ಚನ್ನಪಟ್ಟಣ: ಉಪ ಚುನಾವಣೆಯ ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರವಾಗಿ ಅವರ ಧರ್ಮಪತ್ನಿ ರೇವತಿ ನಿಖಿಲ್ ಕುಮಾರಸ್ವಾಮಿ ಅವರು ಪಟ್ಟಣದಲ್ಲಿ ಪ್ರಚಾರ ನಡೆಸಿದರು.
ವಿದ್ಯಾರ್ಥಿಗಳು ರೇವತಿಯವರ ಜೊತೆಗೆ ಸೆಲ್ಫಿ ತೆಗೆದುಕೊಂಡು ಸಂತಸಪಟ್ಟರು. ಎಲ್ಲರನ್ನೂ ಆತ್ಮೀಯತೆಯಿಂದ ಮಾತನಾಡಿಸಿ, ಅವರ ವಿದ್ಯಾಭ್ಯಾಸದ ಬಗ್ಗೆ ಮಾಹಿತಿ ಪಡೆದು, ಅವರ ಕುಂದುಕೊರತೆಗಳ ಬಗ್ಗೆ ವಿಚಾರಿಸಿದರು.
ನಿಖಿಲ್ ಗೆದ್ದೆ ಗೆಲ್ತಾರೆ:ಈ ವೇಳೆ ಪದವಿ ವಿದ್ಯಾರ್ಥಿನಿಯೊಬ್ಬರು, ಈ ಚುನಾವಣೆಯಲ್ಲಿ ನಿಖಿಲ್ ಅಣ್ಣನ ಗೆಲುವು ಶತಸಿದ್ಧ. ಅಣ್ಣ ಚನ್ನಪಟ್ಟಣ ಕ್ಷೇತ್ರದಿಂದ ಶಾಸಕರಾಗಿ ವಿಧಾನಸಭೆಗೆ ಹೋಗುತ್ತಾರೆ. ಇಡೀ ಯುವ ಸಮುದಾಯ ನಿಖಿಲ್ ಅಣ್ಣನ ಬೆನ್ನಿಗಿದೆ ಎಂದು ಭರವಸೆ ನೀಡಿದರು. ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಪ್ರೀತಿ ಹಾಗೂ ವಿಶ್ವಾಸಕ್ಕೆ ರೇವತಿ ಅವರು ಸಂತಸ ವ್ಯಕ್ತಪಡಿಸಿದರು. ರೇವತಿ ಅವರೊಂದಿಗೆ ರಾಜ್ಯ ಮಹಿಳಾ ಜನತಾದಳ ರಾಜ್ಯಾಧ್ಯಕ್ಷೆ ರಶ್ಮಿ ರಾಮೇಗೌಡ ಹಾಗೂ ಜೆಡಿಎಸ್ ಮಹಿಳಾ ಘಟಕದ ಅನೇಕ ನಾಯಕರು ಜತೆಯಲ್ಲಿದ್ದರು.
4ಕೆಆರ್ ಎಂಎನ್ 1.ಜೆಪಿಜಿಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ಧರ್ಮಪತ್ನಿ ರೇವತಿ ನಿಖಿಲ್ ಕುಮಾರಸ್ವಾಮಿ ಚನ್ನಪಟ್ಟಣದಲ್ಲಿ ಪ್ರಚಾರ ನಡೆಸಿದರು.