ಕಾರ್ಕಳ: ರಕ್ತಮಾಡುವುದರಿಂದ ನಾವು ಇನ್ನೊಬ್ಬರ ಜೀವ ಉಳಿಯಲು ಕಾರಣರಾಗುತ್ತೇವೆ. ಮಾನವ ಜೀವನದಲ್ಲಿ ರಕ್ತದಾನವೆಂಬ ಪುಣ್ಯಕಾರ್ಯದಲ್ಲಿ ನಾವು ಪಾಲ್ಗೊಳ್ಳಬೇಕು ಎಂದು ಲಯನ್ಸ್ ಜಿಲ್ಲೆ ೩೧೭ಸಿಯ ಜಿಲ್ಲಾ ೨ನೇ ವೈಸ್ ಗವರ್ನರ್ ಪಿ.ಎಂ.ಜೆ.ಎಫ್ ಲಯನ್ ಹರಿಪ್ರಸಾದ್ ರೈ ಹೇಳಿದರು.
ಅವರು ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ, ರೆಡ್‌ಕ್ರಾಸ್ ಸೊಸೈಟಿ, ೬ (ಕೆಎಆರ್) ನೇವಿ ಎನ್‌ಸಿಸಿ ಸಬ್‌ಯುನಿಟ್ ನಿಟ್ಟೆ, ಮೆಕಾನಿಕಲ್ ವಿಭಾಗದ ಎಐಎಂಎಸ್ ಘಟಕ, ರೋಟರಿ ಕ್ಲಬ್ ನಿಟ್ಟೆ, ಲಯನ್ಸ್ ಕ್ಲಬ್ ಹಿರಿಯಡ್ಕ, ಲಯನ್ಸ್ ಕ್ಲಬ್ ಬಪ್ಪನಾಡು, ಎಚ್‌ಡಿಎಫ್‌ಸಿ ಬ್ಯಾಂಕ್, ಕೆ.ಎಸ್. ಹೆಗ್ಡೆ ಮೆಡಿಕಲ್ ಕಾಲೇಜು, ನಿಟ್ಟೆ ಗಾಜ್ರಿಯಾ ಆಸ್ಪತ್ರೆ ಮತ್ತು ಉಡುಪಿ ಜಿಲ್ಲಾ ಆಸ್ಪತ್ರೆಯ ಸಂಯುಕ್ತ ಆಶ್ರಯದಲ್ಲಿ ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು.ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ನಿರಂಜನ್ ಎನ್. ಚಿಪ್ಳೂಣ್ಕರ್ ಅಧ್ಯಕ್ಷತೆ ವಹಿಸಿ, ರಕ್ತದಾನ ಶಿಬಿರವು ಒಂದು ಉತ್ತಮ ಯೋಜನೆಯಾಗಿದ್ದು ಇದಕ್ಕೆ ವಿದ್ಯಾರ್ಥಿಗಳ ಬೆಂಬಲ ಅಗತ್ಯ. ಕಾಲೇಜಿನಲ್ಲಿ ಇರುವ ವಿದ್ಯಾರ್ಥಿಗಳ ಸಂಖ್ಯೆಯನ್ನು ಪರಿಗಣಿಸಿ ರಕ್ತದಾನ ಶಿಬಿರವನ್ನು ವರ್ಷಕ್ಕೆ ಎರಡು ಬಾರಿ ನಡೆಸುವ ಬಗ್ಗೆ ಆಶಯವಿದೆ ಎಂದು ತಿಳಿಸಿದರು.
ನಿಟ್ಟೆ ಕ್ಯಾಂಪಸ್ ನಿರ್ವಹಣೆ ಹಾಗೂ ಅಭಿವೃದ್ಧಿ ವಿಭಾಗದ ನಿರ್ದೇಶಕ ಯೋಗೀಶ್ ಹೆಗ್ಡೆ, ನಿಟ್ಟೆ ರೋಟರಿ ಕ್ಲಬ್ ಅಧ್ಯಕ್ಷ ಡಾ. ರಘುನಂದನ್ ಕೆ.ಆರ್., ಹಿರಿಯಡ್ಕ ಲಯನ್ಸ್ ಕ್ಲಬ್ ಅಧ್ಯಕ್ಷ ರಘುವೀರ್ ಶೆಟ್ಟಿಗಾರ್, ಬಪ್ಪನಾಡು ಲಯನ್ಸ್ ಕ್ಲಬ್ ಅಧ್ಯಕ್ಷ ನಿಲ್ ಕುಮಾರ್, ಎಚ್‌ಡಿಎಫ್‌ಸಿ ಬ್ಯಾಂಕ್ ಅಧಿಕಾರಿ ರಾಘವೇಂದ್ರ ನಾಯಕ್, ನಿಟ್ಟೆ ರೆಡ್‌ಕ್ರಾಸ್ ಮುಖ್ಯಸ್ಥ ಡಾ.ಜನಾರ್ದನ್ ನಾಯಕ್, ಎನ್‌ಸಿಸಿ ಆಫೀಸರ್ ಡಾ.ಶಿವಪ್ರಸಾದ್ ಶೆಟ್ಟಿ, ಎಐಎಂಎಸ್ ಸಂಯೋಜಕ ಡಾ.ಮೆಲ್ವಿನ್, ಎನ್‌ಎಸ್‌ಎಸ್ ಅಧಿಕಾರಿ ಡಾ. ಧನಂಜಯ್, ಕೆ.ಎಸ್. ಹೆಗ್ಡೆ ಆಸ್ಪತ್ರೆ ಹಾಗೂ ಉಡುಪಿ ಜಿಲ್ಲಾ ಆಸ್ಪತ್ರೆಯ ವೈದ್ಯರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ವಿದ್ಯಾರ್ಥಿನಿ ಪ್ರತೀಕ್ಷಾ ನಾಯಕ್ ಸ್ವಾಗತಿಸಿದರು. ವಿದ್ಯಾರ್ಥಿನಿ ನಿಧಿ ವಂದಿಸಿದರು. ವಿದ್ಯಾರ್ಥಿನಿ ವರ್ಷಾ ಎನ್. ಕಾರ್ಯಕ್ರಮ ನಿರೂಪಿಸಿದರು.
ಈ ಒಂದು ದಿನದ ರಕ್ತದಾನ ಶಿಬಿರದಲ್ಲಿ ವಿದ್ಯಾರ್ಥಿಗಳು, ಪ್ರಾಧ್ಯಾಪಕ ಹಾಗೂ ಬೋಧಕೇತರ ವರ್ಗದವರ ರಕ್ತದಾನದೊಂದಿಗೆ ೪೭೪ ಯುನಿಟ್ ರಕ್ತವನ್ನು ಸಂಗ್ರಹಿಸಲಾಗಿದೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.