ತಡರಾತ್ರಿಯಲ್ಲಿ ಬಂದು ಮೃತರ ಸಂಬಂಧಿಕರಿಗೆ ನಿಖಿಲ್ ಸಾಂತ್ವನ

KannadaprabhaNewsNetwork |  
Published : Sep 14, 2025, 01:04 AM IST
13ಎಚ್ಎಸ್ಎನ್17 : ಗಾಯಾಳುಗಳ ಪೋಷಕರಿಗೆ ಸಮಾಧಾನ ಹೇಳಿದ ನಿಖಿಲ್‌ ಕುಮಾರಸ್ವಾಮಿ. | Kannada Prabha

ಸಾರಾಂಶ

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಘಟನೆ ನೋಡಿ ನನಗೆ ಆಘಾತವಾಗಿದೆ. ತಮ್ಮ ಮಕ್ಕಳ ಭವಿಷ್ಯದ ಕನಸು ಕಟ್ಟಿಕೊಂಡಿದ್ದ ಪೋಷಕರ ಕನಸುಗಳು ಕ್ಷಣಾರ್ಧದಲ್ಲಿ ಮಣ್ಣುಪಾಲಾಗಿವೆ. ಅವರ ಮನಸ್ಸಿನ ನೋವಿಗೆ ನಾವು ಯಾರನ್ನೂ ಹೂಣೆ ಮಾಡಲು ಸಾಧ್ಯವಿಲ್ಲ. ದೇವರೇ ಅವರಿಗೆ ಈ ದುಃಖವನ್ನು ಸಹಿಸುವ ಶಕ್ತಿ ನೀಡಲಿ ಎಂದು ಬೇಸರ ವ್ಯಕ್ತಪಡಿಸಿದರು.

ಆರ್ಥಿಕ ಪರಿಸ್ಥಿತಿ ಆಧರಿಸಿ ಹೆಚ್ಚಿನ ಪರಿಹಾರ ನೀಡಿ

ಕನ್ನಡಪ್ರಭ ವಾರ್ತೆ ಹಾಸನತಾಲೂಕಿನ ಮೊಸಳೆಹೊಸಳ್ಳಿ ಗ್ರಾಮದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆಯ ವೇಳೆ ನಡೆದ ಭೀಕರ ದುರಂತದಿಂದಾಗಿ 9 ಯುವಕರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಈ ಹಿನ್ನೆಲೆ ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಶುಕ್ರವಾರ ತಡ ರಾತ್ರಿ ಹಾಸನ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು.

ಅವರು ಮೊದಲು ಜಿಲ್ಲಾಸ್ಪತ್ರೆಯಲ್ಲಿ ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ಅವರ ನೋವಿನಲ್ಲಿ ಪಾಲ್ಗೊಂಡರು. ನಂತರ ಹಿಮ್ಸ್ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳ ಆರೋಗ್ಯ ವಿಚಾರಿಸಿ, ಕುಟುಂಬಸ್ಥರಿಗೆ ಧೈರ್ಯ ತುಂಬಿದರು. ವೈದ್ಯರಿಂದ ಚಿಕಿತ್ಸೆ ಮತ್ತು ಗಾಯಾಳುಗಳ ಪರಿಸ್ಥಿತಿಯ ಕುರಿತು ಮಾಹಿತಿ ಪಡೆದುಕೊಂಡರು.

ಆರ್ಥಿಕ ಪರಿಸ್ಥಿತಿ ಆಧರಿಸಿ ಹೆಚ್ಚಿನ ಪರಿಹಾರ ನೀಡಲಿ:

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಘಟನೆ ನೋಡಿ ನನಗೆ ಆಘಾತವಾಗಿದೆ. ತಮ್ಮ ಮಕ್ಕಳ ಭವಿಷ್ಯದ ಕನಸು ಕಟ್ಟಿಕೊಂಡಿದ್ದ ಪೋಷಕರ ಕನಸುಗಳು ಕ್ಷಣಾರ್ಧದಲ್ಲಿ ಮಣ್ಣುಪಾಲಾಗಿವೆ. ಅವರ ಮನಸ್ಸಿನ ನೋವಿಗೆ ನಾವು ಯಾರನ್ನೂ ಹೂಣೆ ಮಾಡಲು ಸಾಧ್ಯವಿಲ್ಲ. ದೇವರೇ ಅವರಿಗೆ ಈ ದುಃಖವನ್ನು ಸಹಿಸುವ ಶಕ್ತಿ ನೀಡಲಿ ಎಂದು ಬೇಸರ ವ್ಯಕ್ತಪಡಿಸಿದರು.

ಜೀವಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಆದರೂ ಕುಟುಂಬದ ಆರ್ಥಿಕ ಪರಿಸ್ಥಿತಿ ಮನಗಂಡು, ಮಾನವೀಯತೆ ದೃಷ್ಟಿಯಿಂದ ಸರ್ಕಾರವು ಹೆಚ್ಚಿನ ಪರಿಹಾರ ಘೋಷಿಸಬೇಕು. ಮುಖ್ಯಮಂತ್ರಿ ಘೋಷಿಸಿರುವ ೫ ಲಕ್ಷ ರು. ಪರಿಹಾರವನ್ನು ಸ್ವಾಗತಿಸುತ್ತೇನೆ. ಆದರೆ ಇದು ಸಾಕಾಗುವುದಿಲ್ಲ. ತಲಾ ೨೫ ಲಕ್ಷ ರು. ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

ದುರ್ಘಟನೆಯ ವಿಡಿಯೋ ನೋಡಿ ನಾವೆಲ್ಲರೂ ಬೆಚ್ಚಿಬಿದ್ದಿದ್ದೇವೆ. ಇಂತಹ ಘಟನೆ ಮತ್ತೆ ಮರುಕಳಿಸದಂತೆ ಸರ್ಕಾರವು ಈ ಪ್ರಕರಣದ ಕುರಿತು ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

ನಿಖಿಲ್ ಕುಮಾರಸ್ವಾಮಿ ಅವರ ಜೊತೆ ಹಾಸನ ಶಾಸಕರಾದ ಸ್ವರೂಪ್ ಪ್ರಕಾಶ್, ಕೆ.ಆರ್.ಪೇಟೆ ಶಾಸಕರಾದ ಎಚ್.ಟಿ. ಮಂಜು ಸೇರಿದಂತೆ ಹಲವು ಮುಖಂಡರು ಇದ್ದರು.

PREV

Recommended Stories

ಧರ್ಮಸ್ಥಳ ಪ್ರಕರಣ ಮುಚ್ಚಿ ಹಾಕುವ ಯತ್ನ
ತಾಲೂಕು ಆಡಳಿತದ ಬೇಜವಾಬ್ದಾರಿಯಿಂದ ನೀರು ಕಲುಷಿತ