ಕೆಂಪೇಗೌಡ ಹೆಸರಲ್ಲಿ ಹೊಸ ಕ್ರೀಡಾಂಗಣ: ಡಿಸಿಎಂ ಡಿಕೆ

KannadaprabhaNewsNetwork |  
Published : Jun 28, 2025, 01:33 AM ISTUpdated : Jun 28, 2025, 06:23 AM IST
ಡಿ.ಕೆ.ಶಿವಕುಮಾರ್‌ | Kannada Prabha

ಸಾರಾಂಶ

ಕೆಂಪೇಗೌಡರ ಹೆಸರಿನಲ್ಲಿ ಬೆಂಗಳೂರು ನಗರದಲ್ಲಿ 60 ಸಾವಿರ ಪ್ರೇಕ್ಷಕರು ಕುಳಿತುಕೊಳ್ಳುವಂತಹ ನೂತನ ಸ್ಟೇಡಿಯಂ ನಿರ್ಮಾಣ ಮಾಡಲಾಗುವುದು. ಇದಕ್ಕಾಗಿ ಈಗಾಗಲೇ 50 ಎಕರೆ ಜಾಗ ಗುರುತಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.

 ಬೆಂಗಳೂರು :  ಕೆಂಪೇಗೌಡರ ಹೆಸರಿನಲ್ಲಿ ಬೆಂಗಳೂರು ನಗರದಲ್ಲಿ 60 ಸಾವಿರ ಪ್ರೇಕ್ಷಕರು ಕುಳಿತುಕೊಳ್ಳುವಂತಹ ನೂತನ ಸ್ಟೇಡಿಯಂ ನಿರ್ಮಾಣ ಮಾಡಲಾಗುವುದು. ಇದಕ್ಕಾಗಿ ಈಗಾಗಲೇ 50 ಎಕರೆ ಜಾಗ ಗುರುತಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.

ನಾಡಪ್ರಭು ಕೆಂಪೇಗೌಡರ 516ನೇ ಜಯಂತಿಯ ಅಂಗವಾಗಿ ಬಾಬು ಜಗಜೀವನ್ ರಾಮ್ ಭವನದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ನೂತನ ‘ಕೆಂಪೇಗೌಡ ಭವನʼ ಭೂಮಿಪೂಜೆ ಹಾಗೂ ಕೆಂಪೇಗೌಡ ಅಂತಾರಾಷ್ಟ್ರೀಯ ಪ್ರಶಸ್ತಿ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಹುಟ್ಟಿದಾಗ ಭೂಮಿ ಮೇಲಿರುತ್ತೇವೆ. ಸತ್ತಾಗ ಭೂಮಿ ಕೆಳಗಿರುತ್ತೇವೆ. ಆದರೆ ನಮ್ಮ ಸಾಧನೆಗಳು ಮೇಲಿರುತ್ತವೆ. ಹೀಗಾಗಿ ನಗರಕ್ಕೆ ಅಗತ್ಯವಾಗಿ ಬೇಕಿರುವ ಸ್ಟೇಡಿಯಂ ನಿರ್ಮಾಣಕ್ಕೆ ನಿರ್ಧರಿಸಿದ್ದೇವೆ. ಈಗಾಗಲೇ 50 ಎಕರೆ ಜಾಗ ಗುರುತಿಸಿದ್ದು, 60 ಸಾವಿರ ಪ್ರೇಕ್ಷಕರು ಕುಳಿತುಕೊಳ್ಳಬಹುದಾದ ವಿಶಾಲವಾದ ಸ್ಟೇಡಿಯಂ ನಿರ್ಮಾಣ ಮಾಡಲಾಗುವುದು ಎಂದು ಮಾಹಿತಿ ನೀಡಿದರು.ಅಲ್ಲದೆ, ನಗರದಲ್ಲಿ ಏನೂ ಕೊರತೆ ಉಂಟಾಗದಂತೆ ಕ್ರಮ ಕೈಗೊಳ್ಳಲಾಗುತ್ತಿದೆ. 

