ಕನ್ನಡಪ್ರಭ ವಾರ್ತೆ ತುಮಕೂರು
ನಗರದ ಅಮಾನಿಕೆರೆಯ ಗಾಜಿನ ಮನೆಯಲ್ಲಿ ಅಭಿವೃದ್ಧಿ ಆಯುಕ್ತರು ಹಾಗೂ ನಿರ್ದೇಶಕರು (ಕೈಮಗ್ಗ) ಜವಳಿ ಮಂತ್ರಾಲಯ, ಭಾರತ ಸರ್ಕಾರ, ನವದೆಹಲಿ, ಕರ್ನಾಟಕ ರಾಜ್ಯ ಸಹಕಾರಿ ಕೈಮಗ್ಗ ನೇಕಾರರ ಮಹಾಮಂಡಳ ನಿ., ಕಾವೇರಿ ಹ್ಯಾಂಡ್‌ಲೂಮ್ಸ್, ಬೆಂಗಳೂರು ಹಾಗೂ ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಪಂ ತುಮಕೂರು ಇವರ ಸಂಯುಕ್ತಾಶ್ರಯದಲ್ಲಿ 14 ದಿನಗಳ ಕಾಲ ಏರ್ಪಡಿಸಲಾಗಿರುವ ರಾಜ್ಯ ಹಾತ್‌ಕರ್ಗಾ ವಿಶೇಷ ಕೈಮಗ್ಗ ಮೇಳ ವಸ್ತ್ರ ಭಂಡಾರ-2026ಅನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನೇಕಾರರು ಬಹಳ ಕಷ್ಟಪಟ್ಟು ಬಟ್ಟೆಗಳನ್ನು ನೇಯ್ಗೆ ಮಾಡುತ್ತಾರೆ. ಅವರು ನೇಯ್ಗೆ ಮಾಡುವ ಬಟ್ಟೆಗಳನ್ನು ಪ್ರತಿಯೊಬ್ಬರೂ ಖರೀದಿಸಿ ತೊಟ್ಟರೆ ಆ ಸಮುದಾಯದ ಬೆಳವಣಿಗೆಗೆ ಸಹಕರಿಸಿದಂತಾಗುತ್ತದೆ. ಹಾಗಾಗಿ ನಾವೆಲ್ಲರೂ ಹೆಚ್ಚು ಹೆಚ್ಚು ಖಾದಿ ಬಟ್ಟೆಗಳನ್ನು ಧರಿಸಲು ಮುಂದಾಗಬೇಕು ಎಂದರು.ವ್ಯಕ್ತಿತ್ವದಲ್ಲಿ ತೂಕ ಇದ್ದರೆ ನಾವು ತೊಡುವ ಬಟ್ಟೆಗೂ ಮೌಲ್ಯ ಬರುತ್ತದೆ. ಬಣ್ಣ ಬಣ್ಣದ ಬಟ್ಟೆಗಳಿಂದ ವ್ಯಕ್ತಿಯ ಮೌಲ್ಯ ಹೆಚ್ಚುವುದಿಲ್ಲ ಎಂದು ಅವರು ಹೇಳಿದರು.
ಕೈಮಗ್ಗ ನೇಕಾರ ಸಹಕಾರ ಸಂಘಗಳು/ ಕೈಮಗ್ಗ ನೇಕಾರರಿಂದ ಉತ್ಪಾದಿಸಲ್ಪಟ್ಟ ಕೈಮಗ್ಗ ಉತ್ಪನ್ನಗಳನ್ನು ನೇರವಾಗಿ ಗ್ರಾಹಕರಿಗೆ ತಲುಪಿಸುವುದಾಗಿದೆ. ಈ ಮೂಲಕ ಕೈಮಗ್ಗ ನೇಕಾರರು ಉತ್ಪಾದಿಸಿದ ಉತ್ಪನ್ನಗಳಿಗೆ ಮಾರುಕಟ್ಟೆ ಸೌಲಭ್ಯ ಕಲ್ಪಿಸುವುದು ಹಾಗೂ ನೇಕಾರರಿಗೆ ನಿರಂತರ ಉದ್ಯೋಗ ಕಲ್ಪಿಸುವುದು ಈ ಮೇಳದ ಪ್ರಮುಖ ಉದ್ದೇಶವಾಗಿದೆ ಎಂದರು.
ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು, ಉತ್ತರ ಪ್ರದೇಶ, ಛತ್ತೀಸ್‌ಗಡ, ಜಾರ್ಖಂಡ್, ಹರಿಯಾಣ, ದೆಹಲಿ, ಗೋವಾ, ಜಮ್ಮು ಮತ್ತು ಕಾಶ್ಮೀರ, ಪಶ್ಚಿಮ ಬಂಗಾಳ ಹಾಗೂ ಇತರೆ ರಾಜ್ಯದ ಕೈಮಗ್ಗ ನೇಕಾರರ ಸಂಘದವರು ಮತ್ತು ನೇಕಾರರು ಸೇರಿ ೬೦ ಮಳಿಗೆಗಳನ್ನು ತೆರೆಯಲಾಗಿದ್ದು, ಕೈಮಗ್ಗ ಉತ್ಪನ್ನಗಳ ಮಾರಾಟ ನಡೆಯುತ್ತಿದೆ ಎಂದು ಅವರು ಹೇಳಿದರು.
ಈ ವಿಶೇಷ ಕೈಮಗ್ಗ ಉತ್ಪನ್ನಗಳ ಮೇಳ ೧೪ ದಿನಗಳ ಕಾಲ ನಡೆಯುತ್ತಿದ್ದು, ಮೇಳದಲ್ಲಿ ಜನಸಾಮಾನ್ಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕೈಮಗ್ಗ ಉತ್ಪನ್ನಗಳನ್ನು ಖರೀದಿಸುವ ಮೂಲಕ ನೇಕಾರರಿಗೆ ಉತ್ತೇಜನ ನೀಡಬೇಕು ಎಂದರು.