ನ್ಯಾಷನಲ್ ಗೇಮ್ಸ್‌ಗೆ ಕರ್ನಾಟಕ ತಂಡದಿಂದ ನಿಖಿಲ್ ಯು.ಕೆ.ಗೌಡ ಆಯ್ಕೆ

KannadaprabhaNewsNetwork |  
Published : Dec 10, 2025, 12:30 AM IST
೯ಕೆಎಂಎನ್‌ಡಿ-೩ನಿಖಿಲ್ ಯು.ಕೆ.ಗೌಡ | Kannada Prabha

ಸಾರಾಂಶ

೧೯ ವರ್ಷದೊಳಗಿನ ರಾಜ್ಯ ಮಟ್ಟದ ಲಾನ್ ಟೆನ್ನಿಸ್ ಟೂರ್ನ್‌ಮೆಂಟ್‌ನಲ್ಲಿ ಭಾಗವಹಿಸಿದ್ದ ಮಂಡ್ಯ ತಂಡ ದ್ವಿತೀಯ ಸ್ಥಾನ ಪಡೆದಿದ್ದು, ದೆಹಲಿಯಲ್ಲಿ ನಡೆಯಲಿರುವ ರಾಷ್ಟ್ರೀಯ ಪಂದ್ಯಾವಳಿಗೆ ಕರ್ನಾಟಕ ತಂಡವನ್ನು ಪ್ರತಿನಿಧಿಸಲಿದ್ದಾರೆ.

ಕನ್ನಡಪ್ರಭ ವಾರ್ತೆ ಮಂಡ್ಯ

ರಾಯಚೂರಿನಲ್ಲಿ ಡಿ.೧೨ರಂದು ನಡೆದ ೧೯ ವರ್ಷದೊಳಗಿನ ರಾಜ್ಯ ಮಟ್ಟದ ಲಾನ್ ಟೆನ್ನಿಸ್ ಟೂರ್ನ್‌ಮೆಂಟ್‌ನಲ್ಲಿ ಭಾಗವಹಿಸಿದ್ದ ಮಂಡ್ಯ ತಂಡ ದ್ವಿತೀಯ ಸ್ಥಾನ ಪಡೆದಿದೆ.

ಪಿಇಟಿ ಟಾಪ್ ಸರ್ವ್ ಟೆನ್ನಿಸ್ ಅಕಾಡೆಮಿಯ ನಿಖಿಲ್ ಯು.ಕೆ.ಗೌಡ ಉತ್ತಮ ಪ್ರದರ್ಶನ ನೀಡಿ ದೆಹಲಿಯಲ್ಲಿ ನಡೆಯಲಿರುವ ರಾಷ್ಟ್ರೀಯ ಪಂದ್ಯಾವಳಿಗೆ ಕರ್ನಾಟಕ ತಂಡವನ್ನು ಪ್ರತಿನಿಧಿಸಲಿದ್ದಾರೆ. ಪಿಇಎಸ್ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ನಿಖಿಲ್ ಸಾಧನೆಗೆ ಪಿಇಟಿ ಟ್ರಸ್ಟ್ ಅಧ್ಯಕ್ಷ ಕೆ.ಎಸ್.ವಿಜಯ್‌ಆನಂದ್, ಪೋಷಕರಾದ ಉಮೇಶ್ ಹಾಗೂ ಶೋಭಾ, ಕೋಚ್ ಮಂಜುನಾಥ್ ಹರ್ಷ ವ್ಯಕ್ತಪಡಿಸಿದ್ದಾರೆ.

ಮದ್ದೂರು ನಗರಸಭೆ ಪೌರಾಯುಕ್ತರಾಗಿ ಎಸ್.ಎನ್.ರಾಧಿಕಾ ನೇಮಕ

ಕನ್ನಡಪ್ರಭ ವಾರ್ತೆ ಮಂಡ್ಯ

ಮದ್ದೂರು ನಗರಸಭೆಯ ನೂತನ ಪೌರಾಯುಕ್ತರಾಗಿ ಎಸ್.ಎನ್.ರಾಧಿಕಾ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ. ಸ್ಥಳ ನಿರೀಕ್ಷಣೆಯಲ್ಲಿದ್ದ ರಾಧಿಕಾ ಅವರನ್ನು ನೂತನವಾಗಿ ಪರಿವರ್ತನೆಗೊಂಡಿರುವ ಮದ್ದೂರು ನಗರಸಭೆ ಆಯುಕ್ತರ ಹುದ್ದೆಗೆ ಸಾರ್ವಜನಿಕ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದಲೇ ಜಾರಿಗೆ ಬರುವಂತೆ ನೇಮಿಸಲಾಗಿದೆ ಎಂದು ನಗರಾಭಿವೃದ್ಧಿ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಟಿ.ಮಂಜುನಾಥ ಆದೇಶಿಸಿದ್ದಾರೆ.

