7, 8ರಂದು ನಿಟ್ಟೆ ವಿವಿ 15ನೇ ವಾರ್ಷಿಕ ಘಟಿಕೋತ್ಸವ

KannadaprabhaNewsNetwork |  
Published : Nov 05, 2025, 01:03 AM IST
ನಿಟ್ಟೆ ವಿವಿ ಕುಲಪತಿ ಪ್ರೊ.ಎಂ.ಎಸ್‌. ಮೂಡಿತ್ತಾಯ ಮಾತನಾಡುತ್ತಿರುವುದು. | Kannada Prabha

ಸಾರಾಂಶ

ನಿಟ್ಟೆ ವಿಶ್ವ ವಿದ್ಯಾನಿಲಯದ 15ನೇ ಘಟಿಕೋತ್ಸವ ನ.7ರಂದು ದೇರಳಕಟ್ಟೆ ಕ್ಯಾಂಪಸ್‌ನಲ್ಲಿ ಹಾಗೂ ನ.8ರಂದು ಕಾರ್ಕಳದ ನಿಟ್ಟೆ ಕ್ಯಾಂಪಸ್‌ನಲ್ಲಿ ನಡೆಯಲಿದೆ.

7ರಂದು ದೇರಳಕಟ್ಟೆ, 8ರಂದು ನಿಟ್ಟೆ ಕ್ಯಾಂಪಸ್‌ನಲ್ಲಿ ಕಾರ್ಯಕ್ರಮ, 1999 ಪದವೀಧರರು: ಪ್ರೊ.ಮೂಡಿತ್ತಾಯ

ಕನ್ನಡಪ್ರಭ ವಾರ್ತೆ ಮಂಗಳೂರು

ನಿಟ್ಟೆ ವಿಶ್ವ ವಿದ್ಯಾನಿಲಯದ 15ನೇ ಘಟಿಕೋತ್ಸವ ನ.7ರಂದು ದೇರಳಕಟ್ಟೆ ಕ್ಯಾಂಪಸ್‌ನಲ್ಲಿ ಹಾಗೂ ನ.8ರಂದು ಕಾರ್ಕಳದ ನಿಟ್ಟೆ ಕ್ಯಾಂಪಸ್‌ನಲ್ಲಿ ನಡೆಯಲಿದೆ. ಈ ಎರಡೂ ಕಾರ್ಯಕ್ರಮಗಳಲ್ಲಿ ವಿವಿಧ ನಿಕಾಯಗಳಿಂದ ಒಟ್ಟು 1,999 ಪದವೀಧರರು ಪದವಿ ಸ್ವೀಕರಿಸಲಿದ್ದಾರೆ ಎಂದು ಉಪಕುಲಪತಿ ಪ್ರೊ.ಎಂ.ಎಸ್‌. ಮೂಡಿತ್ತಾಯ ತಿಳಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೊದಲ ಘಟಿಕೋತ್ಸವ ಕಾರ್ಯಕ್ರಮ ನ.7ರಂದು ಬೆಳಗ್ಗೆ 10.30ಕ್ಕೆ ದೇರಳಕಟ್ಟೆಯ ಕೆ.ಎಸ್. ಹೆಗ್ಡೆ ವೈದ್ಯಕೀಯ ಕಾಲೇಜಿನ (ಕ್ಷೇಮ) ನಿಟ್ಟೆ ಮೈದಾನದಲ್ಲಿ ನಡೆಯಲಿದೆ. ಕುಲಾಧಿಪತಿ ಎನ್. ವಿನಯ ಹೆಗ್ಡೆ ಅಧ್ಯಕ್ಷತೆ ವಹಿಸಲಿದ್ದಾರೆ ಭಾರತೀಯ ಸಮುದಾಯ ಆರೋಗ್ಯ ಪ್ರತಿಷ್ಠಾನ (ಪಿಎಚ್‌ಎಫ್‌ಐ)ದ ಗುಡ್‌ ವಿಲ್ ಅಂಬಾಸಿಡರ್ ಹಾಗೂ ದೆಹಲಿಯ ಅಖಿಲ ಭಾರತ ವೈದ್ಯಕೀಯ ಸಂಸ್ಥೆ (ಎಐಐಎಂಎಸ್) ಯ ಹೃದಯ ವಿಜ್ಞಾನ ವಿಭಾಗದ ಮಾಜಿ ಮುಖ್ಯಸ್ಥ ಪ್ರೊ.ಡಾ.ಕೆ. ಶ್ರೀನಾಥ ರೆಡ್ಡಿ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ದಿವಂಗತ ಡಾ. ಮಧುಕರ ಶಾಂತಾರಾಮ ಕೇಕ್ರೆ ಅವರಿಗೆ ಮರಣೋತ್ತರವಾಗಿ ಗೌರವ ಡಾಕ್ಟರೇಟ್ ಪದವಿ ನೀಡಲಾಗುತ್ತಿದೆ. ಅವರು ವೈದ್ಯಕೀಯ ಶಿಕ್ಷಣ, ಸಂಶೋಧನೆ ಹಾಗೂ ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಗೆ ನೀಡಿದ ಕೊಡುಗೆಯನ್ನು ಪರಿಗಣಿಸಿ ಈ ಗೌರವ ನೀಡಲಾಗುತ್ತಿದೆ ಎಂದರು.

