ಚಳ್ಳಕೆರೆ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ಅವರನ್ನು ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಸಭಾಂಗಣದಲ್ಲಿ ಎಂಎಸ್‌ಎಂಇ ದಿನಾಚರಣೆಯಲ್ಲಿ ಸನ್ಮಾನಿಸಿದರು.
ಚಳ್ಳಕೆರೆ: ಕರ್ನಾಟಕದಲ್ಲಿ ಸಣ್ಣಕೈಗಾರಿಕೆಗಳ ಅಭಿವೃದ್ಧಿಗೆ ಸರ್ಕಾರ ಅನೇಕ ಯೋಜನೆಗಳ ಮೂಲಕ ಆರ್ಥಿಕ ನೆರವು ಒದಗಿಸಲಿದೆ. ನಿಗಮದ ನೂತನ ಅಧ್ಯಕ್ಷ ಶಾಸಕ ಟಿ.ರಘುಮೂರ್ತಿ ಈಗಾಗಲೇ ಅಧಿಕಾರ ಪದಗ್ರಹಣ ಮಾಡಿದ್ದು, ಅವರ ಮಾರ್ಗದರ್ಶನದಲ್ಲಿ ಸಣ್ಣಕೈಗಾರಿಕೆ ಇನ್ನೂ ಹೆಚ್ಚಿನ ಪ್ರಗತಿ ಸಾಧಿಸಲಿದೆ ಎಂದು ಸಣ್ಣಕೈಗಾರಿಕೆ ಮತ್ತು ಸಾರ್ವಜನಿಕ ಉದ್ಯಮಿಗಳ ಸಚಿವ ಶರಣಬಸಪ್ಪ ದರ್ಶನಾಪುರ ತಿಳಿಸಿದರು. ಬೆಂಗಳೂರಿನ ಸಣ್ಣಕೈಗಾರಿಕೆಗಳ ಅಭಿವೃದ್ಧಿ ನಿಗಮದ ಸಭಾಂಗಣದಲ್ಲಿ ಎಂಎಸ್‌ಎಂಇ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದರು. ಇದೇ ವೇಳೆ ನಿಗಮದ ಅಧ್ಯಕ್ಷ ಟಿ.ರಘುಮೂರ್ತಿ ಅವರನ್ನು ಸನ್ಮಾನಿಸಲಾಯಿತು.
ಸಣ್ಣಕೈಗಾರಿಕೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಟಿ.ರಘುಮೂರ್ತಿ ಮಾತನಾಡಿ, ಮಂಡಳಿ ಅಧ್ಯಕ್ಷರಾಗಿ ಅಧಿಕಾರಿ ಸ್ವೀಕರಿಸಿ ಕೇವಲ ಎಂಟು ತಿಂಗಳಾಗಿದೆ, ಮಂಡಳಿ ಹಲವಾರು ಯೋಜನೆಗಳ ಬಗ್ಗೆ ಈಗಾಗಲೇ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಿದ್ದೇನೆ. ರಾಜ್ಯದಲ್ಲಿ ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮ ನಿರೀಕ್ಷೆಗೂ ಮೀರಿ ಎತ್ತರ ಬೆಳೆಯಲಿದೆ ಎಂದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.