ಹೊಸದುರ್ಗ: ಪಟ್ಟಣದ ಎಸ್.ನಿಜಲಿಂಗಪ್ಪ ಶಿಕ್ಷಣ ಸಂಸ್ಥೆಯಿಂದ ಡಿ.10, 11, 12 ರಂದು ಮೂರು ದಿನಗಳ ಕಾಲ ಎಸ್ ನಿಜಲಿಂಗಪ್ಪನವರ ಜನ್ಮದಿನಾಚರಣೆ ಹಾಗೂ ನಿಜಲಿಂಗಪ್ಪ ಸಮೂಹ ಶಿಕ್ಷಣ ಸಂಸ್ಥೆಗಳ ವಾರ್ಷಿಕ ಹಬ್ಬವನ್ನು ಶಿಕ್ಷಣ ಸಂಸ್ಥೆ ಆವರಣದಲ್ಲಿ ಏರ್ಪಡಿಸಲಾಗಿದೆ ಎಂದು ಸಂಸ್ಥೆಯ ಕಾರ್ಯದರ್ಶಿ ಕಲ್ಮಠ ತಿಳಿಸಿದರು.
ಡಿ.10 ರಂದು ಸಂಜೆ 6 ಗಂಟೆಗೆ ವಾರ್ಷಿಕ ಹಬ್ಬದ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಶಾಸಕ ಬಿ.ಜಿ.ಗೋವಿಂದಪ್ಪ ಕಾರ್ಯಕ್ರಮ ಉದ್ಘಾಟಿಸುವರು, ಸಂಸ್ಥೆಯ ಅಧ್ಯಕ್ಷ ಎಂ.ಶಿವಲಿಂಗಪ್ಪ ಅಧ್ಯಕ್ಷತೆ ವಹಿಸುವರು. ಸಂಸ್ಥೆಯ ಕಾರ್ಯದರ್ಶಿ ಎಸ್.ಕಲ್ಮಠ ಪ್ರಾಸ್ತಾವಿಕ ನುಡಿಗಳನ್ನಾಡುವರು. ಸಾಹಿತಿ ಚಿತ್ರದುರ್ಗದ ಜಿ.ಎನ್.ಮಲ್ಲಿಕಾರ್ಜುನಪ್ಪ ಆಶಯ ನುಡಿಗಳನ್ನಾಡುವರು . ನಿವೃತ್ತ ಜಿಲ್ಲಾಧಿಕಾರಿ ಶರಣರ ಸಾಹಿತ್ಯ ಪರಿಷತ್ ಅಧ್ಯಕ್ಷ ಸಿ.ಸೋಮಶೇಖರ್ ಉಪನ್ಯಾಸ ನೀಡುವರು. ವಿಶೇಷ ಆಹ್ವಾನಿತರಾಗಿ ನಿಜಲಿಂಗಪ್ಪ ಅವರ ಪುತ್ರ ಎಸ್.ಎನ್.ಕಿರಣ್ ಶಂಕರ್ ಹಾಗೂ ಪುತ್ರಿ ಪ್ರತಿಭಾದೇವಿ, ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್, ನಿವೃತ್ತ ಡಿಐಜಿ ರಮೇಶ್ ಭಾಗವಹಿಸುವರು ಎಂದು ಮಾಹಿತಿ ನೀಡಿದರು.
ಡಿ.11 ರಂದು ಸಂಜೆ 6 ಗಂಟೆಗೆ ಎರಡನೇ ದಿನದ ಕಾರ್ಯಕ್ರಮದ ಸಾನಿಧ್ಯವನ್ನು ತುಮಕೂರು ಹಿರೇಮಠಾಧ್ಯಕ್ಷ ಶಿವಾನಂದ ಶಿವಾಚಾರ್ಯ ಸ್ವಾಮೀಜಿ ವಹಿಸುವರು. ಸಂಸ್ಥೆಯ ಖಜಾಂಚಿ ಕೆ.ಸಿ.ಮಲ್ಲಿಕಾರ್ಜುನಪ್ಪ ಅಧ್ಯಕ್ಷತೆ ವಹಿಸುವರು. ಉಪಾಧ್ಯಕ್ಷ ಕೆ.ಎಸ್.ಪುಟ್ಟರಾಜು ಆಶಯ ನುಡಿಗಳನ್ನಾಡುವರು. ಹಿರಿಯೂರು ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎಂ.ತಿಪ್ಪೇಸ್ವಾಮಿ ಉಪನ್ಯಾಸ ನೀಡುವರು.ಡಿ.12ರಂದು ಸಂಜೆ 6 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ಸಂಸ್ಥೆಯ ಅಧ್ಯಕ್ಷ ಶಿವಲಿಂಗಪ್ಪ ಅಧ್ಯಕ್ಷತೆ ವಹಿಸುವರು. ಅಕಾಡೆಮಿಕ್ ಡೈರೆಕ್ಟರ್ ಎಂ,ಬಿ,ತಿಪ್ಪೇಸ್ವಾಮಿ ಆಶಯ ನುಡಿಗಳನ್ನಾಡುವರು. ಕುವೆಂಪು ವಿವಿಯ ಕನ್ನಡ ಭಾರತಿ ವಿಭಾಗದ ಪ್ರಾಧ್ಯಾಪಕ ಡಾ.ನೆಲ್ಲಿಕಟ್ಟಿ ಎಸ್.ಸಿದ್ದೇಶ್ ಸಮಾರೋಪ ಭಾಷಣ ಮಾಡುವವರು. ಮುಖ್ಯ ಅತಿಥಿಗಳಾಗಿ ನಿವೃತ್ತ ನ್ಯಾಯಮೂರ್ತಿ ಎಚ್.ಬಿಲ್ಲಪ್ಪ, ವಿದ್ಯಾ ವಿಕಾಸ ಸಂಸ್ಥೆ ಕಾರ್ಯದರ್ಶಿ ಬಿ.ವಿಜಯಕುಮಾರ್, ಕಸಾಪ ಅಧ್ಯಕ್ಷ ಕೆ.ಎಂ.ಶಿವಸ್ವಾಮಿ, ಉದ್ಯಮಿ ಪಟೇಲ್ ಶಿವಕುಮಾರ್ ಡಾ.ಮಂಜುನಾಥ್ ಭಾಗವಹಿಸುವರು ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಸಂಸ್ಥೆಯ ಅಧ್ಯಕ್ಷ ಎಂ.ಶಿವಲಿಂಗಪ್ಪ, ಅಕಾಡೆಮಿಕ್ ಡೈರೆಕ್ಟರ್ ಎಂ.ಬಿ.ತಿಪ್ಪೇಸ್ವಾಮಿ, ನಿರ್ದೇಶಕಿ ವಿಜಯಾಶಿವಲಿಂಗಪ್ಪ ಹಾಜರಿದ್ದರು.