ಹೆತ್ತೇನಹಳ್ಳಿ ಮಾರಮ್ಮನಿಗೆ ಹೊಸ ತಾಳಿ ಸಮರ್ಪಣೆ

KannadaprabhaNewsNetwork |  
Published : Feb 21, 2026, 01:30 AM IST
್ಿ್ಿ | Kannada Prabha

ಸಾರಾಂಶ

ಮಾಜಿ ಶಾಸಕ ಡಿ.ಸಿ. ಗೌರಿಶಂಕರ್ ಹಾಗೂ ಇವರ ಆಪ್ತರಾದ ಕಾಂಗ್ರೆಸ್ ಮುಖಂಡ, ಉದ್ಯಮಿ ಊರುಕೆರೆ ಜಗದೀಶ್ ಅವರು ಹೊಸದಾಗಿ ತಾಳಿ ಮಾಡಿಸಿ ಶುಕ್ರವಾರ ಮಾರಮ್ಮ ದೇವಿಗೆ ಸಮರ್ಪಣೆ ಮಾಡಿದರು.

ಕನ್ನಡಪ್ರಭ ವಾರ್ತೆ, ತುಮಕೂರುತಾಲೂಕಿನ ಹೆತ್ತೇನಹಳ್ಳಿ ಮಾರಮ್ಮ ದೇವಸ್ಥಾ0ನದಲ್ಲಿ ಇತ್ತೀಚೆಗೆ ನಡೆದ ದೇವರ ಒಡವೆ ಕಳವು ಪ್ರಕರಣದಲ್ಲಿ ದೇವರ ತಾಳಿಯೂ ಕಳವಾಗಿತ್ತು. ಈ ಹಿನ್ನೆಲೆಯಲ್ಲಿ ಮಾಜಿ ಶಾಸಕ ಡಿ.ಸಿ. ಗೌರಿಶಂಕರ್ ಹಾಗೂ ಇವರ ಆಪ್ತರಾದ ಕಾಂಗ್ರೆಸ್ ಮುಖಂಡ, ಉದ್ಯಮಿ ಊರುಕೆರೆ ಜಗದೀಶ್ ಅವರು ಹೊಸದಾಗಿ ತಾಳಿ ಮಾಡಿಸಿ ಶುಕ್ರವಾರ ಮಾರಮ್ಮ ದೇವಿಗೆ ಸಮರ್ಪಣೆ ಮಾಡಿದರು.ತಹಸೀಲ್ದಾರ್ ರಾಜೇಶ್ವರಿ ಸೇರಿದಂತೆ ದೇವಸ್ಥಾನ ಸಮಿತಿ ಮುಖಂಡರು, ಸಂಬಂಧಿಸಿದ ಇಲಾಖೆ ಅಧಿಕಾರಿಗಳ ಸಮುಖದಲ್ಲಿ ಮಾರಮ್ಮದೇವಿಗೆ ತಾಳಿ ಸಮರ್ಪಿಸಿ ಗೌರಿಶಂಕರ್ ಮತ್ತು ಬಳಗ ವಿಶೇಷ ಪೂಜೆ ಸಲ್ಲಿಸಿದರು.ದೇವರ ಒಡವೆ ಕಳವು ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿ ಕಳ್ಳರನ್ನು ಪತ್ತೆ ಮಾಡಿ ಕಳವು ಒಡವೆ ವಶಪಡಿಸಿಕೊಂಡು ದೇವರಿಗೆ ಅರ್ಪಿಸಬೇಕು ಎಂದು ಡಿ.ಸಿ.ಗೌರಿಶಂಕರ್ ಒತ್ತಾಯಿಸಿದರು. ಶಕ್ತಿದೇವತೆಯಾದ ಮಾರಮ್ಮದೇವಿಯನ್ನು ಮುಟ್ಟುವುದಿರಲಿ, ಒಡವೆ ಕಳವು ಮಾಡುವುದು ದೊಡ್ಡ ಅಪಚಾರ. ಎಷ್ಟೆಲ್ಲಾ ಭದ್ರತೆ ಇದ್ದರೂ ಕಳ್ಳತನ ನಡೆದಿರುವುದು ಕಳವಳಕಾರಿ ವಿಚಾರ. ಇಂತಹ ಪ್ರಕರಣ ಮರುಕಳಿಸದಂತೆ ಅಧಿಕಾರಿಗಳು ಎಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು. ಉದ್ಯಮಿ ಊರುಕೆರೆ ಜಗದೀಶ್ ಅವರು ೩೦ ಲಕ್ಷ ರು. ವೆಚ್ಚದಲ್ಲಿ ಹೆತ್ತೇನಹಳ್ಳಿ ಮಾರಮ್ಮನ ಗರ್ಭಗುಡಿ ನಿರ್ಮಾಣ ಮಾಡಿಸಿದ್ದಾರೆ. ದೇವಸ್ಥಾನದ ಜೀರ್ಣೋದ್ಧಾರ ಕೆಲಸ ನಡೆಯುತ್ತಿದ್ದು, ರಾಜಗೋಪುರ ನಿರ್ಮಾಣಕ್ಕೆ ತಾವು, ಜಗದೀಶ್ ಹಾಗೂ ತಮ್ಮ ಗೆಳೆಯರ ಬಳಗ ಎಷ್ಟೇ ಖರ್ಚಾದರೂ ದೇಣಿಗೆ ನೀಡುತ್ತೇವೆ. ಭಕ್ತರು ನೀಡುವ ದೇಣಿಗೆಯ ಪ್ರತಿ ರುಪಾಯಿಯ ಲೆಕ್ಕವನ್ನು ಪಾರದರ್ಶಕವಾಗಿ ದಾಖಲು ಮಾಡುವಂತೆ ಡಿ.ಸಿ.ಗೌರಿಶಂಕರ್ ತಹಸೀಲ್ದಾರರಿಗೆ ಸೂಚಿಸಿದರು.ಅಲ್ಲದೆ ಕಾಮಗಾರಿಗೆ ಕಲ್ಲು ಖರೀದಿಗೆಂದು ಗೌರಿಶಂಕರ್ ಅವರು ತಹಸೀಲ್ದಾರ್ ರಾಜೇಶ್ವರಿ ಅವರಿಗೆ ೨ ಲಕ್ಷ ರು. ದೇಣಿಗೆ ನೀಡಿದರು. ಈ ವೇಳೆ ಕಾಂಗ್ರೆಸ್ ಪಕ್ಷದ ಮುಖಂಡರಾದ ಪಂಡಿತ್ ನಾರಾಯಣಪ್ಪ, ಪ್ರಕಾಶ್, ಪಾಲನೇತ್ರಯ್ಯ, ಹೆತ್ತೇನಹಳ್ಳಿ ಮಂಜುನಾಥ್, ನರಸಾಪುರ ಹರೀಶ್, ಹಾಲನೂರು ಅನಂತಕುಮಾರ್, ಹಿರೇಹಳ್ಳಿ ಮಹೇಶ್, ಚಿಕ್ಕನಾರವಂಗಲ ರವಿ, ಕೈದಾಳ ರಮೇಶ್, ಸ್ವಾಮಿ ಮತ್ತಿತರರು ಭಾಗವಹಿಸಿದ್ದರು.ಬಾಕ್ಸ್‌...

