ಮೂರು ದಿನದ ಪ್ರಧಾನಮಂತ್ರಿ ವಿಶ್ವಕರ್ಮ ವಸ್ತು ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ
ಸಮಾಜದ ಕಟ್ಟಕಡೆ ಕುಶಲಕರ್ಮಿಗಳ ಬದುಕಿನಲ್ಲಿ ಆರ್ಥಿಕ ಕ್ರಾಂತಿ ಉಂಟು ಮಾಡುವ ಉದ್ದೇಶದಿಂದ ಜಾರಿಗೆ ತರಲಾದ ಪ್ರಧಾನ ಮಂತ್ರಿ ವಿಶ್ವಕರ್ಮಯೋಜನೆ ಜಿಲ್ಲೆಯಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಳ್ಳುತ್ತಿದೆ ಎಂದು ಸಂಸದ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದರು.
ನಗರದ ಆಜಾದ್ ಪಾರ್ಕ್ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿರುವ ಮೂರು ದಿನದ ಪ್ರಧಾನಮಂತ್ರಿ ವಿಶ್ವಕರ್ಮ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಶುಕ್ರವಾರ ಚಾಲನೆ ನೀಡಿ ಮಾತನಾಡಿ ಸಾಂಪ್ರದಾಯಿಕ ಕುಲ ಕಸುಬುಗಳನ್ನು ಕೇವಲ ಜೀವನೋಪಾಯಕ್ಕೆ ಸೀಮಿತಗೊಳಿಸದೆ ಅವುಗಳನ್ನು ಆಧುನಿಕ ಮಾರುಕಟ್ಟೆ ಬೇಡಿಕೆಗೆ ತಕ್ಕಂತೆ ರೂಪಿಸುವುದು ಈ ಯೋಜನೆ ಆಶಯ. ಉದಾಹರಣೆಗೆ, ಕುಂಬಾರರು ತಯಾರಿಸುವ ಮಣ್ಣಿನ ಪಾತ್ರೆಗಳನ್ನು ಸುಧಾರಿತ ತಂತ್ರಜ್ಞಾನದ ಮೂಲಕ ಆಕರ್ಷಕವಾಗಿ ವಿನ್ಯಾಸಗೊಳಿಸಿ ವಿದೇಶಗಳಿಗೆ ರಫ್ತು ಮಾಡುವ ಹಂತಕ್ಕೆ ಬೆಳೆಸಲಾಗುತ್ತಿದೆ. ಇದರಿಂದ ಗ್ರಾಮೀಣ ಭಾಗದ ಕಲೆಗೆ ಜಾಗತಿಕ ಮನ್ನಣೆ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಜಿಲ್ಲೆಯಲ್ಲಿ ₹21 ಕೋಟಿ ಸಾಲ ವಿತರಣೆಚಿಕ್ಕಮಗಳೂರು ಜಿಲ್ಲೆಯೊಂದರಲ್ಲೇ ಈವರೆಗೆ ಸುಮಾರು 7500 ಕುಶಲಕರ್ಮಿಗಳು ಯೋಜನೆ ಲಾಭ ಪಡೆದಿದ್ದಾರೆ. ಈ ಪೈಕಿ 4 ಸಾವಿರ ಜನರಿಗೆ ತರಬೇತಿ ನೀಡಲಾಗಿದೆ. ವಿವಿಧ ರಾಷ್ಟ್ರೀಕೃತ ಬ್ಯಾಂಕ್‌ಗಳ ಮೂಲಕ ₹21 ಕೋಟಿ ಸಾಲ ಸೌಲಭ್ಯ ವಿತರಿಸಲಾಗಿದೆ. ಶೇ.5ರಷ್ಟು ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ₹1 ಲಕ್ಷ ದಿಂದ ₹3 ಲಕ್ಷ ದವರೆಗೆ ನೀಡಲಾಗುತ್ತಿರುವ ಸಾಲ ಕುಶಲಕರ್ಮಿಗಳಿಗೆ ದೊಡ್ಡ ಆಸರೆಯಾಗಿದೆ ಎಂದರು.