ಕನ್ನಡಪ್ರಭ ವಾರ್ತೆ, ಅರಸೀಕೆರೆ
ಹಾಸನ ಜಿಲ್ಲೆ ಅರಸೀಕೆರೆಯ ತಾಲೂಕು ಕ್ರೀಡಾಂಗಣದಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ತಲಾದಾಯದಲ್ಲಿ ಕರ್ನಾಟಕ ನಂಬರ್ ಒನ್ ಆಗಲು ಗ್ಯಾರಂಟಿಗಳೇ ಕಾರಣ. ಗ್ಯಾರಂಟಿಗಳಿಂದಾಗಿ ಜನರ ಬಳಿ ದುಡ್ಡು ಓಡಾಡುತ್ತಿದೆ. ಇದರಿಂದ ಸರ್ಕಾರಕ್ಕೂ ಆದಾಯ ಬರುತ್ತಿದೆ. ಇದರಿಂದ ಅಭಿವೃದ್ಧಿಯೂ ಆಗುತ್ತಿದೆ. ಆದರೆ, ಅರ್ಥಶಾಸ್ತ್ರದಲ್ಲಿ ವೀಕ್ ಇರುವ ಬಿಜೆಪಿಯವರಿಗೆ ಇದೆಲ್ಲಾ ಎಲ್ಲಿ ಅರ್ಥವಾಗುತ್ತದೆ ಎಂದು ಲೇವಡಿ ಮಾಡಿದರು.
ಗ್ಯಾರಂಟಿಗಳಿಂದ ರಾಜ್ಯದ ಅಭಿವೃದ್ಧಿ ಕುಂಠಿತ ಆಗಿಲ್ಲ. ಇಡೀ ದೇಶದಲ್ಲಿ ತಲಾದಾಯ ಹೆಚ್ಚಳದಲ್ಲಿ ಕರ್ನಾಟಕ ನಂಬರ್ ಒನ್ ಎಂಬುದನ್ನು ವಿಪಕ್ಷಗಳು ಗಮನಿಸಬೇಕು. ಸರ್ಕಾರ ದಿವಾಳಿ ಆಗಿದ್ದರೆ ಜನರ ತಲಾದಾಯ ಹೇಗೆ ಹೆಚ್ಚಾಗುತ್ತಿತ್ತು? ಗ್ಯಾರಂಟಿ ಯೋಜನೆಗಳಿಂದಾಗಿ ಜನರ ಕೊಳ್ಳುವ ಶಕ್ತಿ ಹೆಚ್ಚಾಗಿ ಸರ್ಕಾರಕ್ಕೆ ಬರುವ ಆದಾಯವೂ ಹೆಚ್ಚಾಗಿದೆ ಎಂದು ಗ್ಯಾರಂಟಿ ಯೋಜನೆಯನ್ನು ಸಮರ್ಥಿಸಿಕೊಂಡರು.2 ವರ್ಷದಲ್ಲಿ ಎತ್ತಿನಹೊಳೆ ಪೂರ್ಣ:
ಎತ್ತಿನಹೊಳೆ ಸಾಧ್ಯವೇ ಇಲ್ಲ ಎಂದು ಎಚ್.ಡಿ.ಕುಮಾರಸ್ವಾಮಿ ಹೇಳುತ್ತಿದ್ದರು. ಇದುವರೆಗೆ, ಯೋಜನೆಗೆ ₹17 ಸಾವಿರ ಕೋಟಿ ಖರ್ಚಾಗಿದ್ದು, ಮೊದಲ ಹಂತದ ಕೆಲಸ ಮುಗಿದಿದೆ. 2ನೇ ಹಂತದ ಕೆಲಸ ಆರಂಭವಾಗಿದೆ. ಇನ್ನೂ, ₹6 ಸಾವಿರ ಕೋಟಿ ಬೇಕಿದೆ. ಇನ್ನೆರಡು ವರ್ಷಗಳಲ್ಲಿ ಯೋಜನೆ ಪೂರ್ಣಗೊಳಿಸಿ, 7 ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಸಲಾಗುವುದು ಎಂದು ಹೇಳಿದರು.(ಬಾಕ್ಸ್):
ಸಮಾವೇಶದಲ್ಲಿ ಸಿಎಂ ಭಾಷಣದ ಆರಂಭದಿಂದಲೂ ಜನರು ಶಿವಲಿಂಗೇಗೌಡರನ್ನು ಸಚಿವರನ್ನಾಗಿ ಮಾಡಬೇಕೆಂದು ಘೋಷಣೆ ಕೂಗುತ್ತಿದ್ದರು. ಇದಕ್ಕೆ ಸಿಎಂ ಸಿದ್ದರಾಮಯ್ಯ ಸಮಾಧಾನವಾಗಿಯೇ ಪ್ರತಿಕ್ರಿಯಿಸಿ, ‘ಶಿವಲಿಂಗೇಗೌಡರಿಗೆ ರಾಜಕೀಯ ಭವಿಷ್ಯ ಚೆನ್ನಾಗಿದೆ’ ಎಂದು ಹೇಳುತ್ತಿದ್ದರು. ಆದರೂ, ಸುಮ್ಮನಾಗದ ಕೆಲ ಅಭಿಮಾನಿಗಳು ತಮ್ಮ ಚೀರಾಟ ಮುಂದುವರಿಸಿದರು. ಇದರಿಂದ ಸಿಟ್ಟಾದ ಸಿಎಂ, ಅರ್ಧಕ್ಕೇ ಭಾಷಣ ನಿಲ್ಲಿಸಿ, ಕುರ್ಚಿಯತ್ತ ತೆರಳಿದರು. ಇದರಿಂದ ವೇದಿಕೆಯಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು.
---
-ಸಿದ್ದರಾಮಯ್ಯ, ಮುಖ್ಯಮಂತ್ರಿ.ಯೂರಿಯಾ ಸಿಎಂ ಪ್ರತಿಕ್ರಿಯೆ
-ಸಿದ್ದರಾಮಯ್ಯ, ಮುಖ್ಯಮಂತ್ರಿ.ರಾಕೇಶ್ ಪುಣ್ಯಸ್ಮರಣೆಗಾಗಿ ಮೈಸೂರಿಗೆ ಸಿದ್ದು ಆಗಮನಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಸಂಜೆ ಹಾಸನದಿಂದ ರಸ್ತೆ ಮೂಲಕ ಮೈಸೂರಿಗೆ ಆಗಮಿಸಿದರು. ಅರಸೀಕೆರೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಚಾಲನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಅವರು ಅಲ್ಲಿಂದ ಹೆಲಿಕಾಪ್ಟರ್‌ನಲ್ಲಿ ಆಗಮಿಸಬೇಕಿತ್ತು. ಆದರೆ ಹವಾಮಾನ ವೈಪರೀತ್ಯದಿಂದಾಗಿ ರಸ್ತೆಯ ಮೂಲಕ ಬಂದರು. ಸಿದ್ದರಾಮಯ್ಯ ಅವರ ಹಿರಿಯ ಪುತ್ರ ರಾಕೇಶ್ ಅವರ ಪುಣ್ಯಸ್ಮರಣೆ ಕಾರ್ಯಕ್ರಮ ಭಾನುವಾರ ಬೆಳಗ್ಗೆ ಟಿ. ಕಾಟೂರಿನ ತೋಟದಲ್ಲಿ ಜರುಗಲಿದ್ದು, ಇದರಲ್ಲಿ ಭಾಗವಹಿಸುವ ಸಲುವಾಗಿ ಅವರು ಮೈಸೂರಿಗೆ ಆಗಮಿಸಿದ್ದಾರೆ.