ಮೂಡುಬಿದಿರೆಯ ಅನುಷಾ ಆಚಾರ್ ಸ್ಟಾರ್ಟಪ್‌ಗೆ ನೀತಿ ಆಯೋಗ ಮನ್ನಣೆ !

KannadaprabhaNewsNetwork |  
Published : Jul 21, 2026, 03:00 AM IST
ಅನುಷಾ ಆಚಾರ್ | Kannada Prabha

ಸಾರಾಂಶ

ಬಾಣಂತನ ಹಂತದಲ್ಲಿ ಪರಂಪರೆಯ ಲೇಹ, ಉಪಚಾರದ ಆಹಾರವನ್ನು ನಾವೀನ್ಯತೆಯೊಂದಿಗೆ ಉಳಿಸಿ ಬೆಳೆಸುವ ಸಣ್ಣ ಪ್ರಯತ್ನಕ್ಕೆ ಸ್ಟಾರ್ಟಪ್‌ ಮೂಲಕ ಮುಂದಾದವರು ಮೂಡುಬಿದಿರೆಯ ಅನುಷಾ ಆಚಾರ್. ಇದೀಗ ಭಾರತದ ನೀತಿ ಆಯೋಗದ ಅಟಲ್ ಇನ್ನೋವೇಶನ್ ಮಿಶನ್ (ಎಐಎಂ) ರಾಷ್ಟ್ರಮಟ್ಟದಲ್ಲಿನ ತಳಮಟ್ಟದ ನಾವೀನ್ಯತೆಯ ಕೊಡುಗೆಗಾಗಿ ಕೊಡಮಾಡುವ 2026ನೇ ಸಾಲಿನ ಆಯ್ದ 26 ರಾಷ್ಟ್ರಮಟ್ಟದ ಸಾಧಕರ ಪೈಕಿ ಅನುಷಾ ಅವರ ‘ಮಾವೇದಾಸ್’ ಆಯ್ಕೆಯಾಗಿದೆ.

ಗಣೇಶ್ ಕಾಮತ್, ಮೂಡುಬಿದಿರೆ: ಬಾಣಂತನ ಹಂತದಲ್ಲಿ ಪರಂಪರೆಯ ಲೇಹ, ಉಪಚಾರದ ಆಹಾರವನ್ನು ನಾವೀನ್ಯತೆಯೊಂದಿಗೆ ಉಳಿಸಿ ಬೆಳೆಸುವ ಸಣ್ಣ ಪ್ರಯತ್ನಕ್ಕೆ ಸ್ಟಾರ್ಟಪ್‌ ಮೂಲಕ ಮುಂದಾದವರು ಮೂಡುಬಿದಿರೆಯ ಅನುಷಾ ಆಚಾರ್. ಇದೀಗ ಭಾರತದ ನೀತಿ ಆಯೋಗದ ಅಟಲ್ ಇನ್ನೋವೇಶನ್ ಮಿಶನ್ (ಎಐಎಂ) ರಾಷ್ಟ್ರಮಟ್ಟದಲ್ಲಿನ ತಳಮಟ್ಟದ ನಾವೀನ್ಯತೆಯ ಕೊಡುಗೆಗಾಗಿ ಕೊಡಮಾಡುವ 2026ನೇ ಸಾಲಿನ ಆಯ್ದ 26 ರಾಷ್ಟ್ರಮಟ್ಟದ ಸಾಧಕರ ಪೈಕಿ ಅನುಷಾ ಅವರ ‘ಮಾವೇದಾಸ್’ ಆಯ್ಕೆಯಾಗಿದೆ. ಕರ್ನಾಟಕ ರಾಜ್ಯದಿಂದ ಆಯ್ಕೆಯಾಗಿರುವ ದಕ್ಷಿಣ ಕನ್ನಡದಿಂದ ಮಾತ್ರ ಆಯ್ಕೆಯಾಗಿರುವ ಇಬ್ಬರು ಸಾಧಕರ ಪೈಕಿ ಅನುಷಾ ಒಬ್ಬರು ಎನ್ನುವುದೂ ವಿಶೇಷ. ಇದೇಜು.31 ರಂದು ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಸಾಧಕರನ್ನು ಗೌರವಿಸುವ ಸಮಾರಂಭದಲ್ಲಿ ಅನುಷಾ ಆಚಾರ್ ಆಹ್ವಾನಿತರಾಗಿದ್ದಾರೆ.

