ಪ್ರಯತ್ನವಿಲ್ಲದೇ ಯಾವುದೇ ಸಾಧನೆ ಅಸಾಧ್ಯ: ಡಾ. ಕಲ್ಲನಗೌಡರ

KannadaprabhaNewsNetwork |  
Published : May 27, 2026, 02:45 AM IST
ಸಮಾರಂಭವನ್ನ ಡಾ. ಎಸ್‌.ಸಿ.ಚವಡಿ ಉದ್ಘಾಟಿಸಿದರು. | Kannada Prabha

ಸಾರಾಂಶ

ಹಾಲುಮತ ಸಮಾಜದವರು ನಿಸರ್ಗದ ಅಧ್ಯಯನಶೀಲರು. ಒಂದು ಸಮಾಜ ಜಾಗೃತಿಯಾದಲ್ಲಿ ಆ ಸಮಾಜ ಅಭಿವೃದ್ಧಿ ಹೊಂದುವುದರಲ್ಲಿ ಯಾವುದೇ ಸಂದೇಹವಿಲ್ಲ.

ಮುಳಗುಂದ: ಸಾಧನೆಗೆ ಪ್ರಯತ್ನ ಬೇಕು. ಪ್ರಯತ್ನವೇ ಇಲ್ಲದೆ ಏನನ್ನೂ ಸಾಧಿಸಲು ಸಾಧ್ಯವಿಲ್ಲ. ಸತತ ಅಧ್ಯಯನ, ಪರಿಶ್ರಮ ಯಾರು ಮಾಡುತ್ತಾರೆ, ಅವರು ಯಶಸ್ಸನ್ನು ಕಾಣುತ್ತಾರೆ ಎಂದು ಆರ್‌.ಎನ್‌. ದೇಶಪಾಂಡೆ ಪದವಿ ಕಾಲೇಜಿನ ಪ್ರಾ. ಡಾ. ಆರ್‌.ಎಂ. ಕಲ್ಲನಗೌಡರ ತಿಳಿಸಿದರು.

ಪಟ್ಟಣದ ಕುರಬಗೇರಿ ಓಣಿಯ ಬೀರಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಬೀರಲಿಂಗೇಶ್ವರ ಸೇವಾ ಸಮಿತಿಯಿಂದ ಸೋಮವಾರ ಹಾಲುಮತ ಸಮಾಜದ ಪ್ರತಿಭಾವಂತ ಎಸ್ಸೆಸ್ಸೆಲ್ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಉಪನ್ಯಾಸ ನೀಡಿದರು.

ಹಾಲುಮತ ಸಮಾಜದವರು ನಿಸರ್ಗದ ಅಧ್ಯಯನಶೀಲರು. ಒಂದು ಸಮಾಜ ಜಾಗೃತಿಯಾದಲ್ಲಿ ಆ ಸಮಾಜ ಅಭಿವೃದ್ಧಿ ಹೊಂದುವುದರಲ್ಲಿ ಯಾವುದೇ ಸಂದೇಹವಿಲ್ಲ. ಆಧುನಿಕ ಯುಗದಲ್ಲಿ ತಂತ್ರಜ್ಞಾನ ಬದಲಾದಂತೆ ಹುದ್ದೆಗಳು ಕಡಿತಗೊಳ್ಳುತ್ತವೆ ಎಂಬ ಭಯ ಎಲ್ಲರಲ್ಲೂ ಇರುತ್ತದೆ. ಆದರೆ, ಆ ಭಯ ಬೇಡ. ಮನುಷ್ಯನಿಲ್ಲದೆ ಯಾವುದೇ ತಂತ್ರಜ್ಞಾನ ನಡೆಯುದಿಲ್ಲ. ವಿದ್ಯಾರ್ಥಿಗಳು ಯಾವಾಗಲೂ ಕ್ರಿಯಾಶೀಲರಾಗಿರಬೇಕು ಎಂದರು.

ಗುರು- ಹಿರಿಯರ ಮಾರ್ಗದರ್ಶನದಲ್ಲಿ ನಡೆದವನು ಜೀವನದಲ್ಲಿ ಎಲ್ಲೂ ಸೋಲನ್ನು ಅನುಭವಿಸುವುದಿಲ್ಲ. ಜ್ಞಾನಕ್ಕಿಂತ ಜಗತ್ತಲ್ಲೇ ಯಾವುದು ದೊಡ್ಡದಿಲ್ಲ. ಜೀವನದಲ್ಲಿ ಮೌಲ್ಯ, ಕೌಶಲ್ಯ ಅಳವಡಿಸಿಕೊಳ್ಳಿ ಎಂದರು.