ಕಸ ವಿಲೇವಾರಿ ಸಮಸ್ಯೆಯಾಗದಂತೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಬೆಂಗಳೂರು ವಿವಿ ವ್ಯಾಪ್ತಿಯಲ್ಲಿ 100 ಕೋಟಿ ರು. ವೆಚ್ಚದಲ್ಲಿ ಸಂಶೋಧನಾ ಕೇಂದ್ರ ಕೂಡ ನಿರ್ಮಾಣ ಮಾಡಲಾಗುತ್ತಿದೆ. ಕೆಂಪೇಗೌಡರ ಹೆಸರಿನಲ್ಲಿ ಭವ್ಯ ಕಟ್ಟಡ ನಿರ್ಮಾಣಕ್ಕೆ ಗ್ರೇಟರ್‌ ಬೆಂಗಳೂರು ಪ್ರಾಧಿಕಾರದಿಂದ 100 ಕೋಟಿ ಮೀಸಲಿಟ್ಟಿದ್ದೇವೆ. ಮೂರ್ನಾಲ್ಕು ಜನ ಕಟ್ಟಡ ವಾಸ್ತುಶಿಲ್ಪಿಗಳು ವಿನ್ಯಾಸ ನೀಡಿದ್ದಾರೆ. ಇದರ ಬಗ್ಗೆ ನಿರ್ಮಲಾನಂದನಾಥ ಶ್ರೀಗಳ ಗಮನಕ್ಕೂ ತರಲಾಗುವುದು ಎಂದು ಡಿ.ಕೆ. ಶಿವಕುಮಾರ್‌ ಹೇಳಿದರು.

ಕಾವೇರಿ 5ನೇ ಹಂತದ ಯೋಜನೆ ಪೂರ್ಣಗೊಳಿಸಿ 110 ಹಳ್ಳಿಗಳಿಗೆ ನೀರು ನೀಡುತ್ತಿದ್ದೇವೆ. 6ನೇ ಹಂತದ ಕಾವೇರಿ ಕುಡಿಯುವ ನೀರಿನ ಯೋಜನೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಬೆಂಗಳೂರಿನ ಅಭಿವೃದ್ಧಿಗೆ ಬೇಕಾದಷ್ಟು ಶ್ರಮ ಪಡುತ್ತಿದ್ದೇವೆ. ಸಿಕ್ಕಿರುವ ಅವಕಾಶದಲ್ಲಿ ಸಾಕ್ಷಿಗುಡ್ಡೆ ನಿರ್ಮಾಣ ಮಾಡಲಾಗುವುದು ಎಂದು ಭರವಸೆ ನೀಡಿದರು.

  • ಕೆಂಪೇಗೌಡರ ಹೆಸರಿನಲ್ಲಿ ಬೆಂಗಳೂರು ನಗರದಲ್ಲಿ 60 ಸಾವಿರ ಪ್ರೇಕ್ಷಕರು ಕುಳಿತುಕೊಳ್ಳುವಂತಹ ನೂತನ ಸ್ಟೇಡಿಯಂ
  • ಈಗಾಗಲೇ 50 ಎಕರೆ ಜಾಗ ಗುರುತಿಸಲಾಗಿದೆ ಎಂದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌
  • ನೂತನ ‘ಕೆಂಪೇಗೌಡ ಭವನʼ ಭೂಮಿಪೂಜೆ ಹಾಗೂ ಕೆಂಪೇಗೌಡ ಅಂತಾರಾಷ್ಟ್ರೀಯ ಪ್ರಶಸ್ತಿ ವಿತರಣೆ ಕಾರ್ಯಕ್ರಮ
  • ಹುಟ್ಟಿದಾಗ ಭೂಮಿ ಮೇಲಿರುತ್ತೇವೆ. ಸತ್ತಾಗ ಭೂಮಿ ಕೆಳಗಿರುತ್ತೇವೆ. ಆದರೆ ನಮ್ಮ ಸಾಧನೆಗಳು ಮೇಲಿರುತ್ತವೆ.

PREV
Read more Articles on

Recommended Stories

ಸಂಪುಟ ಪುನರ್‌ ರಚನೆ ಸುಳಿವು : ದಲಿತ ಸಚಿವರ ಸಭೆ!
ಶೂದ್ರ ಶ್ರೀನಿವಾಸ್‌ ಸೇರಿ ಐವರಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