ಕನ್ನಡಪ್ರಭವಾರ್ತೆ ತುರುವೇಕೆರೆ
ಪಟ್ಟಣದ ಜೆಡಿಎಸ್ ಕಚೇರಿಯಲ್ಲಿ ನಿಖಿಲ್ ಕುಮಾರಸ್ವಾಮಿಯವರ ಜನ್ಮದಿನಾಚರಣೆಯನ್ನು ಕೇಕ್ ಕತ್ತರಿಸುವ ಮೂಲಕ ಆಚರಿಸಿದ ಜೆಡಿಎಸ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಜೆಡಿಎಸ್ ಪಕ್ಷದ ಧುರೀಣರಾದ ಎಚ್.ಡಿ.ದೇವೇಗೌಡ ಮತ್ತು ಎಚ್.ಡಿ.ಕುಮಾರಸ್ವಾಮಿಯವರ ಹೆಸರನ್ನು ನಿಖಿಲ್ ಕುಮಾರಸ್ವಾಮಿ ಉಳಿಸುತ್ತಾರೆ. ಪಕ್ಷ ಸಂಘಟನೆಯನ್ನು ಯಶಸ್ವಿಯಾಗಿ ಮುನ್ನೆಡೆಸುತ್ತಿದ್ದಾರೆ. ಮುಂಬರುವ ದಿನಗಳಲ್ಲಿ ರಾಜ್ಯದಲ್ಲಿ ಜೆಡಿಎಸ್ ಪಕ್ಷವನ್ನು ಸಧೃಢಗೊಳಿಸಲು ನಿಖಿಲ್ ಶಕ್ತಿ ಮೀರಿ ಶ್ರಮಿಸುತ್ತಾರೆಂದು ದೊಡ್ಡೇಗೌಡ ಹೇಳಿದರು. ತಾಲೂಕು ಯುವ ಜೆಡಿಎಸ್ ನ ಅಧ್ಯಕ್ಷ ಕೆ.ಮಾವಿನಹಳ್ಳಿ ರಂಜಿತ್ ಮಾತನಾಡಿ ನಿಖಿಲ್ ಕುಮಾರಸ್ವಾಮಿ ಯುವ ಜೆಡಿಎಸ್ ಕಾರ್ಯಕರ್ತರ ಆಶಾಕಿರಣವಾಗಿದ್ದಾರೆ. ಬಹಳ ಚತುರತೆಯಿಂದ ಪಕ್ಷವನ್ನು ಸಂಘಟಿತಗೊಳಿಸುತ್ತಿದ್ದಾರೆ. ಸಂಘಟನಾ ಮನೋಭಾವ ಅವರಲ್ಲಿ ರಕ್ತಗತವಾಗಿ ಬಂದಿದೆ. ರಾಜ್ಯದ ಬಹುತೇಕ ಕಡೆ ಪ್ರವಾಸ ಮಾಡಿರುವ ನಿಖಿಲ್ ಜೆಡಿಎಸ್ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ತುಂಬಿದ್ದಾರೆ. ಎಚ್.ಡಿ.ಕುಮಾರಸ್ವಾಮಿಯವರು ಕೇಂದ್ರದ ಮಂತ್ರಿಯಾಗಿದ್ದಾರೆ. ಅವರು ದೇಶದಲ್ಲೆಡೆ ಸುತ್ತಾಡಿ ಕೈಗಾರಿಕಾ ಕ್ಷೇತ್ರವನ್ನು ಸುಸ್ಥಿತಿಗೆ ತಂದಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ನಿಖಿಲ್ ಕುಮಾರಸ್ವಾಮಿ ರಾಜ್ಯದೆಲ್ಲೆಡೆ ಪ್ರವಾಸ ಮಾಡಿ ಜೆಡಿಎಸ್ ನ್ನು ಮತ್ತಷ್ಟು ಸಧೃಢಗೊಳಿಸುತ್ತಿದ್ದಾರೆ ಎಂದು ಹೇಳಿದರು. ಜೆಡಿಎಸ್ ಮುಖಂಡರಾದ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಎ.ಬಿ.ಜಗದೀಶ್, ಬಡಗರಹಳ್ಳಿ ತ್ಯಾಗರಾಜು, ಎಪಿಎಂಸಿ ಮಾಜಿ ನಿರ್ದೇಶಕ ವಿಜಯೇಂದ್ರ, ಮುನಿಯೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಗೊಟ್ಟೀಕೆರೆ ಪ್ರಕಾಶ್, ಪಿಎಲ್ ಡಿ ಬ್ಯಾಂಕ್ ನಿರ್ದೇಶಕ ಮಾದಿಹಳ್ಳಿ ಕಾಂತರಾಜು, ಕೊಡಗೀಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಹೊಸಳ್ಳಿ ದೇವರಾಜು, ಅಲ್ಪಸಂಖ್ಯಾತರ ಘಟಕದ ಮುಖಂಡ ಜಫ್ರುಲ್ಲಾ, ದಂಡಿನಶಿವರ ರಾಜಕುಮಾರ್, ಮಂಗೀಕುಪ್ಪೆ ಬಸವರಾಜು ಸೇರಿದಂತೆ ಇತರರು ಇದ್ದರು. ಜೆಡಿಎಸ್ ಕಾರ್ಯಕರ್ತರು ನಿಖಿಲ್ ಕುಮಾರಸ್ವಾಮಿಯವರ ಜನ್ಮ ದಿನಾಚರಣೆ ವೇಳೆ ಬೃಹತ್ ಪ್ರಮಾಣದಲ್ಲಿ ಪಟಾಕಿ ಸಿಡಿಸಿದರು. ದೊಡ್ಡ ಪ್ರಮಾಣದ ಕೇಕ್ ಕತ್ತರಿಸಿ ಸಂಭ್ರಮಿಸಿದರು.