನೂ ನಿಗದಿಪಡಿಸಲಾಗಿದೆ. ಸಹಕಾರ ಇಲಾಖೆಯ ಸೂಚನೆಗಳನ್ನು ಪಾಲಿಸಿಯೇ ನೇಮಕಾತಿ ಪ್ರಕ್ರಿಯೆ ನಡೆಸಲಾಗುವುದು ಎಂದರು.ಹಳೆಯ ಅರ್ಜಿದಾರರಿಗೆ ಮತ್ತೆ ಅರ್ಜಿ ಅಗತ್ಯವಿಲ್ಲ:

ಈ ಹಿಂದೆ 104 ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ್ದ ಸುಮಾರು 21 ಸಾವಿರ ಅಭ್ಯರ್ಥಿಗಳು ಮತ್ತೆ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ. ಅವರ ಅರ್ಜಿಗಳನ್ನು ಹೊಸ ನೇಮಕಾತಿ ಪ್ರಕ್ರಿಯೆಯಲ್ಲಿ ಪರಿಗಣಿಸಲಾಗುವುದು ಎಂದು ಜೊಲ್ಲೆ ಸ್ಪಷ್ಟಪಡಿಸಿದರು.ಪರಿಷ್ಕೃತ ಮೀಸಲಾತಿ ಅಥವಾ ಶೈಕ್ಷಣಿಕ ಅರ್ಹತೆಯನ್ವಯ ಹೊಸದಾಗಿ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಹೊಸ ಅಧಿಸೂಚನೆಯಂತೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುವುದು. ಸರ್ಕಾರದ ಅನುಮೋದನೆ ಬಳಿಕ ಹುದ್ದೆವಾರು ಶೈಕ್ಷಣಿಕ ಅರ್ಹತೆ, ಮೀಸಲಾತಿ ಹಾಗೂ ಅರ್ಜಿ ಸಲ್ಲಿಕೆ ಕುರಿತ ಸಂಪೂರ್ಣ ಮಾಹಿತಿಯೊಂದಿಗೆ ಅಧಿಕೃತ ಅಧಿಸೂಚನೆ ಪ್ರಕಟಿಸಲಾಗುವುದು. ಆದ್ದರಿಂದ ಅಭ್ಯರ್ಥಿಗಳು ಅಧಿಸೂಚನೆ ಪ್ರಕಟವಾದ ಬಳಿಕವೇ ಮುಂದಿನ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮೆಗಾಮಾರ್ಟ್ ಕಾಮಗಾರಿ ಶೀಘ್ರ ಪೂರ್ಣ
ಅನೈತಿಕ ಸಂಬಂಧ ಶಂಕೆ: ಯುವಕನ ಹತ್ಯೆ