ಟ್ರೇಡ್‌ ಲೈಸೆನ್ಸ್‌ ಪರವಾನಗಿಗೆ ಇನ್ನು ಹೊಸ ‘ವ್ಯಾಪಾರ’ ತಂತ್ರಾಂಶ ಬಳಕೆ

KannadaprabhaNewsNetwork |  
Published : Jun 27, 2025, 12:48 AM IST
32 | Kannada Prabha

ಸಾರಾಂಶ

ಟ್ರೇಡ್ ಲೈಸೆನ್ಸ್ ನೀಡಲು ಹಾಗೂ ನವೀಕರಣ ಮಾಡಲು ಪ್ರಸ್ತುತ ನಗರ ಪಾಲಿಕೆಯು ತನ್ನದೇ ಆದ ತಂತ್ರಾಂಶವನ್ನು ಬಳಕೆ ಮಾಡುತಿತ್ತು. ಆದರೆ ಇದೀಗ ರಾಜ್ಯಾದ್ಯಂತ ಒಂದೇ ಮಾದರಿಯ ತಂತ್ರಾಂಶ ಬಳಕೆ ಮಾಡಬೇಕು ಎಂಬ ಸರ್ಕಾರದ ನಿರ್ದೇಶನ ಪ್ರಕಾರ ಮಂಗಳೂರು ನಗರದಲ್ಲಿ ಹೊಸ ತಂತ್ರಾಂಶ ಜಾರಿಗೆ ತರಲು ಸಿದ್ಧತೆ ಕೈಗೊಳ್ಳಲಾಗಿದೆ.

ಕನ್ನಡಪ್ರಭ ವಾರ್ತೆ ಮಂಗಳೂರು

ಟ್ರೇಡ್ ಲೈಸೆನ್ಸ್ ನೀಡಲು ಹಾಗೂ ನವೀಕರಣ ಮಾಡಲು ಪ್ರಸ್ತುತ ನಗರ ಪಾಲಿಕೆಯು ತನ್ನದೇ ಆದ ತಂತ್ರಾಂಶವನ್ನು ಬಳಕೆ ಮಾಡುತಿತ್ತು. ಆದರೆ ಇದೀಗ ರಾಜ್ಯಾದ್ಯಂತ ಒಂದೇ ಮಾದರಿಯ ತಂತ್ರಾಂಶ ಬಳಕೆ ಮಾಡಬೇಕು ಎಂಬ ಸರ್ಕಾರದ ನಿರ್ದೇಶನ ಪ್ರಕಾರ ಮಂಗಳೂರು ನಗರದಲ್ಲಿ ಹೊಸ ತಂತ್ರಾಂಶ ಜಾರಿಗೆ ತರಲು ಸಿದ್ಧತೆ ಕೈಗೊಳ್ಳಲಾಗಿದೆ.ರಾಜ್ಯ ಸರ್ಕಾರ ವರ್ತಕರಿಗೆ ಟ್ರೇಡ್ ಲೈಸೆನ್ಸ್ ನೀಡುವ ಸಲುವಾಗಿ ‘ವ್ಯಾಪಾರ’ ಎಂಬ ತಂತ್ರಾಂಶವನ್ನು

ಅಭಿವೃದ್ಧಿಪಡಿಸಿದೆ. ಈ ತಂತ್ರಾಂಶದ ಮೂಲಕವೇ ಪ್ರಸ್ತುತ ರಾಜ್ಯದ ವಿವಿಧ ನಗರ ಸ್ಥಳೀಯ ಸಂಸ್ಥೆಗಳು ಟ್ರೇಡ್

ಲೈಸೆನ್ಸ್ ನೀಡುತ್ತಿದ್ದು, ಇನ್ನು ಮಂಗಳೂರು ಮಹಾನಗರ ಪಾಲಿಕೆ ಕೂಡ ವ್ಯಾಪಾರ ತಂತ್ರಾಂಶವನ್ನು ಬಳಕೆ

ಮಾಡಲಿದೆ.ಇದುವರೆಗೆ ನಗರಪಾಲಿಕೆ ಖಾಸಗಿ ಸಂಸ್ಥೆ ಸಹಭಾಗಿತ್ವದಲ್ಲಿ ಟ್ರೇಡ್ ಲೈಸೆನ್ಸ್ ತಂತ್ರಾಂಶ ಅಭಿವೃದ್ಧಿಪಡಿಸಿ

ಟ್ರೇಡ್ ಲೈಸೆನ್ಸ್ ನೀಡುತಿತ್ತು. ಖಾಸಗಿ ತಂತ್ರಾಂಶ ಸೇವೆ ಸ್ಥಗಿತ:

