ಪುಟ...5ಕ್ಕೆ ಕಟ್‌ ಲೀಡ್ರೈತರ ಅನುಕೂಲಕ್ಕೆ ಹೊಸ ಯೋಜನೆ ಜಾರಿಗೆ

KannadaprabhaNewsNetwork |  
Published : Aug 20, 2026, 04:15 AM IST
ಜಾರಿ | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಹುಕ್ಕೇರಿ ಜಿಲ್ಲಾ ಮಧ್ಯವರ್ತಿ ಸಹಕಾರ ಬ್ಯಾಂಕ್ ವ್ಯವಸ್ಥೆಯನ್ನು ಬಲಪಡಿಸಿ ರಾಷ್ಟ್ರಮಟ್ಟದಲ್ಲಿ ಬ್ಯಾಂಕ್‌ನ್ನು ಪ್ರಥಮ ಸ್ಥಾನಕ್ಕೆ ಕೊಂಡೊಯ್ಯುವ ಸಂಕಲ್ಪ ಮಾಡಲಾಗಿದೆ. ರೈತರ ಅನುಕೂಲಕ್ಕಾಗಿ ಹೊಸ ಹೊಸ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಬ್ಯಾಂಕ್‌ನಿಂದ ಸಿಗುವ ಸೇವೆಗಳನ್ನು ತಳಮಟ್ಟದವರೆಗೆ ತಲುಪಿಸುವುದು ನಮ್ಮ ಗುರಿಯಾಗಿದೆ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ, ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಹೇಳಿದರು.

ಕನ್ನಡಪ್ರಭ ವಾರ್ತೆ ಹುಕ್ಕೇರಿ

ಜಿಲ್ಲಾ ಮಧ್ಯವರ್ತಿ ಸಹಕಾರ ಬ್ಯಾಂಕ್ ವ್ಯವಸ್ಥೆಯನ್ನು ಬಲಪಡಿಸಿ ರಾಷ್ಟ್ರಮಟ್ಟದಲ್ಲಿ ಬ್ಯಾಂಕ್‌ನ್ನು ಪ್ರಥಮ ಸ್ಥಾನಕ್ಕೆ ಕೊಂಡೊಯ್ಯುವ ಸಂಕಲ್ಪ ಮಾಡಲಾಗಿದೆ. ರೈತರ ಅನುಕೂಲಕ್ಕಾಗಿ ಹೊಸ ಹೊಸ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಬ್ಯಾಂಕ್‌ನಿಂದ ಸಿಗುವ ಸೇವೆಗಳನ್ನು ತಳಮಟ್ಟದವರೆಗೆ ತಲುಪಿಸುವುದು ನಮ್ಮ ಗುರಿಯಾಗಿದೆ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ, ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಹೇಳಿದರು.

ಪಟ್ಟಣದ ಹಳ್ಳದಕೇರಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಪತ್ತು ವಿತರಿಸಿ ಮಾತನಾಡಿದ ಅವರು, ರೈತರ ಕಲ್ಯಾಣಕ್ಕೆ ಆದ್ಯತೆ ನೀಡಲಾಗುತ್ತಿದ್ದು ಟ್ರ್ಯಾಕ್ಟರ್, ಪಂಪ್‌ಸೆಟ್ ಮತ್ತು ಪೈಪ್‌ಲೈನ್ ಅಳವಡಿಸಿಕೊಳ್ಳಲು ಬಯಸುವ ರೈತರಿಗೆ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಸಾಲ ವಿತರಿಸಲಾಗುತ್ತಿದೆ. ಸರ್ಕಾರದ ಮತ್ತು ಬ್ಯಾಂಕ್‌ನ ಪ್ರತಿ ಯೋಜನೆಯನ್ನು ರೈತರ ಮನೆ ಬಾಗಿಲಿಗೆ ಮುಟ್ಟಿಸುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ. ಬೆಳಗಾವಿ ಡಿಸಿಸಿ ಬ್ಯಾಂಕ್‌ನ ಆರ್ಥಿಕ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಿ ರಾಷ್ಟ್ರಮಟ್ಟದಲ್ಲಿ ನಂಬರ್ 1 ಬ್ಯಾಂಕ್ ಆಗಿಸುವ ಸಂಕಲ್ಪ ಹೊಂದಿದ್ದೇನೆ. ಕೃಷಿ ಉತ್ಪಾದನೆ ಹೆಚ್ಚಳಕ್ಕೆ ಸಹಕಾರಿಯಾಗಲು ನೀರಾವರಿ ಮತ್ತು ಹೈನುಗಾರಿಕೆಗೆ ಸಾಲ ನೀಡಲಾಗುತ್ತಿದೆ. ಸಹಕಾರಿ ಸಂಘಗಳ ಮೂಲಕ ರೈತರ ಆರ್ಥಿಕ ಸಬಲೀಕರಣಕ್ಕೆ ನಿರಂತರವಾಗಿ ಶ್ರಮಿಸುವುದಾಗಿ ಅಣ್ಣಾಸಾಹೇಬ್‌ ಜೊಲ್ಲೆ ಹೇಳಿದರು.

ಸಂಗಮ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ರಾಜೇಂದ್ರ ಪಾಟೀಲ ಮಾತನಾಡಿ, ಸಹಕಾರಿ ಸಂಸ್ಥೆಗಳು ರೈತರ ಬದುಕಿನಲ್ಲಿ ಪ್ರಮುಖ ಪಾತ್ರ ವಹಿಸುತ್ತಿವೆ. ಪಿಕೆಪಿಎಸ್ ಸಂಸ್ಥೆಯ ಸಾಲ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ರೈತರ ಆದಾಯ ಹೆಚ್ಚಿಸುವ ನಿಟ್ಟಿನಲ್ಲಿ ಕಬ್ಬು ಬೆಳೆಗೆ ರೈತರು ಹೆಚ್ಚಿನ ಒತ್ತು ನೀಡಬೇಕು ಎಂದರು.

ಮಾಜಿ ಸಚಿವ ಶಶಿಕಾಂತ ನಾಯಿಕ, ಅರ್ಬನ್ ಬ್ಯಾಂಕ್ ಅಧ್ಯಕ್ಷ ಚಂದು ಪಾಟೀಲ, ಹಿರಿಯ ವಕೀಲ ಭೀಮಸೇನ ಬಾಗಿ, ಮುಖಂಡರಾದ ರವಿ ಕರಾಳೆ, ಮಹಾವೀರ ಬಾಗಿ, ಚಿದಾನಂದ ಕಿಲ್ಲೇದಾರ, ಸಂಘದ ನಿರ್ದೇಶಕರಾದ ಬಸಗೌಡ ಪಾಟೀಲ, ಗಿರೀಶ ಪಾಟೀಲ, ಪಾರವ್ವ ಲಟ್ಟಿ, ಮಹಾದೇವ ಖುಬನ್ನಗೋಳ ಮತ್ತಿತರರು ಉಪಸ್ಥಿತರಿದ್ದರು. ಗಿರೀಶ ಪಾಟೀಲ ಸ್ವಾಗತಿಸಿದರು. ಶಿವಾನಂದ ಅಲಗರಾವುತ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಾಲುಮತದವರೇ ಜಿಪಂ ಅಧ್ಯಕ್ಷರಾಗಲು ಎಂಬಿಪಾ ಕಾರಣ: ಸೋಮನಾಥ ಕಳ್ಳಿಮನಿ
ಮಾನವೀಯತೆಯೇ ಎಲ್ಲ ಧರ್ಮಗಳ ತಿರುಳು