ಸುದ್ದಿ ಮಾತ್ರವಲ್ಲ, ಜ್ಞಾನ ಹಂಚಿಕೆಗೆ ಪತ್ರಿಕೆ ಉಪಯುಕ್ತ: ಡಾ. ನಾಗರಾಜ ಹಳ್ಳಿಯವರ

KannadaprabhaNewsNetwork |  
Published : Aug 09, 2026, 02:15 AM IST
ಕಲಘಟಗಿ ಪಟ್ಟಣದ ಜಿಇ ಪದವಿಪೂರ್ವ ಕಾಲೇಜಿನಲ್ಲಿ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ತಾಲೂಕು ದಂಡಾಧಿಕಾರಿ ಬಸವರಾಜ ಹೊಂಕಣ್ಣವರ ಉದ್ಘಾಟಿಸಿದರು. | Kannada Prabha

ಸಾರಾಂಶ

ಕಲಘಟಗಿ ಪಟ್ಟಣದ ಜಿಇ ಪದವಿಪೂರ್ವ ಕಾಲೇಜಿನಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಆಯೋಜಿಸಲಾಗಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಕರ್ನಾಟಕ ವಿಶ್ವವಿದ್ಯಾಲಯದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ನಿವೃತ್ತ ಪ್ರಾಧ್ಯಾಪಕ ಡಾ. ನಾಗರಾಜ ಹಳ್ಳಿಯವರ ವಿಶೇಷ ಉಪನ್ಯಾಸ ನೀಡಿದರು.

ಕಲಘಟಗಿ: ಪತ್ರಿಕೆಗಳು ಸಮಾಜಕ್ಕೆ ಸುದ್ದಿ ಮಾತ್ರವಲ್ಲ, ಜ್ಞಾನದ ಹಂಚಿಕೆಗೆ ಉಪಯುಕ್ತ ಸಾಧನವಾಗಿದೆ ಎಂದು ಕರ್ನಾಟಕ ವಿಶ್ವವಿದ್ಯಾಲಯದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ನಿವೃತ್ತ ಪ್ರಾಧ್ಯಾಪಕ ಡಾ. ನಾಗರಾಜ ಹಳ್ಳಿಯವರ ಹೇಳಿದರು.

ಪಟ್ಟಣದ ಜಿಇ ಪದವಿಪೂರ್ವ ಕಾಲೇಜಿನಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಆಯೋಜಿಸಲಾಗಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ವಿಶೇಷ ಉಪನ್ಯಾಸ ನೀಡಿದರು. ಸಂವಿಧಾನದಲ್ಲಿ ಕಾರ್ಯಾಂಗ, ನ್ಯಾಯಾಂಗ ಮತ್ತು ಶಾಸಕಾಂಗದಂತೆಯೇ ಪತ್ರಿಕೋದ್ಯಮ ಸಂವಿಧಾನದ ನಾಲ್ಕನೇ ಅಂಗವಾಗಿದೆ. ವಿದ್ಯಾರ್ಥಿಗಳು ಪತ್ರಿಕೆ ಓದಬೇಕು ಮತ್ತು ಅದರಲ್ಲಿನ ಜ್ಞಾನ ಪಡೆಯಬೇಕು ಎಂದು ಕರೆ ನೀಡಿದರು.

ತಾಲೂಕು ದಂಡಾಧಿಕಾರಿ ಬಸವರಾಜ ಹೊಂಕಣ್ಣವರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಾಹಿತಿಗಾಗಿ ಹಗಲು-ರಾತ್ರಿ ಎನ್ನದೇ ದುಡಿಯುವ ಪತ್ರಕರ್ತರು ಸಮಾಜದ ಸುಧಾರಣೆಯಲ್ಲಿ ಬಹು ಮುಖ್ಯ ಪಾತ್ರ ವಹಿಸುತ್ತಾರೆ. ವಿದ್ಯಾರ್ಥಿಗಳು ಪತ್ರಿಕೆಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದರು.

ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಂಡು ಕುಲಕರ್ಣಿ ಮಾತನಾಡಿ, ಎಲ್ಲ ಸುದ್ದಿ ಮಾಧ್ಯಮಗಳಿಗಿಂತಲೂ ಪತ್ರಿಕಾ ಮಾಧ್ಯಮ ಅತ್ಯಂತ ವಿಶ್ವಾಸಾರ್ಹವಾದದ್ದು. ನಿರ್ಭೀತಿಯಿಂದ ಸತ್ಯ ಶೋಧಿಸಿ, ನಿಖರವಾದ ಮಾಹಿತಿ ಸಂಗ್ರಹಿಸುವುದು ಪತ್ರಕರ್ತರ ಕರ್ತವ್ಯವಾಗಬೇಕು ಎಂದರು.

ಪತ್ರಿಕಾ ವಿತರಕರಿಗೆ ಮತ್ತು ಕಳೆದ ಸಾಲಿನ ಎಸ್ಎಸ್ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದ ವಿದ್ಯಾರ್ಥಿಗಳನ್ನು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಸನ್ಮಾನಿಸಲಾಯಿತು. ಉಚಿತ ಬ್ಯಾಗ್ ಮತ್ತು ನೋಟ್‌ಬುಕ್‌ ವಿತರಿಸಲಾಯಿತು.

ಜಿಲ್ಲಾ ಉತ್ತಮ ತನಿಖಾ ವರದಿ ಪ್ರಶಸ್ತಿ ಪಡೆದ ಗಿರೀಶ್ ಮುಕ್ಕಲ್ ಅವರನ್ನು ಸನ್ಮಾನಿಸಲಾಯಿತು. ಪತ್ರಕರ್ತ ಹಾಗೂ ಕಲಾವಿದರಾದ ರವಿ ಬಡಿಗೇರ ಚಿತ್ರಿಸಿದ ಚಿತ್ರಕಲೆಗಳನ್ನು ಪ್ರದರ್ಶಿಸಲಾಯಿತು. ಶಂಕರಗುರು ರಬಕವಿ ಕಾರ್ಯಕ್ರಮ ನಿರೂಪಿಸಿದರು. ಕಲ್ಲಪ್ಪ ಮಿರ್ಜಿ ವಂದಿಸಿದರು.

ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಪಿ.ವೈ. ಸಾವಂತ್, ಪಪಂ ಮುಖ್ಯಾಧಿಕಾರಿ ಬಿ. ಚಂದ್ರಶೇಖರ್, ಧಾರವಾಡ ಜಿಲ್ಲಾ ಸಂಘದ ಪ್ರಧಾನ ಕಾರ್ಯದರ್ಶಿ ಗುರು ಬಾಂಡಗೆ, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪ್ರಕಾಶ್ ಲಮಾಣಿ, ವಕೀಲರಾದ ಅಣ್ಣಪ್ಪ ಓಲೇಕಾರ್, ಅಂಜುಮನ್ ಸಂಸ್ಥೆಯ ಅಧ್ಯಕ್ಷ ಅಜಮತಖಾನ್ ಜಹಗೀರದಾರ, ಕಸಾಪ ತಾಲೂಕು ಅಧ್ಯಕ್ಷ ರಮೇಶ್ ಸೋಲಾರಗೊಪ್ಪ, ಪತ್ರಕರ್ತರಾದ ಉಮೇಶ್ ಜೋಶಿ, ವೀರೇಶ್ ಹಾರೂಗೇರಿ, ಉದಯಗೌಡರ, ಶಂಕರ ರೆಡ್ಡೇರ್, ಸುನೀಲ ಕಮ್ಮಾರ, ವಿನಾಯಕ ಭಟ್, ಸುಭಾಸ ಸುಣಗಾರ, ಪ್ರಕಾಶ ದೂಪದ ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜಾನಪದ ವಸ್ತು ಸಂಗ್ರಹಾಲಯ ಈ ನೆಲದ ಜೀವನ ಮೀಮಾಂಸೆ ಹೇಳುವ ಪಠ್ಯ
ಹಡಪದ ಅಪ್ಪಣ್ಣನವರು ಬಸವಣ್ಣನವರ ಬಲಗೈ ಬಂಟರಾಗಿದ್ದರು-ಸ್ವಾಮೀಜಿ