ವ್ಯಾಪಾರ ತಂತ್ರಾಂಶದ ಮೂಲಕ ಟ್ರೇಡ್ ಲೈಸೆನ್ಸ್ ನೀಡಬೇಕಾಗಿರುವ ಹಿನ್ನೆಲೆಯಲ್ಲಿ ಹಳೆಯ ತಂತ್ರಾಂಶದ ಮೂಲಕ ಟ್ರೇಡ್ ಲೈಸೆನ್ಸ್ ನೀಡುವುದು ಹಾಗೂ ನವೀಕರಣ ಮಾಡುವುದನ್ನು ಸ್ಥಗಿತಗೊಳಿಸಲಾಗಿದೆ. ಹೊಸ ಸಾಫ್ಟ್‌ವೇರ್ ಬಳಕೆ ಹೇಗೆ?:

ಟ್ರೇಡ್ ಲೈಸೆನ್ಸ್ ಪಡೆಯಲು ಬಯಸುವವರು ಹಾಗೂ ನವೀಕರಣ ಮಾಡಲು ಉದ್ದೇಶಿಸಿರುವವರು http://www.mrc.gov.in ವೆಬ್‌ಸೈಟ್‌ಗೆ ಭೇಟಿ ನೀಡಿ ‘ಸಿಟಿಜನ್ ಆನ್‌ಲೈನ್ ಸರ್ವೀಸ್ ವಿಭಾಗವನ್ನು ಕ್ಲಿಕ್ ಮಾಡಿದರೆ ವಿವಿಧ ಸೇವೆಗಳು ತೆರೆದುಕೊಳ್ಳಲಿದ್ದು, ಅದರಲ್ಲಿ ಅಪ್ಲೈ ಫಾರ್ ಟ್ರೇಡ್ ಲೈಸನ್ಸ್ ವಿಭಾಗವನ್ನು ಕ್ಲಿಕ್ ಮಾಡಿ ಆನ್‌ಲೈನ್ ಮೂಲಕ ಅರ್ಜಿ ತುಂಬಿ ಟ್ರೇಡ್ ಲೈಸೆನ್ಸ್ ಪಡೆದುಕೊಳ್ಳಬಹುದು. ಈ ತಂತ್ರಾಂಶದ ಮೂಲಕವೇ ಟ್ರೇಡ್ ಲೈಸೆನ್ಸ್ ಶುಲ್ಕವನ್ನು ಸಹ ಪಾವತಿ ಮಾಡಬಹುದು. ವರ್ತಕರು ಸಲ್ಲಿಸಿದ ಅರ್ಜಿಯು ಪ್ರಸ್ತುತ ಯಾವ ಹಂತದಲ್ಲಿ ಇದೆ ಎಂಬುದನ್ನು ಆನ್‌ಲೈನ್‌ನಲ್ಲಿ ಪರಿಶೀಲಿಸಬಹುದು. ಪರವಾನಿಗೆಯನ್ನು ಆನ್‌ಲೈನ್‌ನಲ್ಲಿಯೇ ಡೌನ್‌ಲೋಡ್ ಮಾಡಿಕೊಳ್ಳಬಹುದು. ಈ ಹಿಂದೆ ಹಲವು ಹಂತದ ಪರಿಶೀಲನೆ ನಡೆಯುತಿತ್ತು. ಆದರೆ ಹೊಸ ತಂತ್ರಾಂಶದಲ್ಲಿ ಎರಡು ಹಂತದ ಪರಿಶೀಲನೆ ಮಾತ್ರ ನಡೆಯುತ್ತದೆ.

ಖಾಸಗಿ ತಂತ್ರಾಂಶದಲ್ಲಿ ಪಡೆದಿರುವ ಉದ್ದಿಮೆ ಪರವಾನಿಗೆಯನ್ನು ನವೀಕರಿಸಲು ಸಂಬಂಧ ಪಟ್ಟ ದಾಖಲೆಗಳನ್ನು ಹೊಸದಾಗಿ ನೀಡಿ ವ್ಯಾಪಾರ ತಂತ್ರಾಂಶದಲ್ಲಿ ನೊಂದಾಯಿಸುವಂತೆ ಹಾಗೂ ಹೊಸ ಉದ್ದಿಮೆ ಪರವಾನಿಗೆಗೆ ಅರ್ಜಿ ಸಲ್ಲಿಸಲು ಸಾರ್ವಜನಿಕರು ವ್ಯಾಪಾರ ತಂತ್ರಾಂಶವನ್ನು ಬಳಸುವಂತೆ ಪಾಲಿಕೆ ಪ್ರಕಟಣೆ ತಿಳಿಸಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರದಿಂದ ಸಮೃದ್ಧಿ - ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ
ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