ಕನ್ನಡಪ್ರಭ ವಾರ್ತೆ ಮೈಸೂರು
ಜೆಡಿಎಸ್ ಜೊತೆ ಮೈತ್ರಿ ಏರ್ಪಟ್ಟ ಕಾರಣ ಸುಮಲತಾ ಅವರಿಗೆ ಬಿಜೆಪಿ ಟಿಕೆಟ್ ನೀಡಲಾಗಲಿಲ್ಲ. ಸುಮಲತಾ ಜೊತೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ, ಪ್ರಧಾನಿ ಮೋದಿ, ಕೇಂದ್ರ ಸಚಿವ ಅಮಿತ್ ಶಾ ಮಾತನಾಡಿದ್ದಾರೆ.
ಸುಮಲತಾ ಅವರಿಗೆ ಮುಂದಿನ ದಿನಗಳಲ್ಲಿ ಪಕ್ಷ ಸೂಕ್ತ ಸ್ಥಾನಮಾನ ನೀಡಲಿದೆ. ಸುಮಲತಾ ನಮ್ಮ ಜೊತೆಯಲ್ಲೇ ಇರುತ್ತಾರೆ ಎಂದು ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ರಾಧಾಮೋಹನ್ ದಾಸ್ ತಿಳಿಸಿದರು.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣಾ ಪ್ರಚಾರ ಮಾಡುವ ವಿಚಾರದಲ್ಲಿ ಜೆಡಿಎಸ್ ನಾಯಕರನ್ನು ಕಡೆಗಣಿಸುವ ಪ್ರಶ್ನೆಯೇ ಇಲ್ಲ.
ಸೀಟು ಹಂಚಿಕೆ ಅಂತಿಮವಾಗದ ಕಾರಣ ಅವರನ್ನು ಆಹ್ವಾನಿಸಿರಲಿಲ್ಲ. ಇದೀಗ ಸೀಟು ಹಂಚಿಕೆ ಅಂತಿಮಗೊಂಡಿದೆ. ಮುಂದೆ ನಡೆಯುವ ಚುನಾವಣಾ ಪ್ರಚಾರ ಸಭೆಗಳಲ್ಲಿ ಬಿಜೆಪಿ-ಜೆಡಿಎಸ್ ನ ಪ್ರಮುಖ ನಾಯಕರು ಒಟ್ಟಿಗೆ ಭಾಗಿಯಾಗಲಿದ್ದಾರೆ ಎಂದು ಅವರು ತಿಳಿಸಿದರು.
ಇನ್ನು ಮೈಸೂರು ಅಭ್ಯರ್ಥಿ ಯದುವೀರ್ ಬಗ್ಗೆ ಮಾತನಾಡಿ, ಮೈಸೂರಿನ ಅರಸರು ಅಪಾರ ಕೊಡುಗೆ ನೀಡಿದ್ದಾರೆ. ಅವರ ದೂರದೃಷ್ಟಿಯ ಫಲವಾಗಿ ಈ ಭಾಗದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ಆಗಿವೆ. ಇದೆಲ್ಲವನ್ನೂ ಪರಿಗಣಿಸಿ ರಾಜಮನೆತನದ ಯದುವೀರ್ ಅವರಿಗೆ ಬಿಜೆಪಿ ಟಿಕೆಟ್ ನೀಡಿದ್ದೇವೆ ಎಂದರು.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಮೈಸೂರಿನ ಆಳರಸರು ಅಪಾರ ಕೊಡುಗೆ ನೀಡಿದ್ದಾರೆ. ಆಳರಸರ ದೂರದೃಷ್ಟಿಯ ಫಲವಾಗಿ ಈ ಭಾಗದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ಆಗಿವೆ. ಇದೆಲ್ಲವನ್ನೂ ಪರಿಗಣಿಸಿ ರಾಜಮನೆತನದ ಯದುವೀರ ಅವರಿಗೆ ಬಿಜೆಪಿ ಟಿಕೆಟ್ ನೀಡಿದ್ದೇವೆ ಎಂದರು.
ಕಾಂಗ್ರೆಸ್ ನವರು ಮಹಾರಾಜ ಹಾಗೂ ಸಾಮಾನ್ಯ ಅಭ್ಯರ್ಥಿ ನಡುವಿನ ಚುನಾವಣೆ ಎನ್ನುತ್ತಿರುವ ವಿಚಾರಕ್ಕೆ ಪ್ರತಿಕ್ರಿಯಿಸಿ, ನಮ್ಮ ಅಭ್ಯರ್ಥಿ ಜನಸಾಮಾನ್ಯರ ಜೊತೆಯೇ ಇದ್ದಾರೆ.
ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಅವರೇ ಮಹಾರಾಜರು. ಆ ಮಹಾರಾಜರ ವಿರುದ್ಧ ನಮ್ಮ ಸಾಮಾನ್ಯ ಅಭ್ಯರ್ಥಿ ಹೋರಾಡುತ್ತಿದ್ದಾರೆ ಎಂದು ಹೇಳಿದರು.
ಕರ್ನಾಟಕದಲ್ಲಿ ಬಿಜೆಪಿಯನ್ನು ಲಿಂಗಾಯತ, ಒಕ್ಕಲಿಗರ ಪಕ್ಷ ಎನ್ನುತ್ತಿದ್ದರು. ಆದರೆ, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಇಡೀ ರಾಜ್ಯದ ಎಲ್ಲಾ ಸಮುದಾಯದ ಜನರು ಬಿಜೆಪಿ ಪರ ಒಲವು ವ್ಯಕ್ತಪಡಿಸುತ್ತಿದ್ದಾರೆ ಎಂದರು.