ಕ್ರೀಡೆಯಿಂದ ನಾಯಕತ್ವ, ತಂಡಸ್ಫೂರ್ತಿ: ಹರಿಪ್ರಸಾದ್ ರೈ

KannadaprabhaNewsNetwork |  
Published : Mar 13, 2026, 02:45 AM IST
ಅಥ್ಲೆಟಿಕ್ ಚಾಂಪಿಯನ್‌ಶಿಪ್  ಚಾಲನೆ | Kannada Prabha

ಸಾರಾಂಶ

ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಅಂಗಸಂಸ್ಥೆಯಾದ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಭಾಗದಿಂದ ಆಯೋಜಿಸಲಾದ ಇಂಟರ್ ಕಾಲೇಜಿಯೇಟ್ ಅಥ್ಲೆಟಿಕ್ ಚಾಂಪಿಯನ್‌ಶಿಪ್ – 2026 ಕ್ರೀಡಾಕೂಟಕ್ಕೆ ಬುಧವಾರ ನಿಟ್ಟೆಯ ಬಿ.ಸಿ. ಅಳ್ವಾ ಕ್ರೀಡಾಂಗಣದಲ್ಲಿ ಚಾಲನೆ ನೀಡಲಾಯಿತು.

ಕಾರ್ಕಳ: ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಅಂಗಸಂಸ್ಥೆಯಾದ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಭಾಗದಿಂದ ಆಯೋಜಿಸಲಾದ ಇಂಟರ್ ಕಾಲೇಜಿಯೇಟ್ ಅಥ್ಲೆಟಿಕ್ ಚಾಂಪಿಯನ್‌ಶಿಪ್ – 2026 ಕ್ರೀಡಾಕೂಟಕ್ಕೆ ಬುಧವಾರ ನಿಟ್ಟೆಯ ಬಿ.ಸಿ. ಅಳ್ವಾ ಕ್ರೀಡಾಂಗಣದಲ್ಲಿ ಚಾಲನೆ ನೀಡಲಾಯಿತು.ಕಾರ್ಯಕ್ರಮವನ್ನು ಉಡುಪಿ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಷನ್ ಅಧ್ಯಕ್ಷ ಹರಿಪ್ರಸಾದ್ ರೈ ಉದ್ಘಾಟಿಸಿದರು. ಕ್ರೀಡೆ ವಿದ್ಯಾರ್ಥಿಗಳ ದೈಹಿಕ ಸಾಮರ್ಥ್ಯವನ್ನು ಹೆಚ್ಚಿಸುವುದರ ಜೊತೆಗೆ ಶಿಸ್ತು, ನಾಯಕತ್ವ ಹಾಗೂ ತಂಡಭಾವವನ್ನು ಬೆಳೆಸುತ್ತದೆ ಎಂದರು. ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಕ್ರೀಡೆಯಲ್ಲಿಯೂ ಸಮಾನ ಆಸಕ್ತಿ ತೋರಿಸಿ ಸಾಧನೆ ಮಾಡಬೇಕು ಎಂದು ಅವರು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ನಿಟ್ಟೆ ವಿಶ್ವವಿದ್ಯಾಲಯದ ಆಫ್-ಕ್ಯಾಂಪಸ್ ಕೇಂದ್ರದ ನಿರ್ವಹಣೆ ಹಾಗೂ ಅಭಿವೃದ್ಧಿ ವಿಭಾಗದ ನಿರ್ದೇಶಕ ಎ. ಯೋಗೀಶ್ ಹೆಗ್ಡೆ ಮಾತನಾಡಿ, ಕ್ರೀಡಾಕೂಟಗಳು ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವವನ್ನು ಬೆಳೆಸುವ ಪ್ರಮುಖ ವೇದಿಕೆಗಳಾಗಿವೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎನ್‌ಎಂಎಎಂ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ನಿರಂಜನ್ ಎನ್. ಚಿಪ್ಲುಂಕರ್ ವಹಿಸಿದ್ದರು. ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವುದರಿಂದ ಅವರ ಸಮಗ್ರ ವ್ಯಕ್ತಿತ್ವ ವಿಕಸನ ಸಾಧ್ಯವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ಗಣೇಶ್ ಪೂಜಾರಿ ಸ್ವಾಗತಿಸಿದರು. ನಿಟ್ಟೆ ಎಜುಕೇಶನ್ ಟ್ರಸ್ಟ್‌ನ ಕ್ರೀಡಾ ಆಡಳಿತಾಧಿಕಾರಿ ಶ್ಯಾಮ್ ಸುಂದರ್ ಎಂ. ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಂಕರಪುರ ಕ್ಷೇತ್ರ: 31ರಿಂದ ಮುಖ್ಯಪ್ರಾಣ ಶಿಲಾಮೂರ್ತಿ ಬ್ರಹ್ಮಕಲಶೋತ್ಸವ
ಡಾ ಮಂತರ್ ಪ್ರಯತ್ನ: ಕೊಡವ ಹೆರಿಟೇಜ್ ಸೆಂಟರ್ ಶೀಘ್ರ ಲೋಕಾರ್ಪಣೆ