ದೇಶದ 250ಕ್ಕೂ ಅಧಿಕ ನಾವೀನ್ಯತೆಯ ಸ್ಟಾರ್ಟ್ ಅಪ್ ಗಳವರು ಈ ಸ್ಪರ್ಧಾ ಕಣದಲ್ಲಿದ್ದು ಅಂತಿಮ ಹಂತದಲ್ಲಿ 26 ಮಂದಿಗೆ ಈ ಸಾಲಿನ ರಾಷ್ಟ್ರೀಯ ಮನ್ನಣೆ ದೊರೆಯುತ್ತಿದೆ. ಮೂಲತಃ ಕುಂದಾಪುರದವರಾದ ಅನುಷಾ ಬಿಇ ಇಲೆಕ್ಟ್ರಿಕಲ್ ಪದವೀಧರೆ. ಆದರೆ ದೇಸೀ ಆಹಾರ, ಅದರಲ್ಲೂ ಬಾಣಂತಿ ಆರೈಕೆಯ ಆಹಾರಾದಿ ಕುರಿತ ವಿಶೇಷ ಆಸಕ್ತಿಯಿಂದ ಅವೆಲ್ಲವನ್ನೂ ತಯಾರಿಸುವುದನ್ನೂ ಕಲಿತು ಮುಂದಿನ ಪೀಳಿಗೆಗೆ ಈ ಪರಂಪರೆ ಉಳಿಸುವ ಅವರ ಪ್ರಯತ್ನಕ್ಕೆ ಇದೀಗ ಬೆಂಬಲ ದೊರೆತಂತಾಗಿದೆ. ಮೆಂತೆ ಸತ್ವ, ಬಾಣಂತಿ ಲೇಹ, ಬೆಳ್ಳುಳ್ಳಿ ಲೇಹ, ಮೆಂತೆ ಲಡ್ಡು ಈಗಾಗಲೇ ‘ಮಾ ವೇದಾಸ್’ ಮೂಲಕ ಜನತೆಗೆ ಲಭ್ಯವಾಗುತ್ತಿದೆ. ಮುಂದೆ ಬೇಬಿ ಫುಡ್ ಸಹಿತ ಇನ್ನಷ್ಟು ಹೊಸ ಆಹಾರ ವೈವಿಧ್ಯಗಳೊಂದಿಗೆ ಕನಸಿನ ಯೋಜನೆ ವಿಸ್ತರಿಸುವ ಅನುಷಾ ಅವರ ಕನಸಿಗೆ ಈ ಗೌರವ ಸ್ಫೂರ್ತಿ ತುಂಬಿದೆ.

2025ರ ಜು.18 ರಂದು ಆರಂಭಗೊಂಡು ಈಗಷ್ಟೇ ವರ್ಷ ತುಂಬಿರುವ ಮಾ ವೇದಾಸ್ ಹೆಸರಿಗೆ ಅನುಗುಣವಾಗಿ ಅಮ್ಮ ಮತ್ತು ಪರಂಪರೆಯ ಕಾಳಜಿ ಹೊಂದಿದೆ. ಬಾಯ್ಲರ್ ಮತ್ತು ರೈಸ್ ಮಿಲ್ ತಂತ್ರಜ್ಞಾನದಲ್ಲಿ ಜಾಗತಿಕವಾಗಿ ಗುರುತಿಸಿಕೊಂಡ ಎಸ್.ಕೆ. ಎಫ್ ಉದ್ಯಮ ಸಮೂಹದ ಜಿ.ರಾಮಕೃಷ್ಣ ಆಚಾರ್ ಅವರ ಪುತ್ರ ಪ್ರಜ್ವಲ್ ಆಚಾರ್ ಅವರ ಪತ್ನಿ ಅನುಷಾ ಅವರ ಪರಂಪರೆಯ ಕುರಿತಾದ ಪ್ರೀತಿ , ಕಾಳಜಿಯ ಪ್ರಯತ್ನಕ್ಕೆ ಸಂದಿರುವ ಈ ರಾಷ್ಟ್ರೀಯ ಗೌರವ ಕರಾವಳಿಯ ಕನ್ನಡತಿಯೋರ್ವರ ಹೆಮ್ಮೆಯ ಸಾಧನೆ ಎನ್ನುವುದು ವಿಶೇಷ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೈತಪರ ಯೋಜನೆ ಸ್ಥಗಿತ ಖಂಡಿಸಿ ಪ್ರತಿಭಟನೆ
ಶೇ.33ರಷ್ಟು ಮಹಿಳಾ ಮೀಸಲಾತಿಗೆ ಇಂದು ರಾಜಭವನ ಚಲೋ