ಸಾನ್ನಿಧ್ಯ ವಹಿಸಿದ್ದ ನೀಲಗುಂದ ಗುದ್ನೇಶ್ವರ ಮಠದ ಪ್ರಭುಲಿಂಗ ದೇವರು ಮಾತನಾಡಿ, ಬೀರಲಿಂಗೇಶ್ವರ ಸೇವಾ ಸಮಿತಿ ಸಮಾಜಮುಖಿ ಕಾರ್ಯ ಹಮ್ಮಿಕೊಂಡಿದ್ದು ಶ್ಲಾಘನೀಯ. ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳು ಸಾಧನೆ ಕಡೆ ಗಮನ ಹರಿಸಿ ಅದಕ್ಕೆ ಬೇಕಾದ ಮಾರ್ಗದರ್ಶನ ಪಡೆದು ನಿರಂತರ ಕಲಿಕೆಯಲ್ಲಿ ತೊಡಗಿಸಿಕೊಂಡು ಭವಿಷ್ಯವನ್ನು ಉಜ್ವಲವಾಗಿ ರೂಪಿಸಿಕೊಳ್ಳಬೇಕು ಎಂದರು.

ಡಾ. ಎಸ್.ಸಿ. ಚವಡಿ ಮಾತನಾಡಿ, ಮಕ್ಕಳು ಹಿರಿಯರನ್ನು ಗೌರವಿಸಬೇಕು. ಓದುವ ಹವ್ಯಾಸವನ್ನು ರೂಢಿಸಿಕೊಳ್ಳಬೇಕು. ಬದಲಾದ ದಿನಮಾನಗಳಲ್ಲಿ ಕಾಲಕ್ಕೆ ತಕ್ಕಂತೆ ಬದಲಾವಣೆಯಾಗುತ್ತಾ ಹೋಗಬೇಕು. ಕಲಿಕೆಯಲ್ಲಿ ಉತ್ತಮ ಸಾಧನೆ ಮಾಡಿದರೆ ಅವಕಾಶಗಳು, ಪ್ರೋತ್ಸಾಹ ತಾವಾಗಿಯೇ ಹುಡುಕಿಕೊಂಡು ಬರುತ್ತವೆ. ಬಡತನ ಒಂದು ಸಮಸ್ಯೆಯಲ್ಲ, ಅದರಿಂದ ಹೊರಗೇ ಬರಬೇಕಾದ ಮಾರ್ಗವನ್ನು ಮಕ್ಕಳು ಕಂಡುಕೊಳ್ಳಬೇಕು. ಅದಕ್ಕೆ ಶಿಕ್ಷಣ ಒಂದೇ ಮಾರ್ಗ ಎಂದರು.

ಈ ವೇಳೆ ನಿವೃತ್ತ ಆರ್‌ಟಿಒ ಅಧಿಕಾರಿ ಬಿ.ಡಿ. ಹರ್ತಿ ಅವರು, ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಎಸ್ಸೆಸ್ಸೆಲ್ಸಿ, ಪಿಯುಸಿಯಲ್ಲಿ ಸಾಧನೆ ಮಾಡಿದ ಸಮಾದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಸಮಾಜದ ಸಾಧಕರನ್ನು ಸನ್ಮಾನಿಸಲಾಯಿತು.

ಸಮಾಜದ ಗುರುಗಳಾದ ಫಕೀರಯ್ಯ ಅಮೋಘಿಮಠ, ಮುಖಂಡರಾದ ಮಹಾಂತೇಶ ನೀಲಗುಂದ, ಮಲ್ಲಪ್ಪ ಕುಂದಗೋಳ, ಬಸವರಾಜ ಬಡ್ನಿ, ಬಿ.ವಿ. ಸುಂಕಾಪುರ, ಅಶೋಕ ಹುಣಸಿಮರದ, ಬಸವರಾಜ ಹಾರೋಗೇರಿ ಸೇರಿದಂತೆ ಸಮಾಜದ ಹಿರಿಯರು, ಯುವಕರು, ಮಹಿಳೆಯರು ಹಾಗೂ ವಿದ್ಯಾರ್ಥಿಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಿಂದೂಗಳು ಒಂದಾಗುವ ಕಾಲ ಸನ್ನಿಹಿತ: ರಾಜು ಖಾನಪ್ಪನವರ
ಗ್ಯಾರಂಟಿ ಯೋಜನೆ ಬಡವರಿಗೆ ತಲುಪಿಸಿ: ನಾಗರಾಜ ಮಡಿವಾಳರ