ಕಾಪು ದೇವಳಗಳಿಗೆ ನಿರ್ಮಲಾ ಭೇಟಿ: ಕೇಂದ್ರ ಸಚಿವೆಗೆ ದೇವಿಯ ಸೀರೆ ಪ್ರಸಾದ

KannadaprabhaNewsNetwork |  
Published : Jun 14, 2026, 02:45 AM IST
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಲದಲ್ಲಿ ಸಚಿವೆಯವರನ್ನು ಸನ್ಮಾನಿಸಲಾಯಿತು | Kannada Prabha

ಸಾರಾಂಶ

ಕಾಪು: ಇಲ್ಲಿನ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಶನಿವಾರ ಬೆಳಿಗ್ಗೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ನೀಡಿದರು. ದೇವಸ್ಥಾನದ ವತಿಯಿಂದ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಪೂರ್ಣ ಕುಂಭ ಸ್ವಾಗತ ನೀಡಲಾಯಿತು.

ಕಾಪು: ಇಲ್ಲಿನ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಶನಿವಾರ ಬೆಳಿಗ್ಗೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ನೀಡಿದರು. ದೇವಸ್ಥಾನದ ವತಿಯಿಂದ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಪೂರ್ಣ ಕುಂಭ ಸ್ವಾಗತ ನೀಡಲಾಯಿತು.

ದೇವಳದ ಪ್ರಧಾನ ಅರ್ಚಕ ಕೆ. ವಿ. ರಾಘವೇಂದ್ರ ಉಪಾಧ್ಯಾಯರು ಶ್ರೀ ಮಹಾಲಕ್ಷ್ಮಿಗೆ ವಿಶೇಷ ಪೂಜೆ ಸಲ್ಲಿಸಿ, ಸಚಿವೆಗೆ ಪ್ರಸಾದ ಹಸ್ತಾಂತರಿಸಿದರು. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್ ಸಚಿವೆೆಯವರನ್ನು ದೇವಳದ ವತಿಯಿಂದ ಸನ್ಮಾನಿಸಿದರು.

ಇದೇ ಸಂದರ್ಭದಲ್ಲಿ ನಿರ್ಮಲಾ ಸೀತಾರಾಮನ್ ಅವರು ಭೇಟಿಯ ಸ್ಮರಣಾರ್ಥ ದೇವಳದ ಆವರಣದಲ್ಲಿ ಸಸಿಯೊಂದನ್ನು ನೆಟ್ಟು ನೀರೆರೆದರು. ಈ ಸಂದರ್ಭ ದೇವಳದ ಆಡಳಿತ ಮಂಡಳಿ ಅಧ್ಯಕ್ಷ ಗಿರಿಧರ್ ಸುವರ್ಣ, ಪ್ರಧಾನ ಕಾರ್ಯದರ್ಶಿ ಶರಣ್ ಕುಮಾರ್ ಮಟ್ಟು, ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಯಶ್ಪಾಲ್ ಸುವರ್ಣ, ವಿಪ ಸದಸ್ಯ ಡಾ. ಧನಂಜಯ ಸರ್ಜಿ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ದೇವಳದ ಪ್ರಧಾನ ಪ್ರಬಂಧಕ ಸತೀಶ್ ಮತ್ತಿತರರು ಉಪಸ್ಥಿತರಿದ್ದರು.

ಕಾಪು ಮಾರಿಗುಡಿಗೆ ಭೇಟಿ: ಉಚ್ಚಿಲ ಕ್ಷೇತ್ರಕ್ಕೆ ಭೇಟಿಗೆ ಮೊದಲು ಕಾಪು ಹೊಸ ಮಾರಿಗುಡಿಗೂ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ನೀಡಿದರು. ಮಾರಿಗುಡಿಯ ಪ್ರಧಾನ ತಂತ್ರಿ ಕುಮಾರಗುರು ತಂತ್ರಿ ಕೊರಂಗ್ರಪಾಡಿ, ಪ್ರಧಾನ ಅರ್ಚಕ ಶ್ರೀನಿವಾಸ ತಂತ್ರಿ ಕಲ್ಯ ಅವರು ಮಾರಿಯಮ್ಮನಿಗೆ ವಿಶೇಷ ಪುಜೆ ಸಲ್ಲಿಸಿ, ಪ್ರಸಾದ ರೂಪದಲ್ಲಿ ದೇವಿಯ ಸೀರೆಯನ್ನು ನೀಡಿದರು. ಮಾರಿಗುಡಿ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ, ಕಾರ್ಯನಿರ್ವಹಣಾಧಿಕಾರಿ ರವಿಕಿರಣ್, ಪ್ರಬಂಧಕ ಗೋವರ್ಧನ್ ಸೇರಿಗಾರ್ ಮತ್ತಿತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಿಕ್ಷಣದಿಂದ ದೇಶದ ಬೆಳವಣಿಗೆ ಸಾಧ್ಯ: ಅಂಬೆಕಲ್ಲು ಪ್ರಿಯ ನವೀನ್
ಉಡುಪಿ ಕೃಷ್ಣಮಠಕ್ಕೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮ್ ಭೇಟಿ