ಕನ್ನಡಪ್ರಭ ವಾರ್ತೆ ಬೆಳಗಾವಿ:
ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ, ನ್ಯೂಸ್ ಪೇಪರ್ ಡಿಸ್ಟ್ರಿಬ್ಯೂಟರ್ ಚಾರಿಟಬಲ್ ಟ್ರಸ್ಟ್ ಹಾಗೂ ಬೆಳಗಾವಿ ದಿನಪತ್ರಿಕೆ ವಿತರಕರ ಸಂಘದ ಸಂಯುಕ್ತಾಶ್ರಯದಲ್ಲಿ ನಗರದ ಧರ್ಮನಾಥ ಭವನದಲ್ಲಿ ಬುಧವಾರ ಆಯೋಜಿಸಿದ್ದ ಪತ್ರಿಕಾ ವಿತರಕರ 6ನೇ ರಾಜ್ಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು.
ಪತ್ರಿಕೆಯ ಬೆಳಕು ಸಮಾಜದ ಮನಸನ್ನು ಬೆಳಗಿಸಿದರೆ, ಆ ಬೆಳಕನ್ನು ಪ್ರತಿದಿನ ಮುಂಜಾನೆ ಮನೆಮನೆಗೆ ತಲುಪಿಸುವವರು ವಿತರಕರು. ಬಿಸಿಲು, ಮಳೆ, ಚಳಿ ಎನ್ನದೆ ಜನರು ನಿದ್ರೆಯಲ್ಲಿರುವಾಗಲೇ ಪತ್ರಿಕೆ ತಲುಪಿಸುವ ಅವರ ಸೇವೆ ಅನನ್ಯ. ಕೊಳಗೇರಿಯಿಂದ ವಿಧಾನಸೌಧದವರೆಗೆ, ಬಡವರ ಮನೆಯಿಂದ ಮುಖ್ಯಮಂತ್ರಿಗಳ ನಿವಾಸದವರೆಗೆ ಪತ್ರಿಕೆ ತಲುಪಿಸುವ ವಿತರಕರು ಸಮಾಜದಲ್ಲಿ ಜ್ಞಾನ ಪ್ರಸರಣೆಯ ಮಹತ್ವದ ಕೊಂಡಿಯಾಗಿದ್ದಾರೆ ಎಂದರು.ವಿತರಕರಿಗೆ ಸರ್ಕಾರದ ಯೋಜನೆಗಳ ಸೌಲಭ್ಯ ತಲುಪಿಸುವಲ್ಲಿ ಇರುವ ತಾಂತ್ರಿಕ ತೊಡಕುಗಳನ್ನು ನಿವಾರಿಸಲು ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಹಾಗೂ ಶಂಭುಲಿಂಗಪ್ಪ ಅವರೊಂದಿಗೆ ಕಾರ್ಮಿಕ ಸಚಿವ ಸಂತೋಷ ಲಾಡ್ರನ್ನು ಶೀಘ್ರದಲ್ಲೇ ಭೇಟಿ ಮಾಡುವುದಾಗಿ ಭರವಸೆ ನೀಡಿದರು.
ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಅಧ್ಯಕ್ಷ ಕೆ. ಶಂಭುಲಿಂಗ ಮಾತನಾಡಿ, ದೇಶದಲ್ಲಿ ಸುಮಾರು 25 ಲಕ್ಷ ಪತ್ರಿಕಾ ವಿತರಕರಿದ್ದು, ಅವರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸಬೇಕು. ವಿತರಕರಿಗೆ ಅಪಘಾತ ಪರಿಹಾರ ಹಾಗೂ ವಿಮಾ ಸೌಲಭ್ಯ ಕಲ್ಪಿಸಲು ಕಾರ್ಮಿಕ ಇಲಾಖೆಯ ಮೂಲಕ ಪ್ರಯತ್ನಿಸಲಾಗುತ್ತಿದೆ. ರೈಲು ನಿಲ್ದಾಣ, ಬಸ್ ನಿಲ್ದಾಣ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಪತ್ರಿಕೆ ಮಾರಾಟಕ್ಕೆ ವಿಧಿಸಿರುವ ನಿರ್ಬಂಧ ಮತ್ತು ಷರತ್ತುಗಳನ್ನು ಸಡಿಲಗೊಳಿಸಬೇಕು ಎಂದು ಒತ್ತಾಯಿಸಿದರು. ಸಮ್ಮೇಳನಾಧ್ಯಕ್ಷ ಪ್ರತಾಪ ಬೋಸಲೆ ಮಾತನಾಡಿದರು.
ಪತ್ರಿಕಾರಂಗದಲ್ಲಿ ಗಣನೀಯ ಸೇವೆ ಸಲ್ಲಿಸಿದ ‘ಕನ್ನಡಪ್ರಭ’ ಬೆಳಗಾವಿ ಬ್ಯುರೋ ಮುಖ್ಯಸ್ಥ ಬ್ರಹ್ಮಾನಂದ ಹಡಗಲಿ ಹಾಗೂ ಪ್ರಸರಣ ವಿಭಾಗದ ಮಂಜುನಾಥ ಕಸಮಳಗಿ ಸೇರಿದಂತೆ ಪತ್ರಿಕಾ ಪ್ರತಿನಿಧಿಗಳಿಗೆ ಮಾಧ್ಯಮ ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಜತೆಗೆ ದೀರ್ಘಕಾಲದಿಂದ ಪತ್ರಿಕಾ ವಿತರಣೆಯಲ್ಲಿ ತೊಡಗಿಸಿಕೊಂಡಿರುವ ವಿತರಕರಿಗೆ ಪತ್ರಿಕಾ ವಿತರಕರ ಸೇವಾ ರತ್ನ ಪ್ರಶಸ್ತಿ ಹಾಗೂ ಶೈಕ್ಷಣಿಕ ಸಾಧನೆ ಮಾಡಿದ ವಿತರಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು.ಸಮ್ಮೇಳನದ ನಿರ್ಣಯಗಳು: