ಕನ್ನಡಪ್ರಭ ವಾರ್ತೆ ಬೆಂಗಳೂರು
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಯುಕ್ತ ದಯಾನಂದ್ ಅವರು, ಹೆಬ್ಬಾಳ ಮೇಲ್ಸೇತುವೆಗೆ ಕೆ.ಆರ್.ಪುರ ಲೂಪ್ ಸೇರುವ ಮುಖ್ಯ ಟ್ರ್ಯಾಕ್ ಬಳಿ ಎರಡು ಸ್ಪ್ಯಾನ್‌ಗಳನ್ನು ತೆರವುಗೊಳಿಸಿ ಹೊಸದಾಗಿ ಎರಡು ಟ್ರ್ಯಾಕ್‌ಗಳನ್ನು ಸೇರಿಸುವ ಯೋಜನೆಯನ್ನು ಬಿಡಿಎ ಕೈಗೆತ್ತಿಕೊಂಡಿದೆ ಎಂದರು. ಈ ಹಿನ್ನೆಲೆಯಲ್ಲಿ ಕೆ.ಆರ್,ಪುರ ಲೂಪ್‌ನಲ್ಲಿ ನಾಲ್ಕು ತಿಂಗಳವರೆಗೆ ವಾಹನ ಸಂಚಾರ ನಿಧಾನವಾಗಲಿದೆ. ಈ ಮಾರ್ಗದಲ್ಲಿ ಸಾಗುವ ವಾಹನಗಳು ಪರ್ಯಾಯ ಹಾದಿಯಲ್ಲಿ ಸಂಚರಿಸಬೇಕು ಎಂದು ಮನವಿ ಮಾಡಿದರು.ಬದಲಾದ ಮಾರ್ಗ
-ಹೆಬ್ಬಾಳ ಮೇಲ್ಸೇತುವೆ ಕಡೆಗೆ ಸಾಗುವ ವಾಹನಗಳ ಪೈಕಿ ದ್ವಿ ಚಕ್ರ ವಾಹನಗಳ ಹೊರತುಪಡಿಸಿ ಉಳಿದ ವಾಹನಗಳಿಗೆ ಕೆ.ಆರ್.ಪುರ ಅಪ್ ರ್ಯಾಂಪ್ ಮುಚ್ಚಲಾಗಿದೆ.-ನಾಗವಾರ (ಹೊರ ವರ್ತುಲ ರಸ್ತೆ) ಕಡೆಯಿಂದ ವಾಹನಗಳ ಚಾಲಕರು ಹೆಬ್ಬಾಳ ಸರ್ಕಲ್ ಮೇಲ್ಸೇತುವೆ ಕೆಳಗಿನಿಂದ ಬಲ ತಿರುವು ಪಡೆದು ಕೊಡಿಗೇಹಳ್ಳಿ ಜಂಕ್ಷನ್ ಬಳಿ ಯೂ ಟರ್ನ್ ಪಡೆದು ಸರ್ವಿಸ್ ರಸ್ತೆ ಹಾದು ಹೆಬ್ಬಾಳ ಮೇಲ್ಸೇತುವೆ ರ್ಯಾಂಪ್ ಮೂಲಕ ನಗರದ ಕಡೆಗೆ ಚಲಿಸಬಹುದು.
-ಕೆ.ಆರ್.ಪುರ, ನಾಗವಾರ ಕಡೆಯಿಂದ ನಗರದ ಕಡೆಗೆ ಬರುವ ವಾಹನಗಳ ಚಾಲಕರು ಐಒಸಿ-ಮುಕುಂದ ಚಿತ್ರಮಂದಿರ ರಸ್ತೆ, ಲಿಂಗರಾಜಪುರ ಮೇಲ್ಸೇತುವೆ ಮಾರ್ಗ ಹಾಗೂ ನಾಗವಾರ ಟ್ಯಾನರಿ ರಸ್ತೆ ಮೂಲಕ ನಗರ ಕಡೆಗೆ ತೆರಳಬೇಕು.-ಹೆಗಡೆನಗರ-ಥಣಿಸಂದ್ರ ಕಡೆಯಿಂದ ಬರುವ ವಾಹನಗಳು ಜಿಕೆವಿಕೆ -ಜಕ್ಕೂರು ರಸ್ತೆ ಮೂಲಕ ನಗರ ಪ್ರವೇಶಿಸಬಹುದು.
-ಕೆ.ಆರ್.ಪುರ ಕಡೆಯಿಂದ ಯಶವಂತಪುರ ಕಡೆಗೆ ಚಲಿಸುವ ವಾಹನಗಳು ಹೆಬ್ಬಾಳ ಮೇಲ್ಸೇತುವೆ ಕೆಳಗಡೆ ನೇರವಾಗಿ ಬಿಇಎಲ್ ಸರ್ಕಲ್ ತಲುಪಿ ಎಡ ತಿರುವು ಪಡೆಯಬೇಕು. ಸದಾಶಿವನಗರ ಜಂಕ್ಷನ್‌ನಲ್ಲಿ ಬಲ ತಿರುವು ಪಡೆದು ಐಐಎಸ್‌ಸಿ ಮುಖಾಂತರ ತೆರಳಿ.-ಕೆ.ಆರ್.ಪುರ, ಹೆಣ್ಣೂರು, ಎಚ್‌ಬಿಆರ್ ಲೇಔಟ್, ಕೆ.ಜಿ.ಹಳ್ಳಿ, ಬಾಣಸವಾಡಿ ಕಡೆಗಳಿಂದ ಏರ್‌ಪೋರ್ಟ್ ಕಡೆ ಸಾಗುವ ವಾಹನಗಳು ಹೆಣ್ಣೂರು-ಬಾಗಲೂರು ರಸ್ತೆಯನ್ನು ಬಳಸಬಹುದು.
ಹೆಬ್ಬಾಳ ಮೇಲ್ಸೇತುವೆಯಲ್ಲಿ ಸಂಚಾರ ವ್ಯವಸ್ಥೆ ಸುಧಾರಣೆಗೆ ಬಿಡಿಎ ಕಾಮಗಾರಿ ಕೈಗೆತ್ತಿಕೊಂಡಿದೆ. ಈ ಕಾಮಗಾರಿ ಪೂರ್ಣಗೊಳ್ಳುವವರೆಗೆ ಪರ್ಯಾಯ ಮಾರ್ಗವನ್ನು ಜನರು ಬಳಸಬೇಕು. ತಾತ್ಕಾಲಿಕ ವ್ಯವಸ್ಥೆ ಸಾರ್ವಜನಿಕರು ಸಹಕರಿಸಬೇಕು.-ಬಿ.ದಯಾನಂದ್, ಪೊಲೀಸ್ ಆಯುಕ್ತ.