ಎರಡನೇ ಘಟಿಕೋತ್ಸವ ಕಾರ್ಯಕ್ರಮ ನ.8ರಂದು ಬೆಳಗ್ಗೆ 10:30ಕ್ಕೆ ಕಾರ್ಕಳದ ನಿಟ್ಟೆಯ ಕ್ಯಾಂಪಸ್‌ನಲ್ಲಿ ನಡೆಯಲಿದೆ. ಕುಲಾಧಿಪತಿ ಎನ್. ವಿನಯ ಹೆಗ್ಡೆ ಅಧ್ಯಕ್ಷತೆ ವಹಿಸಲಿದ್ದಾರೆ. ಕೇರಳದ ಕೇಂದ್ರೀಯ ವಿವಿ ಕುಲಪತಿ ಪ್ರೊ.ಡಾ. ಸಿದ್ದು ಪಿ. ಅಲ್ಗೂರ್‌ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಈ ಎರಡೂ ಕಾರ್ಯಕ್ರಮಗಳಲ್ಲಿ ನಿಟ್ಟೆ ವಿವಿಯ ಸಮ ಕುಲಾಧಿಪತಿಗಳಾದ (ಆಸ್ಪತ್ರೆ ನಿರ್ವಹಣೆ) ಪ್ರೊ.ಡಾ.ಎಂ. ಶಾಂತಾರಾಮ ಶೆಟ್ಟಿ ಹಾಗೂ (ಆಡಳಿತ) ವಿಶಾಲ್ ಹೆಗ್ಡೆ ಉಪಸ್ಥಿತರಿರುತ್ತಾರೆ. ಕುಲಪತಿ ಪ್ರೊ.ಡಾ.ಎಂ.ಎಸ್. ಮೂಡಿತ್ತಾಯ ಸ್ವಾಗತ ಭಾಷಣ ಮಾಡಲಿದ್ದಾರೆ. ಕುಲಸಚಿವ ಪ್ರೊ.ಡಾ. ಹರ್ಷ ಹಾಲಹಳ್ಳಿ, ಪರೀಕ್ಷಾ ನಿಯಂತ್ರಕ ಪ್ರೊ.ಡಾ. ಪ್ರಸಾದ್ ಬಿ. ಶೆಟ್ಟಿ, ನಿಟ್ಟೆ ಕ್ಯಾಂಪಸ್ ಪರೀಕ್ಷಾ ನಿಯಂತ್ರಕ ಡಾ. ಸುಬ್ರಹ್ಮಣ್ಯ ಭಟ್, ವಿಶ್ವವಿದ್ಯಾನಿಲಯದ ವಿವಿಧ ಕಾಲೇಜುಗಳ ಮುಖ್ಯಸ್ಥರು, ಕಾರ್ಯ ನಿರ್ವಾಹಕ ಮತ್ತು ಶೈಕ್ಷಣಿಕ ಮಂಡಳಿ ಸದಸ್ಯರು ಭಾಗವಹಿಸಲಿದ್ದಾರೆ ಎಂದು ಪ್ರೊ.ಮೂಡಿತ್ತಾಯ ತಿಳಿಸಿದರು.