ನೋಂದಾಯಿತ ಕುಶಲಕರ್ಮಿಗಳಿಗೆ ಶಿಷ್ಯವೇತನ ಆಧಾರದ ಒಂದು ವಾರದ ವೃತ್ತಿಪರ ತರಬೇತಿ ನೀಡಲಾಗುತ್ತಿದೆ. ತರಬೇತಿ ಯಶಸ್ವಿ ಪೂರ್ಣಗೊಳಿಸಿದ ನಂತರ, ಸ್ವಂತ ಉದ್ದಿಮೆ ಆರಂಭಿಸಲು ₹15 ಸಾವಿರ ರು. ಮೌಲ್ಯದ ಸುಧಾರಿತ ಪರಿಕರಗಳ ಕಿಟ್ ಅನ್ನು ಕೇಂದ್ರ ಸರ್ಕಾರ ಉಚಿತವಾಗಿ ನೀಡುತ್ತಿದೆ ಎಂದು ತಿಳಿಸಿದರು.3 ದಿನಗಳ ಕಾಲ ನಡೆಯಲಿರುವ ಈ ಮೇಳದಲ್ಲಿ ಒಟ್ಟು 54 ಮಳಿಗೆಗಳನ್ನು ಸ್ಥಾಪಿಸಲಾಗಿದೆ. ರಾಜ್ಯದ ವಿವಿಧೆಡೆಯಿಂದ ಆಗಮಿಸಿರುವ ಕುಶಲಕರ್ಮಿಗಳು ತಮ್ಮ ಕಲಾಕೃತಿಗಳ ಪ್ರದರ್ಶನ ಹಾಗೂ ಮಾರಾಟ ಮಾಡಲಿದ್ದಾರೆ.
ಸರ್ಕಾರಗಳು ಯೋಜನೆ ಮಾಡುತ್ತವೆ. ಆದರೆ, ಮಾರುಕಟ್ಟೆ ವ್ಯವಸ್ಥೆ ಮಾಡುವುದಕ್ಕೆ ಸಾಧ್ಯವಾಗುವುದಿಲ್ಲ. ಜಾಗತಿಕ ವ್ಯವಸ್ಥೆಯಲ್ಲಿ ವಿದೇಶದಿಂದ ಬಂದ ವಸ್ತುಗಳು ಕಡಿಮೆ ದರದಲ್ಲಿ ಮಾರಾಟ ಮಾಡುತ್ತಿವೆ. ಇದು ಸ್ಥಳೀಯ ಉದ್ದಿಮೆದಾರರಿಗೆ ತೊಂದರೆ ಆಗಲಿದೆ ಎಂದರು.
ಅನಿಲ ಅಭಾವ ಶೀಘ್ರವೇ ಪರಿಹಾರ: ಕೋಟಾಗಲ್ಫ್ ರಾಷ್ಟ್ರಗಳಲ್ಲಿನ ಯುದ್ಧದ ಪರಿಸ್ಥಿತಿಯಿಂದ ಆಮದಿನಲ್ಲಿ ಸ್ವಲ್ಪ ವ್ಯತ್ಯಯವಾಗಿದೆ. ಈ ಕುರಿತು ವಿದೇಶಾಂಗ ಸಚಿವ ರೊಂದಿಗೆ ಚರ್ಚಿಸಲಾಗಿದೆ. ಜಿಲ್ಲಾಧಿಕಾರಿಗಳ ವರದಿ ಪ್ರಕಾರ, ಗೃಹಬಳಕೆ ಅನಿಲ ಪೂರೈಕೆಯಲ್ಲಿ ಯಾವುದೇ ತೊಂದರೆಯಿಲ್ಲ. ವಾಣಿಜ್ಯ ಬಳಕೆ ಅನಿಲ ಸಮಸ್ಯೆಯೂ ಇನ್ನೆರಡು ದಿನಗಳಲ್ಲಿ ಸುಗಮಗೊಳ್ಳಲಿದೆ ಎಂದು ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ಭರವಸೆ ನೀಡಿದರು.
ಎರಡೂ ಪೋಟೋ ಬಳಸಿ:
ಫೋಟೋ