ರಿಂಗ್ ರಸ್ತೆಗೆ ತೀವ್ರ ವಿರೋಧ....ರೈತರ ಜಮೀನು ವಶಪಡಿಸಿಕೊಂಡು, ರೈತರ ವಿರೋಧದ ನಡುವೆ ನಂದಿಹಳ್ಳಿ-ಮಲ್ಲಸಂದ್ರ-ವಸಂತನರಸಾಪುರ ನಿರ್ಮಾಣ ಕ್ರಮವನ್ನು ಮಾಜಿ ಶಾಸಕ ಡಿ.ಸಿ.ಗೌರಿಶಂಕರ್ ತೀವ್ರ ವಿರೋಧ ವ್ಯಕ್ತಪಡಿಸಿದರು. ಜನರ ಅಭಿಪ್ರಾಯಕ್ಕೆ ವಿರುದ್ಧವಾಗಿ ಯಾವುದೇ ಸರ್ಕಾರ ಹೋಗಬಾರದು. ರಿಂಗ್ ರಸ್ತೆ ಯೋಜನೆಯನ್ನು ಕೈಬಿಡಬೇಕು ಎಂದು ಒತ್ತಾಯಿಸಿದರು.ಈ ಬಗ್ಗೆ ರೈತರೊಂದಿಗೆ ದೊಡ್ಡ ಮಟ್ಟದ ಹೋರಾಟ ರೂಪಿಸುವುದಾಗಿ ಹೇಳಿದ ಗೌರಿಶಂಕರ್, ಶನಿವಾರ ಬೆಳಿಗ್ಗೆ 9.30ಕ್ಕೆ ನಗರದ ಸಮೃದ್ಧಿ ಹೋಟೆಲ್‌ನಲ್ಲಿ ರೈತರ ಸಭೆ ಕರೆದಿದ್ದು, ಹೋರಾಟದ ರೂಪುರೇಶೆಗಳ ಬಗ್ಗೆ ಚರ್ಚೆ ಮಾಡಲಾಗುವುದು ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಾಂಗ್ಲಾ ಮಾತ್ರವಲ್ಲ, ಭಾರತದಲ್ಲೂ ಹಿಂದೂಗಳ ಸ್ಥಿತಿ ಹೀನಾಯ
ಕರ್ಣಾಟಕ ಬ್ಯಾಂಕ್ 102ನೇ ಸಂಸ್ಥಾಪಕರ ದಿನಾಚರಣೆ