;Resize=(412,232))
ಕನ್ನಡಪ್ರಭ ವಾರ್ತೆ ರಾಮನಗರ
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಕೆಲ ತಿಂಗಳ ಹಿಂದಷ್ಟೇ ನಿಶಾಯೋಗೇಶ್ವರ್ ಭೇಟಿ ಮಾಡಿದ್ದರು. ಬಳಿಕ ಬಿಎಂಐಸಿಪಿ ಅಧ್ಯಕ್ಷರಾಗಿ ಚನ್ನಪಟ್ಟಣ ಕಾಂಗ್ರೆಸ್ ಮುಖಂಡ ರಘುನಂದನ್ ರಾಮಣ್ಣ ಅಧಿಕಾರ ಸ್ವೀಕಾರದ ಸಮಯದಲ್ಲಿ ಸಹ ಸಂಸದ ಡಿ.ಕೆ.ಸುರೇಶ್ ಜೊತೆಗೆ ನಿಶಾ ಕಾಣಿಸಿಕೊಂಡಿದ್ದು ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು.
ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡಿದ ನಿಶಾ ಯೋಗೇಶ್ವರ್, ಚನ್ನಪಟ್ಟಣದ ಅಭಿವೃದ್ಧಿಗಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದೇನೆ. ಸೇರ್ಪಡೆ ದಿನಾಂಕ ಇನ್ನೂ ನಿಗದಿಯಾಗಿಲ್ಲ. ನನ್ನ ಸೇರ್ಪಡೆಯಿಂದ ಯಾರಿಗೆ ಲಾಭವಾಗುತ್ತದೋ ಗೊತ್ತಿಲ್ಲ. ಸೇರ್ಪಡೆಯಾದ ಬಳಿಕ ಕಾಂಗ್ರೆಸ್ ಪರವಾಗಿ ಪ್ರಚಾರ ಮಾಡುತ್ತೇನೆ ಎಂದು ತಿಳಿಸಿದ್ದಾರೆ.ನನ್ನ ತಂದೆ ಸಹ ಮತವೂ ಇದೆ:
ನನ್ನ ತಂದೆಯವರು ಸ್ವತಂತ್ರ್ಯವಾಗಿ ರಾಜಕಾರಣ ಮಾಡಿದವರು. ನನ್ನ ರಾಜಕೀಯ ಬೆಳವಣಿಗೆಗೂ ಅವರು ಅಡ್ಡಿಪಡಿಸುವುದಿಲ್ಲ. ನನಗೆ ಕಾಂಗ್ರೆಸ್ ಸೇರುವುದು ಒಳ್ಳೆಯದು ಅನಿಸುತ್ತಿದೆ. ಅದರಿಂದಾಗಿ ನಾನು ಕಾಂಗ್ರೆಸ್ ಸೇರುತ್ತಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.
ನಾನು ಕಾಂಗ್ರೆಸ್ ಸೇರುತ್ತಿರುವುದರ ಹಿಂದೆ ಚನ್ನಪಟ್ಟಣದ ಅಭಿವೃದ್ಧಿಯೇ ಮುಖ್ಯಕಾರಣ. ಎಲ್ಲರೂ ಚನ್ನಪಟ್ಟಣದ ಅಭಿವೃದ್ಧಿ ಬಗ್ಗೆ ಮಾತನಾಡುತ್ತಾರೆ. ಆದರೆ, ಚನ್ನಪಟ್ಟಣದಲ್ಲಿ ಅಭಿವೃದ್ಧಿ ಏನೂ ಆಗಿಲ್ಲ. ಉದ್ಯೋಗ ಸಮಸ್ಯೆ ಸಾಕಷ್ಟಿದೆ. ನಾಲ್ಕೈದು ಕಂಪನಿಗಳನ್ನು ತರಲು ಸಾಧ್ಯವಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಕಾಂಗ್ರೆಸ್‌ನಿಂದ ಬೆಂಬಲ ಸಿಕ್ಕರೆ, ಟಿಕೆಟ್ ಸಿಕ್ಕರೆ ನಾನು ಕಾಂಗ್ರೆಸ್‌ನಿಂದಲೇ ಸೇವೆ ಮಾಡುತ್ತೇನೆ ಎಂದು ಹೇಳುವ ಮೂಲಕ ಬಿಜೆಪಿ ನಾಯಕ ಸಿ.ಪಿ.ಯೋಗೇಶ್ವರ್ ಪುತ್ರಿ ನಿಶಾಯೋಗೇಶ್ವರ್ ಚನ್ನಪಟ್ಟಣ ಉಪಚುನಾವಣೆಗೆ ಸ್ಪರ್ಧೆಮಾಡುವ ಸುಳಿವು ನೀಡಿದ್ದಾರೆ.