ದೇರಳಕಟ್ಟೆ ಕ್ಯಾಂಪಸ್‌ನಲ್ಲಿ ನಡೆಯುವ ಘಟಿಕೋತ್ಸವದಲ್ಲಿ ವೈದ್ಯಕೀಯ, ದಂತ ವೈದ್ಯಕೀಯ ಔಷಧ ವಿಜ್ಞಾನ, ನರ್ಸಿಂಗ್, ಫಿಸಿಯೋಥೆರಪಿ, ಅರೆ ವೈದ್ಯಕೀಯ ವಿಜ್ಞಾನ, ಮಾನವಿಕ, ಜೀವವಿಜ್ಞಾನ, ವಾಸ್ತುಶಿಲ್ಪ ವಾಕ್ ಮತ್ತು ಶ್ರವಣ ಆತಿಥ್ಯ ನಿರ್ವಹಣೆ ನಿಕಾಯಗಳ ಅಡಿಯಲ್ಲಿ ಪದವಿ ಪ್ರದಾನ ಮಾಡಲಾಗುವುದು. ನಿಟ್ಟೆಯಲ್ಲಿ ನಡೆಯುವ ಘಟಿಕೋತ್ಸವದಲ್ಲಿ ಕಂಪ್ಯೂಟ‌ರ್ ಅಪ್ಲಿಕೇಷನ್ಸ್, ಎಂಜಿನಿಯರಿಂಗ್ ಮತ್ತು ಟೆಕ್ನಾಲಜಿ, ವ್ಯವಹಾರ ಆಡಳಿತ, ವಾಣಿಜ್ಯ ಮತ್ತು ನಿರ್ವಹಣೆ ನಿಕಾಯಗಳ ಅಡಿಯಲ್ಲಿ ಪದವಿ ಪ್ರದಾನ ಮಾಡಲಾಗುವುದು. ಒಟ್ಟು 31 ಡಾಕ್ಟೋರಲ್ ಪದವಿಗಳು, 907 ಸ್ನಾತಕೋತ್ತರ ಪದವಿಗಳು, 1054 ಸ್ನಾತಕ ಪದವಿಗಳು, 5 ಫೆಲೋಶಿಪ್‌ಗಳು ಮತ್ತು 2 ಸ್ನಾತಕೋತ್ತರ ಡಿಪ್ಲೊಮಾ ಪದವಿಗಳನ್ನು ಪ್ರದಾನ ಮಾಡಲಾಗುವುದು ಎಂದರು.

ಕುಲಸಚಿವ ಪ್ರೊ.ಡಾ. ಹರ್ಷ ಹಾಲಹಳ್ಳಿ, ಪರೀಕ್ಷಾ ನಿಯಂತ್ರಕ ಪ್ರೊ.ಡಾ. ಪ್ರಸಾದ್ ಬಿ. ಶೆಟ್ಟಿ ಇದ್ದರು.

PREV

Recommended Stories

ಶ್ರೀ ಶ್ರೀ ರವಿಶಂಕರ್‌ಗೆ ವರ್ಲ್ಡ್ ಲೀಡರ್ ಫಾರ್ ಪೀಸ್ ಆ್ಯಂಡ್‌ ಸೆಕ್ಯೂರಿಟಿ ಪ್ರಶಸ್ತಿ
ಹಾಡಹಗಲೇ ಮನೆಗೆ ನುಗ್ಗಿ ಚಹಾ ವ್ಯಾಪಾರಿಯ ಕತ್ತು ಕೊಯ್ದು ಹತ್ಯೆ