ಹಲಗೂರಿನಲ್ಲಿ ಇಂದು ಆರೋಗ್ಯ ಉಚಿತ ತಪಾಸಣಾ ಶಿಬಿರ

ಹಲಗೂರು: ಇಲ್ಲಿನ ಚನ್ನಪಟ್ಟಣ ರಸ್ತೆಯಲ್ಲಿರುವ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ತಜ್ಞ ವೈದ್ಯರ ಉಚಿತ ಆರೋಗ್ಯ ತಪಾಸಣೆ ಶಿಬಿರ ಬುಧವಾರ (ಡಿ.೧೦) ನಡೆಯಲಿದೆ.

ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಪಿ.ಎಂ.ನರೇಂದ್ರಸ್ವಾಮಿ ಮಾರ್ಗದರ್ಶನದಲ್ಲಿ ತಜ್ಞ ವೈದ್ಯರ ಪಡೆ ಹೋಬಳಿ ಮಟ್ಟದ ಕಡೆಗೆ ಎಂಬ ಘೋಷವಾಕ್ಯದೊಡನೆ ಶಿಬಿರವನ್ನು ಆಯೋಜಿಸಲಾಗಿದೆ.

ಬೆಳಗ್ಗೆ ೯ ಗಂಟೆಯಿಂದ ಸಂಜೆ ೪ ರವರೆಗೆ ನಡೆಯಲಿದೆ. ಶಿಬಿರದಲ್ಲಿ ಹೃದಯ ತಜ್ಞರು, ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರು ಮತ್ತು ಮಕ್ಕಳ ತಜ್ಞರು ಭಾಗವಹಿಸುವರು. ಹಲಗೂರು ಮತ್ತು ಸುತ್ತಮುತ್ತಲಿನ ಗ್ರಾಮಗಳ ಜನರು ಈ ಶಿಬಿರದ ಸದುಪಯೋಗ ಪಡೆದುಕೊಳ್ಳುವಂತೆ ಹಲಗೂರು ಆಸ್ಪತ್ರೆ ವೈದ್ಯಾಧಿಕಾರಿ ಸೌಮ್ಯಶ್ರೀ ಮನವಿ ಮಾಡಿದ್ದಾರೆ.

ಇಂದು ವಿದ್ಯುತ್ ವ್ಯತ್ಯಯ

ಶ್ರೀರಂಗಪಟ್ಟಣ:

ಪಟ್ಟಣ ಸೇರಿದಂತೆ ವಿವಿಧೆಡೆ 66/11 ಕೆವಿ ವಿದ್ಯುತ್ ಉಪ-ವಿತರಣ ಕೇಂದ್ರದ ತ್ರೈಮಾಸಿಕ ನಿರ್ವಹಣಾ ಕಾರ್ಯ ಇರುವುದರಿಂದ ಡಿ.10 ರಂದು ವಿವಿಧೆಡೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗುವುದಾಗಿ ಎಇಇ ಮಂಜುನಾಥ್ ಪ್ರಸಾದ್ ಪ್ರಕಟಣೆಯ ತಿಳಿಸಿದ್ದಾರೆ.

ಬೆಳಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ಶ್ರೀರಂಗಪಟ್ಟಣ, ಗಂಜಾಂ, ಮಂಡ್ಯ ವಾಟರ್ ಸಪ್ಲೆ, ಪಾಂಡವಪುರ ವಾಟರ್ ಸಪ್ಲೆ, ನಗುವನಹಳ್ಳಿ, ಬೆಳವಾಡಿ, ಬೊಮ್ಮೂರು ಅಗ್ರಹಾರ, ಕಿರಂಗೂರು, ಕೆ.ಶೆಟ್ಟಹಳ್ಳಿ, ಶ್ರೀನಿವಾಸ ಅಗ್ರಹಾರ, ಚಂದಗಾಲು, ದರಸಗುಪ್ಪೆ, ಚಿಂದಗಿರಿಕೊಪ್ಪಲು ಸೇರಿದಂತೆ ಸುತ್ತ ಮುತ್ತಲಿನ ಗ್ರಾಮಗಳಿಗೆ ವಿದ್ಯುತ್ ವ್ಯತ್ಯಾಯವಾಗಲಿದೆ. ಗ್ರಾಹಕರು ಹಾಗೂ ಸಾರ್ವಜನಿಕರು ಸಹಕರಿಸುವಂತೆ ಅವರು ಮನವಿ ಮಾಡಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕುಸಿದ ಕರ್ನಾಟಕ ಕ್ರಿಕೆಟ್‌ ಗುಣಮಟ್ಟ - ಈ ಸಲ 7 ಟಿ20ಯಲ್ಲಿ ಗೆದ್ದಿದ್ದು ಕೇವಲ 2
ಬುರುಡೆ ಕೇಸ್‌ ಹಿಂದೆ ಅರ್ಬನ್‌ ನಕ್ಸಲ್‌ : ಬಿಜೆಪಿ